ಭಗತ್‌ಸಿಂಗ್ ದೇಶದ ಅಪ್ರತಿಮ ಸ್ವಾತಂತ್ರ‍್ಯ ಹೋರಾಟಗಾರ : ಆನೇಗುಂದಿ

KannadaprabhaNewsNetwork |  
Published : Oct 26, 2024, 01:03 AM IST
ಶಹಾಪುರ ನಗರದ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘಟನೆಯಿಂದ ನಡೆದ ಕ್ರಾಂತಿಕಾರಿ ಭಗತ್ ಸಿಂಗ್ ಜನ್ಮಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿ ಗೌರವಿಸಲಾಯಿತು. | Kannada Prabha

ಸಾರಾಂಶ

Bhagatsingh is a unique freedom fighter of the country: Anegundi

- ಕ್ರಾಂತಿಕಾರಿ ಭಗತ್ ಸಿಂಗ್ 117ನೇ ಜನ್ಮದಿನಾಚರಣೆ

- ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಣೆ

ಕನ್ನಡಪ್ರಭ ವಾರ್ತೆ ಶಹಾಪುರ

ಭಗತ್‌ ಸಿಂಗ್‌ ಸ್ವಾತಂತ್ರ್ಯ ಪಡೆಯಲು ಜೀವನವನ್ನೇ ಮುಡಿಪಾಗಿಟ್ಟದ್ದರು. ದೇಶಕ್ಕಾಗಿ ನಗುನಗುತ್ತಲೇ ನೇಣುಕಂಬ ಏರಿದ ಮಹಾನ್‌ ಸ್ವಾತಂತ್ರ ಹೋರಾಟಗಾರ. ದೇಶದ ಅಪ್ರತಿಮ ಸ್ವಾತಂತ್ರ‍್ಯ ಹೋರಾಟಗಾರ ಕ್ರಾಂತಿಕಾರಿ ಭಗತ್ ಸಿಂಗ್ ಅವರ ತತ್ವ ಆದರ್ಶಗಳು ಯುವ ಸಮುದಾಯಕ್ಕೆ ಮಾದರಿ. ಅನ್ಯಾಯ, ದೌರ್ಜನ್ಯಗಳು ನಡೆದಾಗ ಅದನ್ನು ಪ್ರಶ್ನಿಸುವಂತಹ ಹೋರಾಟ ಮನೋಭಾವ ಯುವ ಸಮೂಹ ಬೆಳೆಸಿಕೊಳ್ಳಬೇಕಿದೆ ಎಂದು ನಂತರ ರೈತ ಸಂಘದ ಜಿಲ್ಲಾಧ್ಯಕ್ಷ ಚೆನ್ನಪ್ಪ ಆನೇಗುಂದಿ ತಿಳಿಸಿದರು.

ನಗರದ ಸರ್ಕಾರಿ ಬಾಲಕಿಯರ ಶಾಲಾ ಆವರಣದಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕರ ಸಂಘದಿಂದ ನಡೆದ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ 117ನೇ ಜನ್ಮ ದಿನಾಚರಣೆ ಹಾಗೂ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಬುಕ್ ಮತ್ತು ಪೆನ್ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಅನಕ್ಷರತೆ, ಅಸಮಾನತೆ ಹೋಗಲಾಡಿಸಿ ಸರ್ವರಿಗೂ ಶಿಕ್ಷ ಣ, ಉದ್ಯೋಗ ಭದ್ರತೆ ನೀಡಬೇಕು ಎನ್ನುವ ಉದ್ದೇಶವನ್ನು ಭಗತ್‌ ಸಿಂಗ್‌ ಹೊಂದಿದ್ದರು. ಯುವಶಕ್ತಿ ಪ್ರಜಾಪ್ರಭುತ್ವಕ್ಕೆ ಪೂರಕವಾಗುವ ಕೆಲಸ ಮಾಡಬೇಕಿದೆ. ದೇಶದ ಸ್ವಾತಂತ್ರ‍್ಯಕ್ಕಾಗಿ ತಮ್ಮ 23ನೇ ವಯಸ್ಸಿನಲ್ಲಿಯೇ ಭಗತ್‌ ಸಿಂಗ್‌ ಅವರು ತಮ್ಮ ಪ್ರಾಣಭಯವಿಲ್ಲದೆ ನಗುತ್ತಲೇ ನೇಣಿಗೆ ಕೊರಳೊಡ್ಡಿದ್ದರು. ಅಂತಹ ಮಹಾತ್ಮನಿಗೆ ನಾವೆಲ್ಲರೂ ಕೃತಜ್ಞತೆ ಸಮರ್ಪಿಸುವದು ಅಗತ್ಯವಿದೆ ಎಂದರು.

