ಸ್ವಸ್ಥ ಸಮಾಜ ನಿರ್ಮಾಣಕ್ಕೆ ಭಜನೆ ಪೂರಕ: ಡಾ. ವೀರೇಂದ್ರ ಹೆಗ್ಗಡೆ

KannadaprabhaNewsNetwork |  
Published : Sep 28, 2024, 01:18 AM IST
ಪರಿಷತ್ | Kannada Prabha

ಸಾರಾಂಶ

ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಮಾತನಾಡಿ ಹಿಂದಿನಿಂದಲೂ ಭಜನೆ ಇತ್ತು. ಆದರೆ ರಾಗ, ತಾಳಗಳ ಜ್ಞಾನಗಳ ಕೊರತೆ ಇತ್ತು. ಭಜನಾ ಕಮ್ಮಟದ ಮೂಲಕ ಶಿಸ್ತು, ರಾಗ, ತಾಳದ ಜ್ಞಾನ ಬಂದಿದೆ. ಭಜನಾ ಮಂಡಳಿಗೆ ಸ್ವರೂಪ ಸಿಕ್ಕಿದೆ. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದ ರೀತಿಯಲ್ಲಿ ಕುಣಿತ ಭಜನೆಯ ತರಬೇತಿ ನೀಡಬೇಕು ಎಂದರು.

ಕನ್ನಡಪ್ರಭ ವಾರ್ತೆ ಬೆಳ್ತಂಗಡಿ

ಸ್ವಸ್ಥ ಆರೋಗ್ಯವಂತ ಸಮಾಜ ನಿರ್ಮಾಣಕ್ಕೆ ಭಜನೆ ಪೂರಕ ಎಂದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಅವರು ಶುಕ್ರವಾರ ಧರ್ಮಸ್ಥಳದ ವಸಂತ ಮಹಲ್‌ನಲ್ಲಿ ನಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್‌ನ ವಿಶೇಷ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಮಕ್ಕಳಿಗೆ ಭಜನಾ ಸಂಸ್ಕಾರ ಕಲಿಸಿಕೊಡಲಾಗುತ್ತದೆ. ಭಜನೆಯ ಜೊತೆಗೆ ಶ್ಲೋಕಗಳು, ವಚನಗಳನ್ನು ಮುಂದಿನ ತಲೆಮಾರಿಗೆ ಕಲಿಸಬೇಕಾಗಿದೆ. ಸಮಾಜದಲ್ಲಿ ಸಂಸ್ಕಾರ, ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕಾಗಿದೆ. ಮದುವೆಯ ಮುಂಚಿನ ದಿನ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಗೃಹಪ್ರವೇಶ, ನಾಮಕರಣ ಕಾರ್ಯಕ್ರಮದಲ್ಲಿ ಭಜನೆ ನಡೆಯುತ್ತಿರುವುದು ಶ್ಲಾಘನೀಯ ಎಂದು ಡಾ. ಹೆಗ್ಗಡೆ ಹೇಳಿದರು.

ಡಾ. ಹೇಮಾವತಿ ವೀ. ಹೆಗ್ಗಡೆ ಮಾತನಾಡಿ ಭಜನಾ ಪರಿಷತ್ತಿನ ನಿರ್ವಹಣೆಗೆ ೨ ಮಂದಿ ಸಮನ್ವಯಾಧಿಕಾರಿಗಳನ್ನು ನಿಯೋಜಿಸಲಾಗಿದೆ. ಭಜನಾ ಮಂಡಳಿಗಳಿಗೆ ಗ್ರೇಡಿಂಗ್ ನೀಡಲಾಗುವುದು. ಭಜನಾ ಪರಿಷತ್ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮೋತ್ಥಾನ ಟ್ರಸ್ಟ್‌ ಮೂಲಕ ನಡೆಯುತ್ತಿದೆ. ಸಂಖ್ಯೆಗೆ ಮಹತ್ವ ನೀಡದೆ ಗುಣಮಟ್ಟಕೆ ಆದ್ಯತೆ ನೀಡಬೇಕು. ಪ್ರಸ್ತುತ ಭಜನಾ ಮಂಡಳಿಗಳಲ್ಲಿ ಮಹಿಳೆಯರ ಸಂಖ್ಯೆ ಅಧಿಕವಾಗಿದೆ. ಪರಿಷತ್‌ನವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಶ್ರೀಧಾಮ ಮಾಣಿಲದ ಶ್ರೀ ಮೋಹನದಾಸ ಸ್ವಾಮೀಜಿ ಮಾತನಾಡಿ ಹಿಂದಿನಿಂದಲೂ ಭಜನೆ ಇತ್ತು. ಆದರೆ ರಾಗ, ತಾಳಗಳ ಜ್ಞಾನಗಳ ಕೊರತೆ ಇತ್ತು. ಭಜನಾ ಕಮ್ಮಟದ ಮೂಲಕ ಶಿಸ್ತು, ರಾಗ, ತಾಳದ ಜ್ಞಾನ ಬಂದಿದೆ. ಭಜನಾ ಮಂಡಳಿಗೆ ಸ್ವರೂಪ ಸಿಕ್ಕಿದೆ. ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗದ ರೀತಿಯಲ್ಲಿ ಕುಣಿತ ಭಜನೆಯ ತರಬೇತಿ ನೀಡಬೇಕು ಎಂದರು.

ಭಜನಾ ಕಮ್ಮಟದ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್ ಪ್ರಾಸ್ತಾವಿಕವಾಗಿ ಮಾನತಾಡಿದರು. ಭಜನಾ ಕಮ್ಮಟದ ಕಾರ್ಯದರ್ಶಿ ವೀರು ಶೆಟ್ಟಿ, ಸದಸ್ಯ ಮಹಾವೀರ ಅಜ್ರಿ ಉಪಸ್ಥಿತರಿದ್ದರು.

ಭಜನಾ ಪರಿಷತ್‌ನ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್ ಸ್ವಾಗತಿಸಿದರು. ಸಮನ್ವಯಾಧಿಕಾರಿ ಸಂತೋಷ್ ಪಿ. ವರದಿ ವಾಚಿಸಿದರು. ಭಜನಾ ಪರಿಷತ್‌ನ ಉಪಾಧ್ಯಕ್ಷ ರಾಜೇಂದ್ರ ಕುಮಾರ್ ವಂದಿಸಿದರು. ಭಜನಾ ಪರಿಷತ್‌ನ ಸಮನ್ವಯಾಧಿಕಾರಿ ರಾಘವೇಂದ್ರ ಕಾರ್ಯಕ್ರಮ ನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಭ್ರಮದ ಕ್ರಿಸ್‌ಮಸ್‌ ಆಚರಣೆಗೆ ಕ್ಷಣಗಣನೆ
ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಶ್ರಮಿಸಲಿ: ಮಂಜುನಾಥ ಕಂಬಳಿ