ಭದ್ರಾವತಿ: ನಗರಸಭೆ ವ್ಯಾಪ್ತಿಯ ನ್ಯೂಟೌನ್, ಕೂಲಿಬ್ಲಾಕ್ ಶೆಡ್, ಆಂಜನೇಯ ಅಗ್ರಹಾರದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಶ್ರೀ ಮಾರಿಯಮ್ಮ ಅಖಾಡ ಪೊಂಗಲ್ ಕಮಿಟಿಯಿಂದ ೫೭ನೇ ವರ್ಷದ ಸಂಕ್ರಾಂತಿ ಮತ್ತು ಪೊಂಗಲ್ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಶುಕ್ರವಾರ ರೋಮಾಂಚನಕಾರಿ ಗೂಳಿಗಳ ಓಟದ ಸ್ಪರ್ಧೆ ನಡೆಯಿತು.
ಶುಕ್ರವಾರ ಬೆಳಿಗ್ಗೆ ೧೦.೩೦ಕ್ಕೆ ರೋಮಾಂಚನಕಾರಿ `ಗೂಳಿಗಳ ಓಟದ ಸ್ಪರ್ಧೆ ನಡೆಯಿತು. ಸರ್ಕಾರದ ೫ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಅಧ್ಯಕ್ಷ ಬಿ.ಎಸ್ ಗಣೇಶ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಬಿ.ಕೆ ಶಿವಕುಮಾರ್, ನಗರಸಭೆ ಸದಸ್ಯರಾದ ಮಣಿ ಎಎನ್‌ಎಸ್, ಕೆ. ಸುದೀಪ್‌ಕುಮಾರ್, ನಗರ ಆಶ್ರಯ ಸಮಿತಿ ಅಧ್ಯಕ್ಷ ಬಿ.ಎಸ್ ಗೋಪಾಲ್, ಮೆಸ್ಕಾಂ ಸಲಹಾ ಸಮಿತಿ ತಾಲೂಕು ಅಧ್ಯಕ್ಷ ಬಸವಂತಪ್ಪ, ಮುಖಂಡ ವಿಲ್ಸನ್‌ಬಾಬು ಸೇರಿದಂತೆ ಸಮಿತಿ ಪದಾಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಗೂಳಿಗಳ ಓಟದ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ವಿವಿಧೆಡೆಗಳಿಂದ ಗೂಳಿಗಳನ್ನು ಕರೆ ತರಲಾಗುತ್ತಿದೆ. ಆಂಜನೇಯ ಅಗ್ರಹಾರ, ನ್ಯೂಟೌನ್, ಕಾಗದನಗರ, ಹುಡ್ಕೋ ಕಾಲೋನಿ, ವಿದ್ಯಾಮಂದಿರ, ಗಣೇಶ್ ಕಾಲೋನಿ, ಜನ್ನಾಪುರ ಸೇರಿದಂತೆ ಸುತ್ತಮುತ್ತಲ ನಿವಾಸಿಗಳು ಸ್ಪರ್ಧೆ ವೀಕ್ಷಿಸಲು ಆಗಮಿಸಿದ್ದರು.