ಇದೇ ಸಂದರ್ಭದಲ್ಲಿ ಕಾರ್ಮಿಕ ಸಂಘಟನೆಯಿಂದ ಸುಮಾರು 800ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೋಟ್‌ಬುಕ್, ಪೆನ್‌ಗಳ ವಿತರಿಸಲಾಯಿತು. ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ನೀಡಿ ಗೌರವಿಸಲಾಯಿತು.

ಮಾಲಹಳ್ಳಿ ಶಿಕ್ಷಕ ನಾಗರಾಜ ಇಬ್ರಾಹಿಂಪುರ ಮತ್ತು ಸುರಪುರ ಸಚಿನ್ ಕುಮಾರ ನಾಯಕ ಭಗತ್ ಸಿಂಗ್ ಕುರಿತು ಉಪನ್ಯಾಸ ನೀಡಿದರು.

ಶಾಲೆ ಉಪ ಪ್ರಾಂಶುಪಾಲ ವೆಂಕೋಬಾ ಪಾಟೀಲ್ ಮಾತನಾಡಿದರು. ಸಮಾಜ ಕಲ್ಯಾಣ ಇಲಾಖೆಯ ವ್ಯವಸ್ಥಾಪಕ ಬಾಲರಾಜ್ ಕಾರ್ಯಕ್ರಮ ಉದ್ಘಾಟಿಸಿದರು. ಸರ್ಕಾರಿ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಯಲ್ಲಪ್ಪ ಪೋಲಿಸ್‌ ಪಾಟೀಲ್ ಹುಲಕಲ್ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮುದ್ನೂರ, ಹಿರಿಯ ಪತ್ರಕರ್ತ ಈರಣ್ಣ ಹಾದಿಮನಿ, ರಾಜಶೇಖರ ಪಾಟೀಲ್, ನಗರಸಭೆ ಸದಸ್ಯರಾದ ಶಿವಕುಮಾರ ತಳವಾರ, ಸತೀಶ ಪಂಚಭಾವಿ ಮತ್ತು ಸಾಮಾಜಿಕ ಹೋರಾಟಗಾರ ಮಾನಪ್ಪ ಹಡಪದ ಸೇರಿದಂತೆ ಮಾಳಪ್ಪ ಯಾದವ್, ಸುನೀಲ್ ಅಣಬಿ, ಸಂಘದ ಸಂಸ್ಥಾಪಕ ಅಧ್ಯಕ್ಷ ಪ್ರದೀಪ ಅಣಬಿ ಉಪಸ್ಥಿತರಿದ್ದರು. ಸಂಘಟನೆಯ ಪ್ರಮುಖರಾದ ವೆಂಕಟೇಶ ನಾಯಕ ಆಲ್ದಾಳ, ಬೋಜಪ್ಪ ಮುಂಡಾಸ, ಅಂಬ್ರೇಶ ಶಿರವಾಳ, ಸಂಗಮೇಶ್ವರ, ಶರಣು ದಿಗ್ಗಿ, ಪ್ರಕಾಶ ದಿಗ್ಗಿ, ದೇವಪ್ಪ ಇದ್ದರು.

----

25ವೈಡಿಆರ್‌4 : ಶಹಾಪುರ ನಗರದ ಸರ್ಕಾರಿ ಬಾಲಕಿಯರ ಶಾಲೆಯಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಕಟ್ಟಡ ಕಾರ್ಮಿಕ ಸಂಘಟನೆಯಿಂದ ನಡೆದ ಕ್ರಾಂತಿಕಾರಿ ಭಗತ್ ಸಿಂಗ್ ಜನ್ಮಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ವಿತರಿಸಿ ಗೌರವಿಸಲಾಯಿತು.

PREV

Recommended Stories

ರಾಹುಲ್‌ ಗಾಂಧಿ ಧರಣಿಗೆ 4500 ಪೊಲೀಸರ ಭದ್ರತೆ
ಹಳಿತಪ್ಪಿದ ಬೆಂಗಳೂರು ಉಪನಗರ ರೈಲು ಯೋಜನೆ : ಕೆ-ರೈಡ್ ಜತೆಗಿನ ಎಲ್‌ ಆ್ಯಂಡ್‌ ಟಿ ಗುತ್ತಿಗೆ ರದ್ದು