ಕನ್ನಡಪ್ರಭ ವಾರ್ತೆ ಸುಂಟಿಕೊಪ್ಪ
ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ಬುಧವಾರ ದೇವಾಲಯದ ಪ್ರಧಾನ ಅರ್ಚಕ ಲಕ್ಷ್ಮಿ ನಾರಾಯಣ ಭಟ್ ಅವರ ನೇತೃತ್ವದಲ್ಲಿ ಗಣಪತಿ ಹೋಮದೊಂದಿಗೆ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ನೀಡಿದರು.ನಂತರ ಕುಂಭಾಭಿಷೇಕ ಮತ್ತು ಕಳಶ ಪೂಜೆ, ಹೂವಿನ ಪೂಜೆ, ಕುಂಕುಮಾರ್ಚನೆ ನಡೆಯಿತು. ನಂತರ ನೆರೆದಿದ್ದ ಭಕ್ತರಿಗೆ ದೇವಿಯ ದರ್ಶನ ದೊರೆತು ತಮ್ಮ ಇಷ್ಟಾರ್ಥ ಸಿದ್ದಿಗಾಗಿ ಹರಕೆ ಮಾಡಿಕೊಂಡರಲ್ಲದೇ ಹರಕೆಯನ್ನು ಒಪ್ಪಿಸಿದರು.
ನಂತರ ನೆರೆದಿದ್ದ ನೂರಾರು ಭಕ್ತರಿಗೆ ದೇವಾಲಯದ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಕೆದಕಲ್, ಬೋಯಿಕೇರಿ, ಹಾಲೇರಿ, ಕಾಂಡನಕೊಲ್ಲಿ, ಸುಂಟಿಕೊಪ್ಪ, ಬಾಳೆಕಾಡು, ಮಡಿಕೇರಿ, ಹೊರೂರು ಸೇರಿದಂತೆ ಹೊರ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ದೇವರ ಧಾರ್ಮಿಕ ಕಾರ್ಯಗಳನ್ನು ಭಕ್ತಿಯಿಂದ ಉಪಸ್ಥಿತರಿದ್ದರು.