ಭಗವಾನ್ ಮಹಾವೀರರು ತತ್ವಗಳು ಜೀವನ ಉನ್ನತೀಗೇರಿಸುವ ಮಾರ್ಗಗಳು

KannadaprabhaNewsNetwork |  
Published : Mar 31, 2026, 02:30 AM IST
ಶಿಗ್ಗಾಂವಿಯ ಚನ್ನಪ್ಪ ಕುನ್ನೂರ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚನ್ನಪ್ಪ ಕುನ್ನೂರ ಕಾಲೇಜಿನ ಪ್ರಾಚಾರ್ಯ ಡಾ. ನಾಗರಾಜ ಜಿ. ದ್ಯಾಮನಕೊಪ್ಪ ವಹಿಸಿ ಮಾತನಾಡಿದರು. | Kannada Prabha

ಸಾರಾಂಶ

ಶಿಗ್ಗಾಂವಿಯ ಚನ್ನಪ್ಪ ಕುನ್ನೂರ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚನ್ನಪ್ಪ ಕುನ್ನೂರ ಕಾಲೇಜಿನ ಪ್ರಾಚಾರ್ಯ ಡಾ. ನಾಗರಾಜ ಜಿ. ದ್ಯಾಮನಕೊಪ್ಪ ವಹಿಸಿ ಮಾತನಾಡಿದರು.

ಶಿಗ್ಗಾಂವಿ: ಭಗವಾನ್ ಮಹಾವೀರರು ಸಾರಿದ ಅಹಿಂಸೆ, ಸತ್ಯ ಮತ್ತು ಅಪರಿಗ್ರಹ ತತ್ವಗಳು ಕೇವಲ ಧಾರ್ಮಿಕ ಉಪದೇಶಗಳಲ್ಲ, ಅವು ಮಾನವ ಜೀವನವನ್ನು ಉನ್ನತಿಗೇರಿಸುವ ಜೀವನ ಮಾರ್ಗಗಳು ಎಂದು ಚನ್ನಪ್ಪ ಕುನ್ನೂರ ಕಾಲೇಜಿನ ಪ್ರಾಚಾರ್ಯ ಡಾ. ನಾಗರಾಜ ಜಿ. ದ್ಯಾಮನಕೊಪ್ಪ ಹೇಳಿದರು. ಶಿಗ್ಗಾಂವಿಯ ಚನ್ನಪ್ಪ ಕುನ್ನೂರ ಸಮೂಹ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ಜರುಗಿದ ಭಗವಾನ್ ಮಹಾವೀರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇಂದಿನ ಕಲಹಭರಿತ ಸಮಾಜದಲ್ಲಿ ಈ ಮೌಲ್ಯಗಳ ಅಗತ್ಯತೆ ಇನ್ನಷ್ಟು ಹೆಚ್ಚಾಗಿದೆ ಎಂದು ಅಭಿಪ್ರಾಯಪಟ್ಟರು.ಮಹಾವೀರರ ಜೀವನ ಸಾಧನೆ ಕುರಿತು ಉಪನ್ಯಾಸ ನೀಡಿದ ಪ್ರೊ. ಎಂ. ಎಸ್. ಕುರಂದವಾಡ ಅವರು ಮಹಾವೀರರ ಜೀವನವೆಂಬುದು ತ್ಯಾಗ, ತಪಸ್ಸು ಮತ್ತು ಆತ್ಮಸಾಧನೆಯ ಪ್ರತಿರೂಪವಾಗಿದೆ. ಅವರ ಸಾಧನೆಗಳು ನಮಗೆ ನೈತಿಕ ಬದುಕಿನ ದಾರಿಯನ್ನು ತೋರಿಸುತ್ತವೆ ಎಂದು ಹೇಳಿದರು.

ಮಹಾವೀರರ ಬೋಧನೆಗಳ ಕುರಿತು ಉಪನ್ಯಾಸ ನೀಡಿದ ಇನ್ನೋರ್ವ ಶಿಕ್ಷಕ ಕೆ.ಜಿ. ಮಲ್ಲೂರ ಅವರು ಮಹಾವೀರರು ಬೋಧಿಸಿದ ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಯುವಪೀಳಿಗೆ ಅಳವಡಿಸಿಕೊಂಡರೆ, ಸಮಾಜದಲ್ಲಿ ಶಾಂತಿ ಮತ್ತು ಸೌಹಾರ್ದತೆಯ ವಾತಾವರಣ ನಿರ್ಮಾಣವಾಗುತ್ತದೆ ಎಂದು ಹೇಳಿದರು.ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜಿ.ಎಂ. ಅರಗೋಳ ಅವರು ಮಹಾವೀರರ ತತ್ವಗಳು ಕೇವಲ ಪಾಠ ಪುಸ್ತಕಗಳಲ್ಲಿ ಉಳಿಯದೇ, ನಮ್ಮ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಇನ್ನೋರ್ವ ಮುಖ್ಯ ಅತಿಥಿಯಾದ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯ ಎಂ.ಎ. ಗಾಣಿಗೇರ ಮಾತನಾಡಿ, ಮಕ್ಕಳಲ್ಲಿ ಸಣ್ಣ ವಯಸ್ಸಿನಿಂದಲೇ ಸತ್ಯ, ಅಹಿಂಸೆ, ದಯೆ ಮೊದಲಾದ ಮೌಲ್ಯಗಳನ್ನು ಬೆಳೆಸಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ಅಭಿಪ್ರಾಯಪಟ್ಟರು.ಪ್ರಾರಂಭದಲ್ಲಿ ಡಾ. ಕೆ. ಎಸ್. ಬರದೆಲಿ ಸ್ವಾಗತಿಸಿದರು. ಶಿಕ್ಷಕಿ ಆರ್. ವಿ. ಹಿರೇಗೌಡ್ರ ಕಾರ್ಯಕ್ರಮ ನಿರೂಪಿಸಿದರು. ಮಂಜುನಾಥ ಕಾಳಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವದಂತಿ ನಂಬಬೇಡಿ, ಆರೋಗ್ಯವಾಗಿದ್ದೇನೆ- ಶಾಸಕ ಶಿವಣ್ಣನವರ
ಅಕ್ಕಿಆಲೂರಿನಲ್ಲಿ ಹೆಸ್ಕಾಂ ಉಪವಿಭಾಗ ಶೀಘ್ರ ಆರಂಭ