ಕನ್ನಡೆಪ್ರಭ ವಾರ್ತೆ ಪೊನ್ನಂಪೇಟೆ ಗುಂಡಿಕೆರೆಯಲ್ಲಿರುವ ಬೇಟೋಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾಲಿಬಾಲ್ ತಂಡ ಪ್ರಾಥಮಿಕ ಶಾಲಾ ವಿಭಾಗದ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದೆ.
ಇದಕ್ಕೂ ಮೊದಲು ನಡೆದ ಸೆಮಿ ಫೈನಲ್ ಪಂದ್ಯದಲ್ಲಿ ತಿತಿಮತಿಯ ಮೊರಾರ್ಜಿ ದೇಸಾಯಿ ವಸತಿ ಶಾಲಾ ತಂಡವನ್ನು ಸೋಲಿಸಿದ ಈ ತಂಡ ಫೈನಲ್ ಗೆ ಪ್ರವೇಶಿಸಿತ್ತು. ಈ ಕುರಿತು ಸಂತಸ ವ್ಯಕ್ತಪಡಿಸಿರುವ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷರಾದ ಎಂ. ಎಂ. ಇಸ್ಮಾಯಿಲ್, ಬೇಟೋಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಾಲಿಬಾಲ್ ತಂಡ ಕಳೆದ ಹಲವು ವರ್ಷಗಳಿಂದ ಉತ್ತಮ ಸಾಧನೆ ಮಾಡುತ್ತಿದೆ. ಅದರಿಂದ ಈ ಬಾರಿ ಜಿಲ್ಲಾ ಮಟ್ಟದಲ್ಲೂ ವಿಜಯ ಸಾಧಿಸಲಿರುವ ಈ ತಂಡ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ಜಿಲ್ಲೆಯನ್ನು ಪ್ರತಿನಿಧಿಸುವ ಆಶಾಭಾವನೆ ಹೊಂದಲಾಗಿದೆ ಎಂದು ಹೇಳಿದ್ದಾರೆ.
\