ಭದ್ರಾವತಿ: ಎಸ್‌ಐಆರ್ ಕರ್ತವ್ಯದ ವೇಳೆ ಬಿಎಲ್‌ಒ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ನಡೆದಿದೆ.
ಭದ್ರಾವತಿ: ಎಸ್‌ಐಆರ್ ಕರ್ತವ್ಯದ ವೇಳೆ ಬಿಎಲ್‌ಒ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ಭದ್ರಾವತಿ ತಾಲೂಕಿನ ಕಲ್ಲಾಪುರ ಬಳಿಯ ಕೋಡಿ ಹೊಸೂರು ಗ್ರಾಮದಲ್ಲಿ ನಡೆದಿದೆ.
ಭದ್ರಾವತಿ ಕಲ್ಲಾಪುರದ ಅಂಗನವಾಡಿಯಲ್ಲಿ ಟೀಚರ್ ಆಗಿರುವ ಮಂಜುಳಾ (50) ಮೃತಪಟ್ಟ ಬಿಎಲ್‌ಒ. ಸೋಮವಾರ ಮಧ್ಯಾಹ್ನ ಕೋಡಿ ಹೊಸೂರು ಗ್ರಾಮದ ಅಂಗನವಾಡಿಯಲ್ಲಿ ಎಸ್ಐಆರ್‌ಗೆ ಸಂಬಂಧಿಸಿದ ಕೆಲಸ ಮಾಡುತ್ತಿದ್ದ ಮಂಜುಳ ದಿಢೀರ್ ಕುಸಿದು ಬಿದ್ದಿದ್ದಾರೆ. ಈ ವೇಳೆ ಇವರೊಟ್ಟಿಗೆ ಕೆಲಸ ಮಾಡುತ್ತಿದ್ದ ವಿಎ, ಬಿಎಲ್‌ಒ ಹಾಗೂ ಸಹಾಯಕರು ಕೂಡಲೇ ಅರಬಿಳಚಿ ಪ್ರಾಥಮಿಕ ಆರೋಗ್ಯಕ್ಕೆ ಕರೆದೊಯ್ದು ಚಿಕಿತ್ಸೆ ಕೊಡಿಸಿದ್ದಾರೆ. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಭದ್ರಾವತಿ ತಾಲೂಕು ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆಯೇ ಮಂಜುಳಾ ಸಾವನ್ನಪ್ಪಿದ್ದಾರೆ.
ಮಾಹಿತಿ ತಿಳಿದ ತಕ್ಷಣ ತಹಸೀಲ್ದಾರ್ ಪ್ರದೀಪ್ ದೇವಗಿರಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸಹಾಯಕಿಯರು ಕುಟುಂಬ ವರ್ಗದವರು ಆಸ್ಪತ್ರೆ ಭೇಟಿ ನೀಡಿದರು. ಮಂಜುಳಾ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಡಲಾಗಿದೆ. ಹೃದಯಾಘಾತದಿಂದ ಮಂಜುಳಾ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಾವಿಗೆ ನಿಖರ ಕಾರಣ ತಿಳಿದುಬರಲಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.