ಪಾಂಡುವಪುರ:
ತಾಲೂಕಿನ ಕ್ಯಾತನಹಳ್ಳಿ ಸ್ಟಾನ್ ಫೋರ್ಡ್ ಪಬ್ಲಿಕ್ ಶಾಲೆಯಲ್ಲಿ ನಡೆದ ವಿಶ್ವ ಪರಿಸದ ದಿನಾಚರಣೆಯಲ್ಲಿ ಮಾತನಾಡಿ, ಶಾಲಾ ಆವರಣದಲ್ಲಿ ವಿದ್ಯಾರ್ಥಿಗಳೊಂದಿಗೆ ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆ ಮಹತ್ವದ ಬಗ್ಗೆ ಜಾಗೃತಿ ಮೂಡಿಸಿದರು. ಪರಿಸರ ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿ. ಹೆಚ್ಚು ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಒಬ್ಬೊಬ್ಬರು ಒಂದೊಂದು ಗಿಡ ನೆಟ್ಟು ನೋಡಿಕೊಂಡರೆ ದೊಡ್ಡದಾಗಿ ಬೆಳೆಯಬೇಕು. ಸ್ಥಳೀಯ ಜನರು ವಾಯುವಿಹಾರ ಮಾಡುವ ಜತೆಗೆ ಗಿಡಗಳನ್ನು ದತ್ತು ಪಡೆದು ಪೋಷಣೆ ಮಾಡಬೇಕು ಎಂದರು.ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಪರಿಸರ ಸಂರಕ್ಷಣೆ, ಮಾಲಿನ್ಯ ತಡೆ, ಪ್ರಕೃತಿ ಸಮತೋಲನ ಕಾಪಾಡುವಲ್ಲಿ ನಮ್ಮ ಪಾತ್ರ ಕುರಿತು ಅಭಿಪ್ರಾಯ ಹಂಚಿಕೊಂಡರು. ಕಾರ್ಯಕ್ರಮದಲ್ಲಿ ಶಾಲೆ ಆಡಳಿತಾಧಿಕಾರಿ ಎಸ್.ಜಗದೀಶ್, ಮುಖ್ಯ ಶಿಕ್ಷಕಿ ಡಿ.ಕವಿತಾ ಮೇಲ್ವಿಚಾರಕಿ ಸುಮಾ ಹಾಗೂ ಎಲ್ಲಾ ಶಿಕ್ಷಕ-ಶಿಕ್ಷಕಿಯರು ಉಪಸ್ಥಿತರಿದ್ದರು.
ಶ್ರೀರಂಗಪಟ್ಟಣ:ಮಾನವರು ದೇಶವನ್ನು ಅಭಿವೃದ್ಧಿಯತ್ತ ಮುನ್ನಡೆಸುತ್ತಿದ್ದರೂ ಪರಿಸರ ರಕ್ಷಿಸುವುದನ್ನು ಮರೆಯುತ್ತಿದ್ದಾರೆ ಎಂದು ಮುಖ್ಯ ಶಿಕ್ಷಕ ಮಹಾದೇವಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಮಂಡ್ಯದ ಎಂಓಬಿ ಸಂಸ್ಥೆ ಮೇರಿ, ದೇವರಾಜು, ಬಾಲರಾಜು, ಮುಂತಾದ ಪದಾಧಿಕಾರಿಗಳು ಮನುಷ್ಯನಿಗೂ ಪರಿಸರಕ್ಕೂ ಇರುವ ಸಂಬಂಧವನ್ನು ವಿವರಿಸಿದರು. ಸರ್ಕಾರಿ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕಿ ಉಮಾಮಹೇಶ್ವರಿ ಗಿಡ ನೆಟ್ಟು ಕಾರ್ಯಕ್ರಮ ಉದ್ಘಾಟಿಸಿದರು. ವಿಜ್ಞಾನ ಶಿಕ್ಷಕಿ ಸುಮಾ, ಶಾಲೆ ಶಿಕ್ಷಕರಾದ ರಾಜೇಶ್, ಜನಾರ್ಧನ್, ಕಾಳಪ್ಪ, ರಾಜು ಇದ್ದರು. ಇದೇ ವೇಳೆ ಮಕ್ಕಳಿಗೆ ಪರಿಸರ ಸಂರಕ್ಷಣೆ ಘೋಷಣೆಗಳನ್ನು ಬೋಧಿಸಲಾಯಿತು.