ಭದ್ರಾವತಿ ನಗರಸಭೆ: ದಸರಾಗೆ ಭರದ ಸಿದ್ಧತೆ

KannadaprabhaNewsNetwork |  
Published : Oct 15, 2023, 12:46 AM IST
ಚಿತ್ರ: ಡಿ೧೪-ಬಿಡಿವಿಟಿ೨(ಎ)ಭದ್ರಾವತಿ ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ ನೇತೃತ್ವದ ತಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಮತ್ತು ಸಂಸದ ಬಿ.ವೈ ರಾಘವೇಂದ್ರ ಅವರನ್ನು ಭೇಟಿಯಾಗಿ ದಸರಾ ಆಚರಣೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನಿಸಲಾಗಿದೆ. | Kannada Prabha

ಸಾರಾಂಶ

ಬಿಎಸ್‌ವೈ- ಬಿವೈಆರ್‌ಗೆ ಆಹ್ವಾನ

ಭದ್ರಾವತಿ: ನಗರಸಭೆ ವತಿಯಿಂದ ನಾಡಹಬ್ಬ ದಸರಾ ಆಚರಣೆಗೆ ಭರದ ಸಿದ್ಧತೆಗಳು ನಡೆದಿದ್ದು, ಅ.15ರಂದು ಬೆಳಗ್ಗೆ ಸಮಾಜ ಸೇವಕ ಪಿ.ವೆಂಕಟರಮಣ ಶೇಟ್‌ ಚಾಲನೆ ನೀಡಲಿದ್ದಾರೆ. ನಾಡಹಬ್ಬ ಹಿನ್ನೆಲೆ ನಗರದ ವಿವಿಧೆಡೆ ಪ್ರಮುಖ ವೃತ್ತಗಳಲ್ಲಿ ಅಲಂಕಾರ ಕೈಗೊಳ್ಳಲಾಗಿದ್ದು, ಅದರಲ್ಲೂ ಈ ಬಾರಿ ವಿಶೇಷ ಎಂದರೆ ವಿದ್ಯುತ್ ದೀಪಗಳ ಅಲಂಕಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಈ ಬಾರಿ ಸಹ ನಗರಸಭೆ ಕಚೇರಿ ಕಲಾವಿದ ಗುರು ಅವರ ಕೈಚಳಕದಲ್ಲಿ ಕಂಗೊಳಿಸುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಬಿಎಸ್‌ವೈ- ಬಿವೈಆರ್‌ಗೆ ಆಹ್ವಾನ: ನಗರಸಭೆ ಅಧ್ಯಕ್ಷೆ ಶೃತಿ ಸಿ. ವಸಂತಕುಮಾರ್ ಕೆ.ಜಿ. ನೇತೃತ್ವದ ತಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಸಂಸದ ಬಿ.ವೈ. ರಾಘವೇಂದ್ರ ಅವರನ್ನು ಭೇಟಿಯಾಗಿ ದಸರಾ ಆಚರಣೆ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರು, ವಿಪ ಸದಸ್ಯರು, ಜಿಲ್ಲಾಧಿಕಾರಿ, ಜಿಲ್ಲಾ ಯೋಜನಾ ನಿರ್ದೇಶಕರು, ಗಣ್ಯರನ್ನು ಆಹ್ವಾನಿಸಲಾಗಿದೆ. ಪೌರಾಯುಕ್ತ ಎಚ್.ಎಂ. ಮನುಕುಮಾರ್, ದಸರಾ ಆಚರಣೆ ವಿವಿಧ ಸಮಿತಿಗಳ ಅಧ್ಯಕ್ಷರು, ಸದಸ್ಯರು ತಂಡದಲ್ಲಿ ಪಾಲ್ಗೊಂಡಿದ್ದರು. - - - -ಡಿ14-ಬಿಡಿವಿಟಿ2:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೈಲಲ್ಲೂ ದರ್ಶನ್‌ಗೆ ‘ಅಭಿಮಾನಿಗಳು’ ಕಾಟ!
ನಾಳೆ ಹಲವು ಸಾಧಕರಿಗೆ ಗಾಂಧಿ ಪುರಸ್ಕಾರ ಪ್ರದಾನ