ಕಬ್ಬಾಳು ಶಾಲೆಯ ಶಿಕ್ಷಕಿ ಇಂದಿರಾಗೆ ಉತ್ತಮ ಶಿಕ್ಷಕ ಪ್ರಶಸ್ತಿ

KannadaprabhaNewsNetwork |  
Published : Nov 25, 2026, 01:45 AM IST
24ಎಚ್ಎಸ್ಎನ್20 :  | Kannada Prabha

ಸಾರಾಂಶ

ಬೆಂಗಳೂರಿನ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನ.೨೨ರ ಭಾನುವಾರ ನಡೆದ ಸಮಾರಂಭದಲ್ಲಿ ಶಿಕ್ಷಣ ಹಕ್ಕು ಕಾಯ್ದೆಯ ರೂವಾರಿ ಅನಿತಾ ಕೌಲ್ ಅವರ ಸ್ಮರಣಾರ್ಥ ನೀಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ದಮ್ಮನಿಂಗಲ ಕ್ಲಸ್ಟರ್ ವ್ಯಾಪ್ತಿಯ ಕಬ್ಬಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಎ.ಸಿ. ಇಂದಿರಾ ಪಾತ್ರರಾಗಿದ್ದಾರೆ. ಇಂದಿರಾ ಅವರಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಹೋದ್ಯೋಗಿಗಳು, ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣಶ್ರವಣಬೆಳಗೊಳ ಹೋಬಳಿಯ ದಮ್ಮನಿಂಗಲ ಕ್ಲಸ್ಟರ್ ವ್ಯಾಪ್ತಿಯ ಕಬ್ಬಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಎ.ಸಿ. ಇಂದಿರಾ ಅವರು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ರಾಜ್ಯ ಶಾಖೆ, ಬೆಂಗಳೂರು ವತಿಯಿಂದ ನೀಡುವ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಬೆಂಗಳೂರಿನ ಬಿಎಂಎಸ್ ಎಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ನ.೨೨ರ ಭಾನುವಾರ ನಡೆದ ಸಮಾರಂಭದಲ್ಲಿ ಶಿಕ್ಷಣ ಹಕ್ಕು ಕಾಯ್ದೆಯ ರೂವಾರಿ ಅನಿತಾ ಕೌಲ್ ಅವರ ಸ್ಮರಣಾರ್ಥ ನೀಡುವ ಈ ಪ್ರಶಸ್ತಿಯನ್ನು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತ ಖ್ಯಾತ ಮನೋವೈದ್ಯ ಡಾ.ಸಿ.ಆರ್. ಚಂದ್ರಶೇಖರ್ ಹಾಗೂ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಸೇರಿದಂತೆ ಗಣ್ಯರು ಪ್ರದಾನ ಮಾಡಿದರು. ಶಿಕ್ಷಣ ಕ್ಷೇತ್ರದಲ್ಲಿ ಸುದೀರ್ಘ ಸೇವೆ ಸಲ್ಲಿಸಿರುವ ಇಂದಿರಾ ಅವರು ಗ್ರಾಮೀಣ ಮಕ್ಕಳ ಶೈಕ್ಷಣಿಕ ಪ್ರಗತಿ, ಸವಾಂಗೀಣ ವ್ಯಕ್ತಿತ್ವ ವಿಕಸನ ಹಾಗೂ ಶಾಲೆಯ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುತ್ತಿದ್ದಾರೆ. ಇವರ ಶೈಕ್ಷಣಿಕ ಸೇವೆ ಮತ್ತು ಬದ್ಧತೆಯನ್ನು ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಈ ಹಿಂದೆ ೨೦೦೨ರಲ್ಲಿ ಜನಮೆಚ್ಚಿದ ಶಿಕ್ಷಕಿ ಪ್ರಶಸ್ತಿ ಹಾಗೂ ೨೦೨೬-೨೭ನೇ ಸಾಲಿನಲ್ಲಿ ಹಾಸನ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೂ ಇವರು ಭಾಜನರಾಗಿದ್ದರು.ಇಂದಿರಾ ಅವರಿಗೆ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಹೋದ್ಯೋಗಿಗಳು, ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಪಾನಿಂದಲೇ ಆಶಾ ಮನವೊಲಿಕೆಗೆ ಸಿಎಂ ಯತ್ನ
ವೈದ್ಯರ ಚೀಟಿ ಇಲ್ಲದೆ ಗರ್ಭಪಾತ ಮಾತ್ರೆಗಳ ಮಾರಾಟ: ಅಧಿಕಾರಿಗಳ ದಾಳಿ