ಹನಿಟ್ರ್ಯಾಪ್ ಪ್ರಕರಣದಲ್ಲಿ ಐವರ ಸೆರೆಹಿಡಿದ ಭದ್ರಾವತಿ ಪೊಲೀಸರು

KannadaprabhaNewsNetwork |  
Published : Nov 22, 2023, 01:00 AM IST
ಚಿತ್ರ: ಡಿ೨೧-ಬಿಡಿವಿಟಿ೨ಭದ್ರಾವತಿ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಹನಿಟ್ರ್ಯಾಪ್ ಪ್ರಕರಣವೊಂದನ್ನು ಬೇಧಿಸಿ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಘಟನೆ ನಡೆದಿದೆ. | Kannada Prabha

ಸಾರಾಂಶ

ಭದ್ರಾವತಿ ನಗರದ ಪೆಟ್ರೋಲ್ ಬಂಕ್‌ವೊಂದರಲ್ಲಿ ಕೆಲಸ ಮಾಡುತ್ತಿರುವ ಶರತ್‌ಕುಮಾರ್‌ಗೆ ಮೈಸೂರಿನಲ್ಲಿ ಬಸ್‌ನಲ್ಲಿ ಪ್ರಯಾಣಿಸುವಾಗ ಶ್ವೇತಾ ಪರಿಚಯ ಮಾಡಿಕೊಂಡಿದ್ದಳು. ಅನಂತರ ವಾಟ್ಸಪ್‌ನಲ್ಲಿ ಬೆತ್ತಲೆಯಾಗಿ ಮಹಿಳೆಯೋರ್ವಳು ವಿಡಿಯೋ ಕಾಲ್ ಮಾಡಿದ್ದಳು. ₹20 ಲಕ್ಷ ನೀಡುವಂತೆ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ. ಈ ಐವರ ತಂಡ ಶರತ್‌ಕುಮಾರ್ ಬಳಿ ₹1 ಲಕ್ಷ ಕಿತ್ತುಕೊಂಡಿದ್ದು ಅಲ್ಲದೇ, ಹಲ್ಲೆ ನಡೆಸಿ ಬಲವಂತವಾಗಿ ಮೈಸೂರಿಗೆ ಕರೆದುಕೊಂಡು ಹೋಗಿ ಒತ್ತಾಯ ಪೂರ್ವಕವಾಗಿ ₹25 ಲಕ್ಷ ಸಾಲ ಪಡೆದುಕೊಂಡಿರುವುದಾಗಿ ಸಹಿ ಹಾಕಿಸಿಕೊಂಡು ಎರಡು ದಿನಗಳ ಕಾಲ ಕೂಡಿ ಹಾಕಿದ್ದರು ಎನ್ನಲಾಗಿದೆ.

ಭದ್ರಾವತಿ: ನಗರದ ಹೊಸಮನೆ ಶಿವಾಜಿ ಸರ್ಕಲ್ ಠಾಣೆ ಪೊಲೀಸರು ಹನಿಟ್ರ್ಯಾಪ್ ಪ್ರಕರಣವೊಂದನ್ನು ಬೇಧಿಸಿ, ಮೈಸೂರಿನಲ್ಲಿ ಐವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಮೈಸೂರು ಮೂಲದ ಶ್ವೇತಾ, ವಿನಾಯಕ, ಮಹೇಶ್, ಅರುಣ್‌ಕುಮಾರ್ ಹಾಗೂ ಹೇಮಂತ್ ಬಂಧಿತರಾಗಿದ್ದು, 1 ಕಾರು ಮತ್ತು 7 ಮೊಬೈಲ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶರತ್‌ಕುಮಾರ ಎಂಬವರ ದೂರು ಆಧರಿಸಿ, ಕಾರ್ಯಾಚರಣೆ ಕೈಗೊಂಡಿದ್ದ ಪೊಲೀಸರು ಐವರನ್ನು ಬಂಧಿಸಿದ್ದಾರೆ.

ಘಟನೆ ವಿವರ:

ಭದ್ರಾವತಿ ನಗರದ ಪೆಟ್ರೋಲ್ ಬಂಕ್‌ವೊಂದರಲ್ಲಿ ಕೆಲಸ ಮಾಡುತ್ತಿರುವ ಶರತ್‌ಕುಮಾರ್‌ಗೆ ಮೈಸೂರಿನಲ್ಲಿ ಬಸ್‌ನಲ್ಲಿ ಪ್ರಯಾಣಿಸುವಾಗ ಶ್ವೇತಾ ಪರಿಚಯ ಮಾಡಿಕೊಂಡಿದ್ದಳು. ಅನಂತರ ವಾಟ್ಸಪ್‌ನಲ್ಲಿ ಬೆತ್ತಲೆಯಾಗಿ ಮಹಿಳೆಯೋರ್ವಳು ವಿಡಿಯೋ ಕಾಲ್ ಮಾಡಿದ್ದಳು. ₹20 ಲಕ್ಷ ನೀಡುವಂತೆ ಬೆದರಿಕೆ ಹಾಕಲಾಗಿತ್ತು ಎನ್ನಲಾಗಿದೆ.

ಈ ಐವರ ತಂಡ ಶರತ್‌ಕುಮಾರ್ ಬಳಿ ₹1 ಲಕ್ಷ ಕಿತ್ತುಕೊಂಡಿದ್ದು ಅಲ್ಲದೇ, ಹಲ್ಲೆ ನಡೆಸಿ ಬಲವಂತವಾಗಿ ಮೈಸೂರಿಗೆ ಕರೆದುಕೊಂಡು ಹೋಗಿ ಒತ್ತಾಯ ಪೂರ್ವಕವಾಗಿ ₹25 ಲಕ್ಷ ಸಾಲ ಪಡೆದುಕೊಂಡಿರುವುದಾಗಿ ಸಹಿ ಹಾಕಿಸಿಕೊಂಡು ಎರಡು ದಿನಗಳ ಕಾಲ ಕೂಡಿ ಹಾಕಿದ್ದರು ಎನ್ನಲಾಗಿದೆ.

ಮೈಸೂರಿನಿಂದ ತಪ್ಪಿಸಿಕೊಂಡು ಬಂದ ಶರತ್‌ಕುಮಾರ್ ಅವರು, ಹೊಸಮನೆ ಶಿವಾಜಿ ಸರ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರನ್ನು ಆಧರಿಸಿ, ಹಣ ವರ್ಗಾವಣೆ ಮಾಹಿತಿ ಕಲೆಹಾಕಿ, ಕಾರ್ಯಾಚರಣೆ ಕೈಗೊಂಡಿದ್ದ ಪೊಲೀಸರು, ಐವರ ತಂಡವನ್ನು ಮೈಸೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

- - -

-ಡಿ21ಬಿಡಿವಿಟಿ2:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವ್ಯಕ್ತಿಯ ಅಕ್ರಮ ಬಂಧನದಲ್ಲಿಟ್ಟಿದ್ದಕ್ಕೆ ಸರ್ಕಾರಕ್ಕೆ ದಂಡ!
ಯಶವಂತಪುರ ಮೆಟ್ರೋ ಪ್ರವೇಶದ್ವಾರ ಸ್ಥಳಾಂತರ