ಭದ್ರಾವತಿ: ಕರ್ನಾಟಕ ರತ್ನ, ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರ 2ನೇ ವರ್ಷದ ಪುಣ್ಯಸ್ಮರಣೆ ನಗರದ ವಿವಿಧೆಡೆ ಅಭಿಮಾನಿಗಳಿಂದ ನಡೆಯಿತು. ತಾಲೂಕು ಕಚೇರಿ ರಸ್ತೆ, ನಿರ್ಮಲ ಆಸ್ಪತ್ರೆ ಸಮೀಪ ಶ್ರೀ ಕನಕ ಆಟೋ ನಿಲ್ದಾಣದಲ್ಲಿ ಪುಣ್ಯಸ್ಮರಣೆ ಜರುಗಿತು. ಆಟೋ ಮಾಲೀಕರು, ಚಾಲಕರು, ಸ್ಥಳೀಯರು ಹಾಗು ಅಭಿಮಾನಿಗಳು ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ಮರಿಸಿದರು. ಸಂಘದ ಅಧ್ಯಕ್ಷ ಸುರೇಶ್ ನೇತೃತ್ವ ವಹಿಸಿದ್ದರು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು. ಬಿ.ಎಚ್. ರಸ್ತೆ ಚಾಮೇಗೌಡ ಏರಿಯಾ ಡಾ. ರಾಜ್‌ಕುಮಾರ್ ಅಭಿಮಾನಿಗಳು, ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ನಗರಸಭೆ ಮಾರುಕಟ್ಟೆ ಸಮೀಪ 2ನೇ ವರ್ಷದ ಪುಣ್ಯಸ್ಮರಣೆ ಆಚರಿಸಲಾಯಿತು. ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಅಭಿಮಾನಿಗಳು, ನೃಪತುಂಗ ಆಟೋ ನಿಲ್ದಾಣದ ಆಟೋ ಮಾಲೀಕರು, ಚಾಲಕರು, ಸ್ಥಳೀಯ ವರ್ತಕರು, ವ್ಯಾಪಾರಸ್ಥರು ಪಾಲ್ಗೊಂಡಿದ್ದರು. - - - -ಡಿ29ಬಿಡಿವಿಟಿ2: ಕರ್ನಾಟಕ ರತ್ನ, ಪವರ್ ಸ್ಟಾರ್ ಡಾ. ಪುನೀತ್ ರಾಜ್‌ಕುಮಾರ್ ಅವರ 2ನೇ ವರ್ಷದ ಪುಣ್ಯಸ್ಮರಣೆ ಭದ್ರಾವತಿ ನಗರದ ವಿವಿಧೆಡೆ ಅಭಿಮಾನಿಗಳಿಂದ ನಡೆಯಿತು.