ಕನ್ನಡಪ್ರಭ ವಾರ್ತೆ ಮೈಸೂರು
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಗೆಲ್ಲುವ ವಿಶ್ವಾಸ ಇತ್ತು. ಹೆಚ್ಚುವರಿ ಮತವನ್ನು ಮೈತ್ರಿ ಅಭ್ಯರ್ಥಿಗೆ ನೀಡಿ ಎಂದು ಹೇಳಿದ್ದರು. ಆದರೆ, ಚುನಾವಣೆಯಲ್ಲಿ ಅಡ್ಡ ಮತದಾನ ಆಗಿದೆ. ಅಮಿತ್ ಶಾ, ನಿತಿನ್ ನಬಿನ್ ಸೇರಿದಂತೆ ರಾಷ್ಟ್ರೀಯ ನಾಯಕರ ಜೊತೆ ಈ ವಿಚಾರ ಚರ್ಚೆ ಆಗಿರುತ್ತೆ. ರಾಷ್ಟ್ರೀಯ ನಾಯಕರು ಹೇಳಿದ್ಮೇಲೂ ಮತ ಹಾಕಿಲ್ಲ ಅಂದರೆ ರಾಷ್ಟ್ರೀಯ ನಾಯಕರಿಗೂ ಮಾಡಿರುವ ಅಪಮಾನ ಎಂದರು.
ಇಷ್ಟೊತ್ತಿಗೆ ಅಡ್ಡ ಮತದಾನ ಮಾಡಿದವರ ಮೇಲೆ ಕ್ರಮ ಆಗಬೇಕಿತ್ತು. ಕ್ರಮ ಆಗಲಿ ಅಂತ ನಾನು ಕೂಡ ಒತ್ತಾಯ ಮಾಡ್ತೇನೆ. ಎರಡು ಪಕ್ಷದ ಕಾರ್ಯಕರ್ತರು, ನಾಯಕರಿಗೂ ಇದು ಮುಜುಗರ ತಂದಿದೆ. ವಿಪಕ್ಷ ನಾಯಕರು, ರಾಜ್ಯಾಧ್ಯಕ್ಷರು ಈ ಬಗ್ಗೆ ಕ್ರಮ ವಹಿಸ್ತಾರೆ ಎಂದರು.ಹೆದರುವ ಪ್ರಶ್ನೆ ಇಲ್ಲ:
ಮಹದೇವಪ್ಪಗೂ ಮುಂಚೆ ಸಚಿರಾಗಿದ್ದು ಪ್ರಿಯಾಂಕ್ ಖರ್ಗೆ ಸಾಧನೆ. ಆರ್ ಎಸ್ಎಸ್ ಬಗ್ಗೆ ಮಾತನಾಡಿದ್ದಕ್ಕೆ ಸಚಿವ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ನಮ್ಮನ್ನು ಹೆದರಿಸುವ ಪ್ರಶ್ನೆಯೇ ಇಲ್ಲ. ಧ್ವಜದ ಮೇಲಿನ ಗೌರವ ಕಡಿಮೆ ಮಾಡಲು ಸಾಧ್ಯವೇ ಎಂದು ಅವರು ಪ್ರಶ್ನಿಸಿದರು.ಕೌಟಿಲ್ಯ ರಘು ಆಯ್ಕೆ: ಬಿಜೆಪಿ ಕಚೇರಿಯಲ್ಲಿ ಸಂಭ್ರಮೋತ್ಸವ
ವಿಧಾನ ಪರಿಷತ್ ಸದಸ್ಯರಾಗಿ ರಾಜ್ಯ ಒಬಿಸಿ ಮೋರ್ಚಾ ಅಧ್ಯಕ್ಷ ಕೌಟಿಲ್ಯ ರಘು ಅವರು ಆಯ್ಕೆಯಾದ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಸಂಭ್ರಮಾಚರಿಸಿದರು.ನಗರದ ಬಿಜೆಪಿ ಕಚೇರಿ ಮುಂಭಾಗ ಸಮಾವೇಶಗೊಂಡ ಮುಖಂಡರು ಕೌಟಿಲ್ಯ ರಘು ಪರ ಘೋಷಣೆ ಕೂಗಿ, ಪಟಾಕಿ ಸಿಡಿಸಿ, ಸಾರ್ವಜನಿಕರು, ಕಾರ್ಯಕರ್ತರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.
ಚುನಾಯಿತ ಪ್ರತಿನಿಧಿಗಳು ಪರಿಷತ್ ಚುನಾವಣೆಯಲ್ಲಿ ಅಡ್ಡಮತದಾನ ಮಾಡಿರುವುದು ಬೇಸರ ತರಿಸಿದೆ. ಪಕ್ಷದ ವರಿಷ್ಠರು ಈ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.ಶಾಸಕ ಟಿ.ಎಸ್.ಶ್ರೀವತ್ಸ, ಜಿಲ್ಲಾಧ್ಯಕ್ಷ ಕುಂಬ್ರಳ್ಳಿ ಸುಬ್ಬಣ್ಣ, ಮಹೇಶ್ ರಾಜೇ ಅರಸ್ ಮೊದಲಾದವರು ಇದ್ದರು.