ಕನ್ನಡಪ್ರಭ ವಾರ್ತೆ ಭದ್ರಾವತಿ:
ಕ್ಷೇತ್ರದಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಭತ್ತ ಬೆಳೆಯಲಾಗಿದ್ದು, ಈಗಾಗಲೇ ಭತ್ತದ ಬೆಳೆ ಕಾಳು ಕಟ್ಟಿ ಕಟಾವು ಹಂತ ತಲುಪಿದೆ. ಈ ಹಂತದಲ್ಲಿ ಭಾರಿ ಪ್ರಮಾಣದಲ್ಲಿ ಮಳೆಯಾಗುತ್ತಿದ್ದು, ಇದರಿಂದಾಗಿ ಬೆಳೆ ನೀರಿನಲ್ಲಿ ಕೊಚ್ಚಿಹೋಗಿ ನಾಶವಾಗುವ ಸ್ಥಿತಿ ನಿರ್ಮಾಣಗೊಂಡಿದೆ. ಮಳೆ ಇದೆ ರೀತಿ ಮುಂದುವರೆದಲ್ಲಿ ರೈತರಿಗೆ ಕೈಗೆ ಬಂದದ್ದು, ಬಾಯಿಗೆ ಸಿಗಲಿಲ್ಲ ಎಂಬಂತಾಗಲಿದೆ.
ಮತ್ತೊಂದೆಡೆ ಅಡಕೆ ತೋಟಗಳಲ್ಲಿ ಕಾಯಿ ಬಲಿತು ಕೊಯ್ಲು ನಡೆಯುತ್ತಿದ್ದು, ರೈತರಿಗೆ ಅಡಕೆ ಸುಲಿದು ಒಣಗಿಸಲು ಬಿಸಿಲಿನ ಕೊರತೆ ಎದುರಾಗಿದೆ. ಸದಾ ಮೋಡಕವಿದ ವಾತಾವರಣವಿದ್ದು, ಅಡಕೆ ಬೆಳೆಗಾರರಿಗೆ ಸಮಸ್ಯೆಯಾಗಿದೆ. ಅಲ್ಲದೆ ಮಳೆ ಇದೆ ರೀತಿ ಮುಂದುವರೆದಲ್ಲಿ ಬೆಳವಣಿಗೆ ಹಂತದಲ್ಲಿರುವ ಅಡಕೆ ದಪ್ಪವಾಗದೆ ಇಳುವರಿ ಕುಂಠಿತವಾಗುವ ಆತಂಕ ಎದುರಾಗಿದೆ.*ಬೀದಿ ಬದಿ ವ್ಯಾಪಾರಸ್ಥರಿಗೆ ತೊಂದರೆ:
*ಹಾಳಾದ ರಸ್ತೆಗಳು: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನಗರದ ಬಹುತೇಕ ರಸ್ತೆಗಳು ಹಾಳಾಗಿದ್ದು, ಅದರಲ್ಲೂ ಡಾಂಬರ್ ರಸ್ತೆಗಳು ಹಾಳಾಗಿರುವುದು ಪಾದಚಾರಿಗಳು ಹಾಗು ವಾಹನ ಸವಾರರಿಗೆ ತೊಂದರೆಯಾಗಿದೆ. ರಸ್ತೆಗಳಲ್ಲಿ ದೊಡ್ಡ ದೊಡ್ಡ ಗುಂಡಿಗಳು ಉಂಟಾಗಿದ್ದು, ವಾಹನಗಳು ಅಪಘಾತಗಳುಗೊಳ್ಳುವ ಸಾಧ್ಯತೆ ಹೆಚ್ಚಾಗಿವೆ. ಸಂಬಂಧಪಟ್ಟ ಇಲಾಖೆಯವರು ತಕ್ಷಣ ಎಚ್ಚೆತ್ತುಕೊಂಡು ತುರ್ತು ಕ್ರಮ ಕೈಗೊಳ್ಳಬೇಕಾಗಿದೆ.
ಭದ್ರಾ ಜಲಾಶಯದ ಸುತ್ತಮುತ್ತ ವ್ಯಾಪಕವಾಗಿ ಮಳೆಯಾಗುತ್ತಿರುವ ಈ ಹಿನ್ನಲೆಯಲ್ಲಿ ಕೆಲವು ದಿನಗಳಿಂದ ಜಲಾಶಯದಿಂದ ನದಿಗೆ ನೀರು ಬಿಡುಗಡೆಗೊಳಿಸಲಾಗಿದ್ದು, ಇದರಿಂದಾಗಿ ಹಳೇ ಸೇತುವೆ ಸಮೀಪ ಭದ್ರಾ ನದಿಯಲ್ಲಿರುವ ಸಂಗಮೇಶ್ವರ ದೇವಸ್ಥಾನ ನೀರಿನ ಪ್ರಮಾಣ ಹೆಚ್ಚಾದ ಕಾರಣ ಮುಳುಗಡೆಗೊಂಡಿದೆ. ನೀರಿನ ಪ್ರಮಾಣ ಮತ್ತಷ್ಟು ಹೆಚ್ಚಾದ್ದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಆತಂಕ ನಿರ್ಮಾಣವಾಗಿದೆ.