ಬೆಟ್ಟದಕೂರ್ಲಿಯಲ್ಲಿ ವಿಜೃಂಭಣೆಯ ಹೋರಿಹಬ್ಬ

KannadaprabhaNewsNetwork | Published : Dec 7, 2023 1:15 AM

ಸಾರಾಂಶ

ಕನ್ನಡಪ್ರಭ ವಾರ್ತೆ ಸೊರಬ ಮಲೆನಾಡು ಮತ್ತು ಬಯಲುಸೀಮೆ ಭಾರದ ರೈತರ ಅಚ್ಚುಮೆಚ್ಚಿನ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮ ಸಮಿತಿ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಿಸಿದರು. ತಾಲೂಕು ಸೇರಿದಂತೆ ನೆರೆಯ ಜಿಲ್ಲೆಗಳಿಂದ ಸುಮಾರು 200ಕ್ಕೂ ಅಧಿಕ ಹೋರಿಗಳು ಆಗಮಿಸಿದ್ದವು. ಒಂದಕ್ಕಿಂತ ಒಂದು ಹೋರಿಗಳು ನಾವೇನು ಯಾರಿಗೂ ಕಮ್ಮಿ ಇಲ್ಲ ಎನ್ನುವ ಹಾಗೆ ಮಿಂಚಿನ ಓಟ ಮಾಡಿ, ನೋಡುಗರ ಗಮನ ಸೆಳೆದವು. ಅಖಾಡದಲ್ಲಿ ಹೋರಿಗಳು ಓಡುವುದನ್ನು ನೋಡಲು ನೆರೆಯ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು ಹಾಗೂ ಜಿಲ್ಲೆಗಳಿಂದ ಸಾವಿರಾರು ಹೋರಿ ಅಭಿಮಾನಿಗಳು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡುವ ದೃಶ್ಯ ರೋಮಾಂಚನಗಳಿಸಿತು. ಹೋರಿಗಳ ಮಾಲೀಕರು ತಮ್ಮ ನೆಚ್ಚಿನ ಹೋರಿಗಳನ್ನು ಬಣ್ಣ ಬಣ್ಣದ ಜೂಲ, ಬಲೂನು, ಹೂವು, ಕೊಬ್ಬರಿ ಹಾರ ಕಟ್ಟಿ ಶೃಂಗರಿಸಿದ್ದರು.

ಕನ್ನಡಪ್ರಭ ವಾರ್ತೆ ಸೊರಬ

ಮಲೆನಾಡು ಮತ್ತು ಬಯಲುಸೀಮೆ ಭಾರದ ರೈತರ ಅಚ್ಚುಮೆಚ್ಚಿನ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮ ಸಮಿತಿ ನೇತೃತ್ವದಲ್ಲಿ ವಿಜೃಂಭಣೆಯಿಂದ ಆಚರಿಸಿದರು.

ತಾಲೂಕು ಸೇರಿದಂತೆ ನೆರೆಯ ಜಿಲ್ಲೆಗಳಿಂದ ಸುಮಾರು 200ಕ್ಕೂ ಅಧಿಕ ಹೋರಿಗಳು ಆಗಮಿಸಿದ್ದವು. ಒಂದಕ್ಕಿಂತ ಒಂದು ಹೋರಿಗಳು ನಾವೇನು ಯಾರಿಗೂ ಕಮ್ಮಿ ಇಲ್ಲ ಎನ್ನುವ ಹಾಗೆ ಮಿಂಚಿನ ಓಟ ಮಾಡಿ, ನೋಡುಗರ ಗಮನ ಸೆಳೆದವು.

