ಬೀದರ್: ಭಾಲ್ಕಿ ಪಟ್ಟಣದ ಹಳೆ ಭಾಗದ ಅಶೋಕ ನಗರ ಕ್ರಾಸ್ ಬಳಿ ಖುಲ್ಲಾ ಜಾಗದಲ್ಲಿ ಒಬ್ಬ ವ್ಯಕ್ತಿ ವಿಶ್ವಕಪ್ ಕ್ರಿಕೆಟ್ ಪಂದ್ಯದ ಮೇಲೆ ಸಾರ್ವಜನಿಕರಿಂದ ಹಣ ಪಡೆದುಕೊಂಡು ಕ್ರಿಕೆಟ್ ಬೆಟ್ಟಿಂಗ್ ಜೂಜಾಟ ನಡೆಸುತ್ತಿದ್ದನು. ಈ ಕುರಿತು ಖಚಿತ ಮಾಹಿತಿ ಬಂದ ಮೇರೆಗೆ ಎಸ್ಪಿ ಚನ್ನಬಸವಣ್ಣ, ಎಎಸ್ಪಿ ಮಹೇಶ ಮೇಘಣ್ಣನವರ, ಭಾಲ್ಕಿ ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟಿ ಮಾರ್ಗದರ್ಶನದಲ್ಲಿ ಭಾಲ್ಕಿ ಸಿಪಿಐ ಬಿ. ಅಮರೇಶ ಹಾಗೂ ಸಿಬ್ಬಂದಿ ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ವೇಳೆ ದಾಳಿ ನಡೆಸಿ 10 ಸಾವಿರ ರು. ನಗದು, 1ಮೊಬೈಲ್ ಹೀಗೆ ಒಟ್ಟು 15 ಸಾವಿರ ರು. ಮೌಲ್ಯದ ಮಾಲನ್ನು ಜಪ್ತಿ ಮಾಡಿಕೊಂಡಿದ್ದಾರೆ. ಭಾಲ್ಕಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೊಬ್ಬ ಆರೋಪಿತನ ಪತ್ತೆ ಮಾಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.