ಕನ್ನಡಪ್ರಭ ವಾರ್ತೆ ಮಂಡ್ಯ
ಮಲೇರಿಯಾ ಮುಕ್ತ ರಾಜ್ಯ ಮಾಡುವ ಉದ್ದೇಶದಿಂದ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮವನ್ನು ಇಲಾಖೆಯಿಂದ ಹಮ್ಮಿಕೊಂಡಿದ್ದೇವೆ ಎಂದು ಅಪರ ಜಿಲ್ಲಾಧಿಕಾರಿ ಎಚ್.ಎಲ್ ನಾಗರಾಜು ತಿಳಿಸಿದರು.ನಗರದ ತಮಿಳು ಕಾಲೋನಿ ಬಡಾವಣೆಯಲ್ಲಿ ವಿಶ್ವ ಮಲೇರಿಯಾ ದಿನಾಚರಣೆ ಕಾರ್ಯಕ್ರಮದ ಅಂಗವಾಗಿ ಆಯೋಜಿಸಿದ್ದ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿ, ಕೊಳಚೆ ಪ್ರದೇಶಗಳಲ್ಲಿ ಕೊಳಚೆ ನೀರು ಮತ್ತು ಬೇರೆ ಬೇರೆ ಕಾರಣಗಳಿಂದ ಮಲೇರಿಯಾ ರೋಗ ಹರಡುತ್ತಿದೆ. ಈ ರೋಗ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಅನುಸರಿದ್ದರಿಂದ ಮಂಡ್ಯ ಜಿಲ್ಲೆ 2020ರ ವೇಳೆಗೆ ಮಲೇರಿಯಾ ಮುಕ್ತ ಜಿಲ್ಲೆಯಾಗಿದೆ. ಹಾಗೆಯೇ 2025ರ ವೇಳೆಗೆ ಮಲೇರಿಯಾ ಮುಕ್ತ ರಾಜ್ಯವನ್ನಾಗಿಸಲು ಸಂಕಲ್ಪ ಮಾಡಬೇಕಿದೆ ಎಂದರು.ಮಲೇರಿಯಾ ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದರ ಜಾಗೃತಿಗೆ ಜಾಥಾ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಮನೆಗಳಲ್ಲಿ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ತೆಂಗಿನ ಚಿಪ್ಪು ಟೈರ್, ಓಪನ್ ಟ್ಯಾಂಕ್ ಗಳಲ್ಲಿ ಈ ರೋಗ ಹರಡುವ ಸಾಧ್ಯತೆ ಇದೆ. ಸಾರ್ವಜನಿಕರು ಸ್ವಚ್ಛತೆಗೆ ಹೆಚ್ಚು ಆದ್ಯತೆ ನೀಡಿ ಇಡೀ ರಾಜ್ಯವನ್ನು ಮಲೇರಿಯ ಮುಕ್ತ ರಾಜ್ಯವನ್ನಾಗಿಸಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿ ಡಾ.ಕೆ.ಮೋಹನ್, ಜಿಲ್ಲಾ ಕುಷ್ಟರೋಗ ನಿರ್ಮೂಲನಾಧಿಕಾರಿ ಡಾ.ಸೋಮಶೇಖರ್, ಡಾ.ಬೆಟ್ಟಸ್ವಾಮಿ, ಆರ್.ಸಿ.ಎಚ್. ಅಧಿಕಾರಿ ಡಾ.ಅನಿಲ್ ಕುಮಾರ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಎನ್ ಆಶಾಲತಾ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಕಾಂತರಾಜು, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಕುಮಾರ್, ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ.ಜವರೇಗೌಡ, ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಂಗಳಾ, ಮಲೇರಿಯ ವಿಭಾಗದ ಅಧಿಕಾರಿ ಸೋಮಶೇಖರ್, ಜಾನೆಟ್ ಮೆನೆಜಿಸ್ ಇದ್ದರು.ನಾಳೆಯಿಂದ 13 ರವರೆಗೆ ಬೃಹತ್ ಆಹಾರ ಮೇಳಮಂಡ್ಯ: ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿ ಬರುವ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಒಂದು ಅಪ್ಪಟ ಚರ್ಮ ವಸ್ತುಗಳ ಮಾರಾಟ ಮಳಿಗೆಯನ್ನು, ಸ್ವರ್ಣ ಟಿವಿ ವತಿಯಿಂದ ಬೃಹತ್ ಆಹಾರ ಮೇಳ ಮತ್ತು ವಸ್ತು ಪ್ರದರ್ಶನವನ್ನು ಮೇ 9 ರಿಂದ 13 ರವರೆಗೆ ಮಂಡ್ಯ ನಗರದ ಸರ್ಕಾರಿ ಬಾಲಕಿಯರ ಕಾಲೇಜು ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.ವಸ್ತು ಪ್ರದರ್ಶನದಲ್ಲಿ ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದಿಂದ ಅಪ್ಪಟ ಚರ್ಮ ವಸ್ತುಗಳಿಂದ ಮಾಡಿರುವಂತಹ ಚರ್ಮ ಪಾದರಕ್ಷೆಗಳು ಮುಂತಾದ ಚರ್ಮ ವಸ್ತುಗಳ ಮೇಲೆ ಆಕರ್ಷಕ ರಿಯಾಯ್ತಿ ದರದ ಮಾರಾಟದಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲಿಡ್ಕರ್ ಮಾರಾಟ ಮಳಿಗೆಯಲ್ಲಿ ಅತ್ಯುತ್ತಮ ಗುಣಮಟ್ಟದ ಚರ್ಮ ಕುಶಲಕರ್ಮಿಗಳಿಂದ ಮಾಡಲ್ಪಟ್ಟ ಚರ್ಮದ ಪಾದರಕ್ಷೆ, ಶೂ, ವ್ಯಾನಿಟಿ ಬ್ಯಾಗ್, ಬೆಲ್ಟ್, ವ್ಯಾಲೆಟ್ ಮುಂತಾದ ಚರ್ಮ ವಸ್ತುಗಳು ದೊರೆಯಲಿವೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 0821-2444019/ 9731833307 ಅನ್ನು ಸಂಪರ್ಕಿಸಬಹುದು ಎಂದು ಡಾ.ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಜಿಲ್ಲಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.