ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾ-ಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ''2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ - ಇಲಾಬೆನ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಿದೆ.
ಬೆಳ್ತಂಗಡಿ: ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾದ ಸಾ-ಧನ್ ಸಂಸ್ಥೆಯು ಇತ್ತೀಚೆಗೆ ದೆಹಲಿಯಲ್ಲಿ ಆಯೋಜಿಸಿದ 21ನೇ ರಾಷ್ಟ್ರೀಯ ಸಮಾವೇಶದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್‌ಗೆ ''''''''2025-2026ರ ಸಾಲಿನ ಅತ್ಯುತ್ತಮ ಮಹಿಳಾ ಸ್ನೇಹಿ ಆರ್ಥಿಕ ಸಂಸ್ಥೆ - ಇಲಾಬೆನ್ ಸ್ಮಾರಕ ಪ್ರಶಸ್ತಿ ನೀಡಿ ಗೌರವಿಸಿದೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹಾಗೂ ಡಾ. ಹೇಮಾವತಿ ವಿ. ಹೆಗ್ಗಡೆ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸುತ್ತಿರುವ ''''''''ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ''''''''ಯು ಮಹಿಳಾ ಕಾರ್ಯಕರ್ತರಿಗೆ ಅತೀ ಸುರಕ್ಷಿತ ಕಾರ್ಯಸ್ಥಳ ಮತ್ತು ಉತ್ತಮ ಬಾಂಧವ್ಯದ ವಾತಾವರಣವನ್ನು ನೀಡುವ ಮೂಲಕ ದೇಶಕ್ಕೆ ಮಾದರಿಯಾದ ಒಂದು ಸಂಸ್ಥೆಯಾಗಿರುವ ಹಿನ್ನೆಲೆಯಲ್ಲಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ. ಪ್ರಶಸ್ತಿಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಅನಿಲ್ ಕುಮಾರ್ ಎಸ್.ಎಸ್., ಯೋಜನೆಯ ಮುಖ್ಯ ಹಣಕಾಸು ಅಧಿಕಾರಿ ಶಾಂತರಾಮ್ ಆರ್. ಪೈ, ಪ್ರಾದೇಶಿಕ ನಿರ್ದೇಶಕಿ ಗೀತಾ ಬಿ. ಮತ್ತು ದಯಾಶೀಲ ಸ್ವೀಕರಿಸಿದರು.
ಸಾಧನ್ ಸಂಸ್ಥೆಯು ದೇಶದ 210 ಆರ್ಥಿಕ ಸಂಸ್ಥೆಗಳ ನೋಂದಾವಣೆಯನ್ನು ಹೊಂದಿರುವ ಭಾರತೀಯ ರಿಸರ್ವ್ ಬ್ಯಾಂಕ್ ನಿಯೋಜಿತ ಸ್ವಯಂ ನಿಯಂತ್ರಕ ಸಂಸ್ಥೆಯಾಗಿದೆ. ಇಲಾಬೆನ್ ಅವರು ಮಹಿಳಾ ಸಬಲೀಕರಣದಲ್ಲಿ ದೇಶಕ್ಕೆ ವಿಶೇಷವಾದ ಕೊಡುಗೆಯನ್ನು ನೀಡಿದ್ದಾರೆ. ಅವರ ಸ್ಮರಣಾರ್ಥ ಅವರ ಹೆಸರಿನಲ್ಲಿ ಈ ಪ್ರಶಸ್ತಿಯನ್ನು ರಾಷ್ಟ್ರೀಯ ಮಟ್ಟದ ಅತ್ಯುತ್ತಮ ಕಿರು ಆರ್ಥಿಕ ವಲಯದಲ್ಲಿ ನೀಡಲಾಗುತ್ತಿದೆ. ಗ್ರಾಮಾಭಿವೃದ್ಧಿ ಯೋಜನೆಯ ಒಟ್ಟು 41 ಸಾವಿರ ಕಾರ್ಯಕರ್ತರಲ್ಲಿ 29 ಸಾವಿರ ಮಂದಿ ಮಹಿಳಾ ಕಾರ್ಯಕರ್ತರಿದ್ದು ಅವರಿಗೆ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ಕೆಲಸ ನಿರ್ವಹಿಸಲು ಸಂಸ್ಥೆ ಅವಕಾಶ ಮಾಡಿಕೊಟ್ಟಿದೆ. ಪ್ರಸ್ತುತ 6,547 ಮಹಿಳಾ ಜ್ಞಾನವಿಕಾಸ ಕೇಂದ್ರಗಳ ಮೂಲಕ 3,29,609 ಸದಸ್ಯರು ಸರ್ವಾಂಗೀಣ ಅಭಿವೃದ್ಧಿ ಹೊಂದಿದ್ದಾರೆ. ಹಾಗೆಯೇ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಸೇವೆಯ ಮೂಲಕ ಸುಮಾರು 42 ಲಕ್ಷ ಮಹಿಳೆಯರು ಬ್ಯಾಂಕಿನಿಂದ ಅತಿ ಕಡಿಮೆ ಬಡ್ಡಿದರದಲ್ಲಿ ಆರ್ಥಿಕ ಸಾಲ ಸೌಲಭ್ಯವನ್ನು ಪಡೆದುಕೊಂಡು ತಮ್ಮ ಬದುಕನ್ನು ಕಟ್ಟಿಕೊಂಡಿದ್ದಾರೆ ಎಂದು ಗ್ರಾಮಾಭಿವೃದ್ಧಿ ಯೋಜನೆಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಎಸ್.ಎಸ್. ಉಲ್ಲೇಖಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.