ಭಜನೆಯು ವಿಭಜನೆಯನ್ನು ತಪ್ಪಿಸುತ್ತದೆ: ರತ್ನಾವತಿ ಜೆ. ಬೈಕಾಡಿ

KannadaprabhaNewsNetwork | Published : Oct 29, 2024 12:57 AM

ಸಾರಾಂಶ

ತೆಂಕನಿಡಿಯೂರಿನ ಶ್ರೀ ಕಾಳಿಕಾಂಬಾ ಭಜನಾ ಸಂಘವು ಶ್ರೀ ದೇವಿ ಮಹಿಳಾ ಮಂಡಳಿ ಮತ್ತು ಬಾಲಸಂಸ್ಕಾರ ಕೇಂದ್ರದ ಸಹಯೋಗದಲ್ಲಿ ಮನೆಮನೆಗೆ ಭಜನೆ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅದರಂತೆ ಯಶಸ್ವಿ ೫೦ ಮನೆಗಳಲ್ಲಿ ಕಾರ್ಯಕ್ರಮಗಳನ್ನು ಪೂರೈಸಿದ ಸಂದರ್ಭದಲ್ಲಿ ೫೧ನೇ ಭಜನಾ ಸೇವೆಯನ್ನು ಶ್ರೀದೇವಿ ಮಹಿಳಾ ಮಂಡಳಿಯ ವತಿಯಿಂದ ಶ್ರೀ ಕಾಳಿಕಾಂಬಾ ಭಜನಾ ಸಂಘದಲ್ಲಿ ಇತ್ತೀಚೆಗೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಇಲ್ಲಿನ ತೆಂಕನಿಡಿಯೂರಿನ ಶ್ರೀ ಕಾಳಿಕಾಂಬಾ ಭಜನಾ ಸಂಘವು ಶ್ರೀ ದೇವಿ ಮಹಿಳಾ ಮಂಡಳಿ ಮತ್ತು ಬಾಲಸಂಸ್ಕಾರ ಕೇಂದ್ರದ ಸಹಯೋಗದಲ್ಲಿ ಮನೆಮನೆಗೆ ಭಜನೆ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅದರಂತೆ ಯಶಸ್ವಿ ೫೦ ಮನೆಗಳಲ್ಲಿ ಕಾರ್ಯಕ್ರಮಗಳನ್ನು ಪೂರೈಸಿದ ಸಂದರ್ಭದಲ್ಲಿ ೫೧ನೇ ಭಜನಾ ಸೇವೆಯನ್ನು ಶ್ರೀದೇವಿ ಮಹಿಳಾ ಮಂಡಳಿಯ ವತಿಯಿಂದ ಶ್ರೀ ಕಾಳಿಕಾಂಬಾ ಭಜನಾ ಸಂಘದಲ್ಲಿ ಇತ್ತೀಚೆಗೆ ನಡೆಸಲಾಯಿತು.

ಈ ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಮಂಗಳೂರಿನ ಬೈಕಾಡಿ ಪ್ರತಿಷ್ಠಾನದ ಅಧ್ಯಕ್ಷೆ ರತ್ನಾವತಿ ಜೆ. ಬೈಕಾಡಿ, ಭಜನಾ ತಂಡದ ಸದಸ್ಯರನ್ನು ಅಭಿನಂದಿಸುತ್ತಾ, ಧಾರವಾಹಿ, ಮೊಬೈಲ್‌ ಗೀಳು ಅಂಟಿಸಿಕೊಳ್ಳುವುದಕ್ಕಿಂತ ಸಾಮೂಹಿಕ ಭಜನೆಯಲ್ಲಿ ತೊಡಗಿಕೊಳ್ಳುವುದರಿಂದ ಮನಸ್ಸು ಉಲ್ಲಸಿತವಾಗುತ್ತದೆ, ಮಕ್ಕಳಲ್ಲಿ ಆತ್ಮವಿಶ್ವಾಸ ಬೆಳೆಯುತ್ತದೆ. ಮಕ್ಕಳಲ್ಲಿ ಸಂಸ್ಕಾರ ಬೆಳೆಸಲು ಸಹಕರಿಸುವ ಇಂತಹ ಅತ್ಯತ್ತಮ ಕಾರ್ಯಕ್ರಮ ನಿರಂತರವಾಗಿ ಮುಂದುವರಿಯಲಿ ಎಂದು ಹೇಳಿದರು.ಭಜನಾ ತಂಡದ ಸದಸ್ಯ ಉಮೇಶ್‌ ಜೆ ಆಚಾರ್ಯ ಮಾತನಾಡಿ, ಪ್ರತಿ ಮನೆಯಿಂದ ಭಜನಾ ಸಂಘದ ಗರ್ಭಗುಡಿ ನಿರ್ಮಾಣಕ್ಕೆ ಕೊಡುಗೆ ಇರಲಿ ಎಂದು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಕ್ಕಳ, ಮಹಿಳೆಯರು ಮತ್ತು ಭಜನಾ ಸಂಘದ ಸದಸ್ಯರ ಸಹಕಾರದಿಂದ ಈ ಕಾರ್ಯಕ್ರಮ ಯಶಸ್ವಿಯಾಗಿದೆ ಎಂದು ಹೇಳುತ್ತಾ ಭಜನಾ ಸಂಘವನ್ನು ಕಟ್ಟಿ ಬೆಳೆಸಲು ದುಡಿದ ಹಿರಿಯರನ್ನು ಸ್ಮರಿಸಿದರು.ಈ ಸಂದರ್ಭದಲ್ಲಿ ನಿರಂತರ ಭಜನೆಗೆ ತಬಲಾದಲ್ಲಿ ಸಹಕರಿಸಿದ ಮನ್ವಿತ್‌ ಕೆ. ಆಚಾರ್ಯ ಮತ್ತು ಹಾರ್ಮೋನಿಯಂನಲ್ಲಿ ಸಹಕರಿಸಿದ ವಿಖ್ಯಾತ್‌ ಯು. ಆಚಾರ್ಯ ಇವರನ್ನು ಅಭಿನಂದಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಜನಾ ಸಂಘದ ಅಧ್ಯಕ್ಷ ಟಿ. ಕೃಷ್ಣ ಆಚಾರ್ಯ ವಹಿಸಿದ್ದು, ವೇದಿಕೆಯಲ್ಲಿ ಪ್ರಧಾನ ಅರ್ಚಕ ಜನಾರ್ದನ ಆಚಾರ್ಯ, ಶ್ರೀ ದೇವಿ ಮಹಿಳಾ ಮಂಡಳಿಯ ಗೌರವ ಅಧ್ಯಕ್ಷೆ ಅಪ್ಪಿ ಶಿವಯ್ಯ ಆಚಾರ್ಯ, ಅಧ್ಯಕ್ಷೆ ಸುಶೀಲಾ ವಾದಿರಾಜ ಆಚಾರ್ಯ ಉಪಸ್ಥಿತರಿದ್ದರು. ಸುಚಿತ್ರಾ ಆಚಾರ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸುಷ್ಮಾ ರಾಜೇಶ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿ, ಉದಯ ಜೆ. ಆಚಾರ್ಯ ವಂದಿಸಿದರು.

Share this article