ಭಗೀರಥ ಮಹರ್ಷಿ ಸಮಸ್ತ ಮನುಕುಲದ ಉದ್ಧಾರಕ

KannadaprabhaNewsNetwork |  
Published : May 05, 2025, 12:49 AM IST
ಪೋಟೊ4ಕೆಎಸಟಿ1: ಕುಷ್ಟಗಿ ತಾಲೂಕಿನ ಕೇಸೂರು ಗ್ರಾಮ ಪಂಚಾಯತಿಯ ಕಾರ್ಯಾಲಯದಲ್ಲಿ ಭಗೀರಥ ಮಹರ್ಷಿಗಳ ಜಯಂತಿಯನ್ನು ಆಚರಿಸಲಾಯಿತು. | Kannada Prabha

ಸಾರಾಂಶ

ಲೋಕ ಕಲ್ಯಾಣಕ್ಕಾಗಿ ಭೂಮಿಗೆ ಗಂಗೆಯನ್ನು ತರುವಲ್ಲಿ ಕಠೋರ ತಪಸ್ಸು ಮಾಡಿದ ಭಗೀರಥರು ಸವಾಲು ಮತ್ತು ಸಮಸ್ಯೆಗಳಿಗೆ ಎಂದಿಗೂ ಎದೆಗುಂದಲಿಲ್ಲ

ಕುಷ್ಟಗಿ: ಸಮಸ್ತ ಮನುಕುಲದ ಉದ್ಧಾರಕ್ಕಾಗಿ ತನ್ನ ಜೀವನ ಮುಡುಪಾಗಿಟ್ಟ ಭಗೀರಥರಂತಹ ಮಹಾತ್ಮರ ಆದರ್ಶ ಮತ್ತು ತತ್ವ ಎಲ್ಲರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಪಿಡಿಒ ಗಂಗಯ್ಯ ವಸ್ತ್ರದ ಹೇಳಿದರು.

ತಾಲೂಕಿನ ಕೇಸೂರು ಗ್ರಾಪಂ ಕಾರ್ಯಾಲಯದಲ್ಲಿ ನಡೆದ ಭಗೀರಥ ಮಹರ್ಷಿ ಜಯಂತಿಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಾಜಿ ಗ್ರಾಪಂ ಸದಸ್ಯ ಮುತ್ತುರಾಜ ಹೊಸಲಕೊಪ್ಪ ಮಾತನಾಡಿ, ಲೋಕ ಕಲ್ಯಾಣಕ್ಕಾಗಿ ಭೂಮಿಗೆ ಗಂಗೆಯನ್ನು ತರುವಲ್ಲಿ ಕಠೋರ ತಪಸ್ಸು ಮಾಡಿದ ಭಗೀರಥರು ಸವಾಲು ಮತ್ತು ಸಮಸ್ಯೆಗಳಿಗೆ ಎಂದಿಗೂ ಎದೆಗುಂದಲಿಲ್ಲ. ಸಮಾಜಕ್ಕೆ ಒಳಿತು ಮಾಡಲು ಪರಮಾತ್ಮನನ್ನು ಒಲಿಸಿಕೊಂಡ ಮಹಾತ್ಮರು ಇವರ ತತ್ವಾದರ್ಶ ಅಳವಡಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಗ್ರಾಪಂ ಸದಸ್ಯ ಗುರುನಗೌಡ ಪಾಟೀಲ, ಯಂಕಪ್ಪ ದಾಸರ, ಶುಖರಾಜ ಈಳಗೇರ, ಶೇಖಪ್ಪ ಪೂಜಾರ, ವೀರಯ್ಯ ಮಳಿಮಠ, ಬಸವರಾಜ ಜಲಕಮಲದಿನ್ನಿ, ವಿವೇಕಾನಂದ ಸುರಪೂರ, ರಮೇಶ ಗೋಪಾಲನಾಯಕ ಸೇರಿದಂತೆ ಭಗೀರಥ ಸಮಾಜದ ಮುಖಂಡರು, ಯುವಕರು ಗ್ರಾಪಂ ಸಿಬ್ಬಂದಿಗಳು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಳದಿ ಮಾರ್ಗ: 9 ಮೆಟ್ರೋ ನಿಲ್ದಾಣ ಬಳಿ ಹೊಸ ಬಿಎಂಟಿಸಿ ನಿಲ್ದಾಣ
ವಿವಾಹ ಪವಿತ್ರವಾದ ಶಾಶ್ವತ ಸಮ್ಮಿಲನ : ಹೈಕೋರ್ಟ್‌