ಕೊಪ್ಪಳ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸತತ ಐದು ವರ್ಷಗಳಿಂದ ರಾಜ್ಯ ಶಾಖೆ ನೀಡುವ ವಿವಿಧ ಪ್ರಶಸ್ತಿಗೆ ಭಾಜನವಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಮೆಚ್ಚುಗೆ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಕೊಪ್ಪಳ
2021-22ನೇ ಸಾಲಿನಲ್ಲಿ ಅತೀ ಹೆಚ್ಚು ರಕ್ತದಾನ ಶಿಬಿರ ನಡೆಸಿ, ೧೦ ಸಾವಿರ ಯುನಿಟ್ ರಕ್ತ ಸಂಗ್ರಹಣೆ ಮಾಡಿದ ಸಾಧನೆಗಾಗಿ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೊಪ್ಪಳ ಶಾಖೆಗೆ ರಾಜ್ಯಪಾಲ ಥಾವರಚಂದ ಗೆಹಲೋತ್ ಅತ್ಯುತ್ತಮ ಜಿಲ್ಲಾ ಶಾಖೆ ಪ್ರಶಸ್ತಿ ಪ್ರದಾನ ಮಾಡಿದರು.
ಬೆಂಗಳೂರು ರಾಜಭವನದ ಗ್ಲಾಸ್ ಹೌಸ್ ನಲ್ಲಿ ಮಂಗಳವಾರ ನಡೆದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ವಾರ್ಷಿಕ ಮಹಾಸಭೆಯಲ್ಲಿ ಈ ಪ್ರಶಸ್ತಿ ನೀಡಿ ಗೌರವಿಸಿದರು.
ಪ್ರಶಸ್ತಿಯನ್ನು ಜಿಲ್ಲಾಧಿಕಾರಿ ಮತ್ತು ರೆಡ್ ಕ್ರಾಸ್ ಕೊಪ್ಪಳ ಶಾಖೆ ಅಧ್ಯಕ್ಷ ನಳಿನ್ ಅತುಲ್ ಹಾಗೂ ಚೇರಮನ್ ಸೋಮರಡ್ಡಿ ಅಳವಂಡಿ ಸ್ವೀಕರಿಸಿದರು. ಉಪ ಸಭಾಪತಿ ಡಾ.ಗವಿಸಿದ್ಧನಗೌಡ ಜಿ. ಪಾಟೀಲ್, ಪ್ರಧಾನ ಕಾರ್ಯದರ್ಶಿ ಡಾ. ಶ್ರೀನಿವಾಸ ಹ್ಯಾಟಿ, ನಿರ್ದೇಶಕರುಗಳಾದ ಡಾ.ಚಂದ್ರಶೇಖರ ರಡ್ಡಿ ಎಸ್.ಕರಮುಡಿ, ಡಾ. ಮಂಜುನಾಥ ಸಜ್ಜನ್, ರಾಜೇಶ ಯಾವಗಲ್, ಡಾ. ಶಿವನಗೌಡ ಪಾಟೀಲ್, ಡಾ.ರವಿಕುಮಾರ ದಾನಿ ಭಾಗವಹಿಸಿದ್ದರು.
ಕೊಪ್ಪಳ ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸತತ ಐದು ವರ್ಷಗಳಿಂದ ರಾಜ್ಯ ಶಾಖೆ ನೀಡುವ ವಿವಿಧ ಪ್ರಶಸ್ತಿಗೆ ಭಾಜನವಾಗುತ್ತಿರುವುದು ಹೆಮ್ಮೆಯ ಸಂಗತಿ ಎಂದು ಕೊಪ್ಪಳ ಜಿಲ್ಲಾಧಿಕಾರಿ ನಳಿನ್ ಅತುಲ್ ಮೆಚ್ಚುಗೆ ವ್ಯಕ್ತಪಡಿಸಿದರು.
ಬಳಿಕ ಮಾತನಾಡಿದ ಅವರು, ಕೊಪ್ಪಳ ಜಿಲ್ಲೆಯಲ್ಲಿ ರಕ್ತ ಹೀನತೆ, ಅಪೌಷ್ಟಿಕತೆ ಬಹಳ ದೊಡ್ಡ ಪ್ರಮಾಣದಲ್ಲಿದೆ. ಇದನ್ನು ನಿಯಂತ್ರಣ ಮಾಡುವ ಅಗತ್ಯವಿದೆ. ಗರ್ಭೀಣಿಯರ ಎಚ್.ಬಿ ಪ್ರಮಾಣ ಅತ್ಯಂತ ಕಡಿಮೆ ಇರುವುದು ಬೇಸರದ ಸಂಗತಿ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಿ ಪ್ರಯತ್ನಿಸೋಣ ಎಂದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.