ಕನ್ನಡಪ್ರಭ ವಾರ್ತೆ ಬೆಳ್ತಂಗಡಿ
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ೨೬ನೇ ವರ್ಷದ ಭಜನಾ ಕಮ್ಮಟದ ೩ನೇ ದಿನದ ಕಾರ್ಯಕ್ರಮದಲ್ಲಿ ಅವರು ಧಾರ್ಮಿಕ ಉಪನ್ಯಾಸ ನೀಡಿದರು.ಜನ್ಮದಿನಾಚರಣೆ, ಮದುವೆಯ ಬೆಳ್ಳಿಹಬ್ಬ, ಸುವರ್ಣಮಹೋತ್ಸವ, ಮಗುವಿನ ನಾಮಕರಣ ಮುಂತಾದ ಕಾರ್ಯಕ್ರಮಗಳನ್ನು ಭಜನಾಮಂದಿರಗಳಲ್ಲಿ ಮಾಡಿದರೆ ಸಮಾಜದ ಸಂಘಟನೆ ಮತ್ತು ಬಲವರ್ಧನೆಯೂ ಆಗುತ್ತದೆ ಎಂದು ಅವರು ಹೇಳಿದರು.
ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ, ಹೇಮಾವತಿ ವಿ. ಹೆಗ್ಗಡೆ, ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹಾಜರಿದ್ದರು.ಸಂಪನ್ಮೂಲ ವ್ಯಕ್ತಿ ಮಣಿಪಾಲದ ಸಂಗೀತ ವಿದುಷಿ ಉಷಾ ಹೆಬ್ಬಾರ್ ಹಾಗೂ ಮಣಿಪಾಲದ ಕೆ. ಆರ್. ರಾಘವೇಂದ್ರ ಭಜನಾ ತರಬೇತಿ ನೀಡಿದರು.
ರಂಗಶಿವ ಕಲಾಬಳಗ, ಧರ್ಮಸ್ಥಳ ಇವರಿಂದ ರಂಗಗೀತೆ ಹಾಗೂ ವಿವಿಧ ಗೀತೆಗಳ ಪ್ರಾತ್ಯಕ್ಷಿಕೆ ನಡೆಯಿತು. ಯೋಗ ತರಬೇತಿಯನ್ನು ಡಾ. ಐ. ಶಶಿಕಾಂತ್ ಜೈನ್ ನಡೆಸಿಕೊಟ್ಟರು. ಭಜನಾ ಕಮ್ಮಟದ ರಾಜ್ಯ ಸಂಚಾಲಕ ಸುಬ್ರಹ್ಮಣ್ಯ ಪ್ರಸಾದ್, ಕಾರ್ಯದರ್ಶಿಗಳಾದ ಎ. ವೀರು ಶೆಟ್ಟಿ, ಕೋಶಾಧಿಕಾರಿ ಧನ್ಯಕುಮಾರ್, ಸದಸ್ಯರಾದ ಶ್ರೀನಿವಾಸರಾವ್, ರತ್ನವರ್ಮ ಜೈನ್ ದಿನದ ಕಾರ್ಯಕ್ರಮ ಸಂಘಟಿಸಿದರು, ಶ್ರೀಜಾ ಕಾರ್ಯಕ್ರಮ ನಿರೂಪಿಸಿದರು.ಭಜನಾ ಪರಿಷತ್ ಅಧ್ಯಕ್ಷ ಚಂದ್ರಶೇಖರ ಸಾಲ್ಯಾನ್, ಉಪಾಧ್ಯಕ್ಷ ರಾಜೇಂದ್ರ ಕುಮಾರ್ ಸದಸ್ಯರಾದ ವಸಂತ್ ಭಟ್, ಮಹಾವೀರ ಅಜ್ರಿ, ಸೀತಾರಾಮ ತೋಳ್ಪಾಡಿತ್ತಾಯ, ಪದ್ಮರಾಜ್ ಜೈನ್ ಸಹಕರಿಸಿದರು.
ಕುಣಿತ ಭಜನೆ ತರಬೇತಿಯನ್ನು ಸಂದೇಶ, ವಿನ್ಯಾಸ್, ನಾಗೇಶ್ ಹಾಗೂ ಶ ಚೈತ್ರ ನಡೆಸಿಕೊಟ್ಟರು. ಸಮನ್ವಯ ಅಧಿಕಾರಿಗಳಾದ ರಾಘವೇಂದ್ರ ಮತ್ತು ಸಂತೋಷ್ ಪಿ. ಕರ್ತವ್ಯ ನಿರ್ವಹಿಸಿದರು.