ಭಗವಾನ್ ಮಹಾವೀರರ ಸಂದೇಶ ಸಾರ್ವಕಾಲಿಕ-ಮೈದೂರ

KannadaprabhaNewsNetwork |  
Published : Mar 31, 2026, 02:30 AM IST
ಹಾವೇರಿ ನಗರದ ಶ್ರೀ ನೇಮಿನಾಥ ದಿಗಂಬರ ಜೈನ ಮಂದಿರದಲ್ಲಿ ಆಯೋಜಿಸಿದ್ದ ಭಗವಾನ್ ಶ್ರೀ 1008 ಮಹಾವೀರ ಜಯಂತಿ ಕಾರ್ಯಕ್ರಮವನ್ನು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರ ಉದ್ಘಾಟಿಸಿದರು. | Kannada Prabha

ಸಾರಾಂಶ

ಜಗತ್ತಿಗೆ ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವನ್ನು ತೋರಿಸಿದವರು ಮಹಾವೀರ ಭಗವಂತರು. ಅವರ ಸತ್ಯ, ಅಹಿಂಸೆ, ತ್ಯಾಗದ ಸಂದೇಶ ಸಾರ್ವಕಾಲಿಕವಾಗಿದೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರ ಹೇಳಿದರು.

ಹಾವೇರಿ: ಜಗತ್ತಿಗೆ ಅಹಿಂಸೆ, ಸತ್ಯ ಮತ್ತು ತ್ಯಾಗದ ಮಾರ್ಗವನ್ನು ತೋರಿಸಿದವರು ಮಹಾವೀರ ಭಗವಂತರು. ಅವರ ಸತ್ಯ, ಅಹಿಂಸೆ, ತ್ಯಾಗದ ಸಂದೇಶ ಸಾರ್ವಕಾಲಿಕವಾಗಿದೆ ಎಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರ ಹೇಳಿದರು.ನಗರದ ಶ್ರೀ ನೇಮಿನಾಥ ದಿಗಂಬರ ಜೈನ ಮಂದಿರದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಭಗವಾನ್ ಶ್ರೀ 1008 ನೇಮಿನಾಥ ದಿಗಂಬರ ಜೈನ್ ಮಂದಿರ ಕಮಿಟಿ ಸಹಯೋಗದಲ್ಲಿ ಆಯೋಜಿಸಲಾದ ಭಗವಾನ್ ಶ್ರೀ 1008 ಮಹಾವೀರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಹಾತ್ಮ ಗಾಂಧೀಜಿ ಅವರು ಅಹಿಂಸಾ ಮಾರ್ಗದಿಂದ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟರು. ಅಹಿಂಸಾ ಮಾರ್ಗಕ್ಕೆ ದೊಡ್ಡ ಶಕ್ತಿ ಇದೆ. ಆದರೆ ಇಂದು ಗಲ್ಭ್ ರಾಷ್ಟ್ರಗಳಲ್ಲಿ ಯುದ್ಧ ನಡೆಯುತ್ತಿರುವುದು ವಿಷಾದದ ಸಂಗತಿಯಾಗಿದೆ. ಮಾನವಧರ್ಮ ಶ್ರೇಷ್ಠ ಧರ್ಮ ಎಂದು ಶರಣರು ಹೇಳಿದ್ದಾರೆ. ಹಾಗಾಗಿ ಎಲ್ಲರೂ ಪರಸ್ಪರ ಪ್ರೀತಿ, ವಿಶ್ವಾಸದಿಂದ ಬದುಕಬೇಕು ಹಾಗೂ ಸಹೋದರ ಮನೋಭಾವನೆ ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಸತ್ಯ, ಅಹಿಂಸೆ, ತ್ಯಾಗದ ಮನೋಭಾವ ಅಳವಡಿಸಿಕೊಂಡು ಉತ್ತಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಶ್ರಮಿಶೋಣ ಎಂದು ಕರೆ ನೀಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ ಮಾತನಾಡಿ, ಜೈನ ಧರ್ಮ ಶ್ರೇಷ್ಠ ಧರ್ಮವಾಗಿದೆ ಹಾಗೂ ಜೈನ ಪರಂಪರೆ ಕೊಡುಗೆ ಅಪಾರವಾಗಿದೆ. ಭಗವಾನ್ ಮಹಾವೀರರು ಜೀವಿಸು, ಜೀವಿಸಲು ಬಿಡು ಎಂಬ ಉತ್ತಮ ಸಂದೇಶ ನೀಡಿದ್ದಾರೆ. ಇಂತಹ ಮಹಾನ್ ವ್ಯಕ್ತಿಗಳ ತತ್ವಾದರ್ಶಗಳನ್ನು ತಿಳಿದುಕೊಳ್ಳಬೇಕು ಹಾಗೂ ಬದುಕಿನಲ್ಲಿ ಅಳವಡಿಕೊಳ್ಳಬೇಕು ಎಂದು ಹೇಳಿದರು.ವಿದ್ಯಾ ಹಳ್ಳಿಯವರ ಭಗವಾನ್ ಮಹಾವೀರ ಅವರ ಬಗ್ಗೆ ಉಪನ್ಯಾಸ ನೀಡಿದರು.ಭಗವಾನ್ ಶ್ರೀ 1008 ನೇಮಿನಾಥ ದಿಗಂಬರ ಜೈನ್ ಮಂದಿರ ಕಮಿಟಿ ಅಧ್ಯಕ್ಷ ಚಂದ್ರನಾಥ ಕಳಸೂರ ಅಧ್ಯಕ್ಷತೆ ವಹಿದ್ದರು.ಕಾರ್ಯಕ್ರಮದಲ್ಲಿ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಸದಸ್ಯೆ ಪರಿಮಳಾ ಜೈನ್, ಶಿರಸ್ತೇದಾರ ನಾಗರಾಜ ಕನವಳ್ಳಿ, ಹಾವೇರಿ ಜಿಲ್ಲಾ ದಿಗಂಬರ ಜೈನ ಸಂಘದ ಅಧ್ಯಕ್ಷ ಮಂಜಪ್ಪ ತಡಸದ, ರತ್ನತ್ರಯ ಮಹಿಳಾ ಸಮಾಜದ ಅಧ್ಯಕ್ಷೆ ಪುಷ್ಪ ಕಳಸೂರ, ಮಿಠಲಾಲ್ ಜೈನ್ ಇತರರು ಇದ್ದರು. ವಿಮಲ್ ಭೋಗಾರ, ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.ಮೆರವಣಿಗೆಗೆ ಚಾಲನೆ: ಭಗವಾನ್ ಮಹಾವೀರರ ಜಿನಬಿಂಬ ಮೆರವಣಿಗೆಗೆ ಚಾಲನೆ ನೀಡಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ವಿಜೃಂಭಣೆಯಿಂದ ಜರುಗಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವದಂತಿ ನಂಬಬೇಡಿ, ಆರೋಗ್ಯವಾಗಿದ್ದೇನೆ- ಶಾಸಕ ಶಿವಣ್ಣನವರ
ಭಗವಾನ್ ಮಹಾವೀರರು ತತ್ವಗಳು ಜೀವನ ಉನ್ನತೀಗೇರಿಸುವ ಮಾರ್ಗಗಳು