ಅಖಾಡದಲ್ಲಿ ಹೋರಿಗಳು ಓಡುವುದನ್ನು ನೋಡಲು ನೆರೆಯ ಗ್ರಾಮಗಳು ಸೇರಿದಂತೆ ನೆರೆಯ ತಾಲೂಕು ಹಾಗೂ ಜಿಲ್ಲೆಗಳಿಂದ ಸಾವಿರಾರು ಹೋರಿ ಅಭಿಮಾನಿಗಳು ಆಗಮಿಸಿದ್ದರು. ಅಖಾಡದಲ್ಲಿ ಪೈಲ್ವಾನರ ಕೈಗೆ ಸಿಗದಂತೆ ಹೋರಿಗಳು ಓಡುವ ದೃಶ್ಯ ರೋಮಾಂಚನಗಳಿಸಿತು. ಹೋರಿಗಳ ಮಾಲೀಕರು ತಮ್ಮ ನೆಚ್ಚಿನ ಹೋರಿಗಳನ್ನು ಬಣ್ಣ ಬಣ್ಣದ ಜೂಲ, ಬಲೂನು, ಹೂವು, ಕೊಬ್ಬರಿ ಹಾರ ಕಟ್ಟಿ ಶೃಂಗರಿಸಿದ್ದರು.

ಅಖಾಡದಲ್ಲಿ ಯಮನೂರು ಕುರುಕ್ಷೇತ್ರ, ಕುಬಟೂರು ಬ್ರಹ್ಮ, ಆನವಟ್ಟಿ ಅಭಿಮನ್ಯ, ಆನವಟ್ಟಿ ಪವರ್‌ಸ್ಟಾರ್, ಬ್ಯಾತನಾಳ ಕರ್ನಾಟಕ ಎಕ್ಸ್ಪ್ರೆಸ್, ಮಲೆನಾಡು ಚಿನ್ನ, ಶಿವಮೊಗ್ಗದ ಶಿವಲಿಂಗ, ಅಂಬಾರಗೊಪ್ಪದ ಯಜಮಾನ, ಸಮನವಳ್ಳಿ ಒಡೆಯ, ಬೆಟ್ಟದಕೂರ್ಲಿಯ ಲಂಕಾಸುರ, ಬೆಟ್ಟದಹುಲಿ, ಸಾಹುಕಾರ, ವೀರಭದ್ರ, ವಿಕ್ರಂ, ಸಾರಂಗ, ಅಪ್ಪಾಜಿ, ಭೀಷ್ಮ, ಏಳುಕೋಟಿ ಸೇರಿದಂತೆ ವಿವಿಧ ಹೆಸರಿನ ಹೋರಿಗಳು ಓಡಿದವು. ಹೋರಿ ಹಬ್ಬದ ಆಯೋಜಿಸಿದ್ದ ಬೆಟ್ಟದ ಕೂರ್ಲಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮ ಸಮಿತಿಯವರು ಅಖಾಡದಲ್ಲಿ ಎರಡು ಬದಿಯಲ್ಲಿ ಸುರಕ್ಷತಾ ಕ್ರಮ ಕೈಗೊಂಡು, ಅಖಾಡದಲ್ಲಿ ಕ್ರಮವಾಗಿ ಒಂದೊಂದೇ ಹೋರಿಗಳನ್ನು ಓಡಿಸಿದರು. ಇದರಿಂದ ಯಾವುದೇ ಅಪಾಯಗಳು ಸಂಭವಿಸಲಿಲ್ಲ. ಆಯೋಜಕರು ಉತ್ತಮ ರೀತಿಯಲ್ಲಿ ಸುರಕ್ಷತೆಗೆ ಗಮನ ನೀಡಿದ್ದರು. ಇದು ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಯಿತು. ಅಖಾಡದಲ್ಲಿ ಉತ್ತಮವಾಗಿ ಓಡಿದ ಹೋರಿಗಳು ಹಾಗೂ ಬಲ ಪ್ರದರ್ಶನ ತೋರಿದ ಯುವಕರನ್ನು ಗುರುತಿಸಲಾಯಿತು. - - - -06ಕೆಪಿಸೊರಬ02:

ಸೊರಬ ತಾಲೂಕಿನ ಬೆಟ್ಟದಕೂರ್ಲಿ ಗ್ರಾಮದಲ್ಲಿ ಶ್ರೀ ವೀರಭದ್ರೇಶ್ವರ ಗ್ರಾಮ ಸಮಿತಿಯವರು ಆಯೋಜಿಸಿದ್ದ ಹೋರಿ ಬೆದರಿಸುವ ಹಬ್ಬದಲ್ಲಿ ಮಿಂಚಿನ ಓಟ ನೀಡುತ್ತಿರುವ ಹೋರಿ.

Share this article