ಫೆಬ್ರವರಿ 23ರಂದು ಭಾಲಾವಾಲಿಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾಸಂಘ ಶತಮಾನೋತ್ಸವ ಸಮಾರೋಪ

KannadaprabhaNewsNetwork |  
Published : Feb 21, 2025, 12:45 AM IST
23 | Kannada Prabha

ಸಾರಾಂಶ

ಪುತ್ತೂರಿನ ಭಾಲಾವಾಲಿಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾಸಂಘದ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ ಹಾಗೂ ಸರಸ್ವತಿ ಎಜ್ಯುಕೇಶನ್ ಸೊಸೈಟಿ ಪುತ್ತೂರು ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ಫೆ.೨೩ರಂದು ಆರ್ಯಾಪು ಗ್ರಾಮದ ಸಂಟ್ಯಾರ್ ಸರಸ್ವತಿಪುರಂ ನಲ್ಲಿ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಪುತ್ತೂರು

ಭಾಲಾವಾಲಿಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಮಾಜ ಸೇವಾಸಂಘ ಪುತ್ತೂರು ಇದರ ಶತಮಾನೋತ್ಸವ ಸಮಾರೋಪ ಕಾರ್ಯಕ್ರಮ ಹಾಗೂ ಸರಸ್ವತಿ ಎಜ್ಯುಕೇಶನ್ ಸೊಸೈಟಿ ಪುತ್ತೂರು ನೂತನ ಕಟ್ಟಡ ಲೋಕಾರ್ಪಣೆ ಕಾರ್ಯಕ್ರಮ ೨೩ರಂದು ಆರ್ಯಾಪು ಗ್ರಾಮದ ಸಂಟ್ಯಾರ್ ಸರಸ್ವತಿಪುರಂ ನಲ್ಲಿ ನಡೆಯಲಿದೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಬಾಲಕೃಷ್ಣ ನಾಯಕ್ ಅಜೇರು, ೧೦೨ ವರ್ಷಗಳ ಹಿಂದೆ ಬಂಟ್ವಾಳದಲ್ಲಿ ಆರಂಭಗೊಂಡ ಭಾಲಾವಾಲಿಕಾರ್ ಗೌಡ ಸಾರಸ್ವತ ಬ್ರಾಹ್ಮಣ ಸಂಘ ಇಂದು ಆಳವಾಗಿ ಬೆಳೆದಿದೆ. ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಸಮಾಜಬಂಧುಗಳ ಕುಂದುಕೊರತೆಗಳನ್ನು ನಿವಾರಿಸುವ ಪ್ರಯತ್ನ ಮಾಡಿದೆ. ಬಡ ವರ್ಗದ ಮಂದಿಗೆ ಮನೆ ನಿರ್ಮಿಸಿ ಹಸ್ತಾಂತರ ಮಾಡಲಾಗಿದೆ. ಎಲ್ಲಾ ತಾಲೂಕುಗಳಲ್ಲಿ ಸಂಘಟನೆ ಮಾಡಲಾಗಿದೆ. ಇದೀಗ ಶತಮಾನೋತ್ಸವದ ಹಿನ್ನಲೆಯಲ್ಲಿಯೂ ಹಲವು ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ ಎಂದರು.

ಸಮಾರೋಪ:

ಶತಮಾನೋತ್ಸವ ಸಮಾರೋಪ ಕಾರ್ಯಕ್ರಮದಲ್ಲಿ ಮುಂಜಾನೆ ೩ಗಂಟೆಗೆ ಸಾಮೂಹಿಕ ಯೋಗ ಧ್ಯಾನ ಸೂರ್ಯ ನಮಸ್ಕಾರ, ೯ ಗಂಟೆಗೆ ಗಣಪತಿ ಹವನ, ಚಂಡಿಕಾ ಹವನ, ಶಿವಪೂಜೆ, ಸತ್ಯನಾರಾಯಣ ಪೂಜೆ ನಡೆಯಲಿದೆ. ೧೦ ಗಂಟೆಗೆ ಸಂಘದ ಅಧ್ಯಕ್ಷ ಬಾಲಕೃಷ್ಣನಾಯಕ್ ಅಜೇರು ಸಭಾಧ್ಯಕ್ಷತೆಯಲ್ಲಿ ಸರಸ್ವತಿಸದನ ಲೋಕಾರ್ಪಣೆಯಾಗಲಿದೆ.

ಕಾರ್ಯಕ್ರಮದಲ್ಲಿ ಬೆಂಗಳೂರು ಸರಸ್ವತಿಪುರಂ ಶ್ರೀಗುಣಾತ್ಮಕ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷರಾದ ಬಿ.ಶಂಕರ ನಾಯಕ್ ದೀಪಪ್ರಜ್ವಲನೆ ಮಾಡಲಿದ್ದಾರೆ. ಮಾಜಿ ಎಂಎಲ್‌ಸಿ ಅಣ್ಣಾ ವಿನಯಚಂದ್ರ ಸರಸ್ವತಿ ಸದನ ಲೋಕಾರ್ಪಣೆ ಮಾಡಲಿದ್ದಾರೆ. ಬೆಳ್ತಂಗಡಿ ಮಾರುತಿಪುರದ ರೈತಬಂಧು ಆಹಾರೋದ್ಯಮಿ ಶಿವಶಂಕರ ನಾಯಕ್ ಸ್ಮರಣಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಶತಮಾನೋತ್ಸವ ಸಮಿತಿ ಅಧ್ಯಕ್ಷರಾದ ಎಸ್.ಆರ್.ಸತೀಶ್ಚಂದ್ರ ಶತಮಾನದ ಶತನಮನ ಮಾಡಲಿದ್ದಾರೆ. ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಎಂ.ಗೋಕುಲ್ ದಾಸ್ ನಾಯಕ್ ಅಭಿನಂದನಾ ಮಾತುಗಳನ್ನಾಡಲಿದ್ದಾರೆ. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ನಿರ್ದೇಶಕರಾದ ಬಿ.ಸದಾಶಿವ ಪ್ರಭು ಎಳ್ಳಾರೆ, ತೀರ್ಥಹಳ್ಳಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮಧುಸೂಧನ್ ಎ, ಸರಸ್ವತಿ ಎಜ್ಯುಕೇಶನ್ ಸೊಸೈಟಿ ಅಧ್ಯಕ್ಷ ರಾಜಗೋಪಾಲ ಬಾಳೆಗುಳಿ, ಸಾರಸ್ವತ ಸಂಘಸಂಸ್ಥೆಗಳ ಕೇಂದ್ರೀಯ ಸಮಿತಿ ಅಧ್ಯಕ್ಷ ಉಮೇಶ್ ಪ್ರಭು, ದೋಹಾ ಕತಾರ್ ವಸಂತಕುಮಾರ್ ಕೆ, ರಾಜಾಪುರ ಸಾರಸ್ವತ ಸಮಾಜದ ಗೌರವ ಕಾರ್ಯದರ್ಶಿ ಅಶೋಕ್ ಪ್ರಭು ಕುಂಟುನಿ, ಅಂತಾರಾಷ್ಟ್ರೀಯ ಕ್ರೀಡಾಪಟು ಸರಸ್ವತಿ ಕಾಮತ್, ಕೇರಳ ರಾಜ್ಯಕೃಷಿ ಗ್ರಾಮಾಭಿವೃದ್ಧಿ ಬ್ಯಾಂಕ್ ನಿರ್ದೇಶಕ ಸೋಮಶೇಖರ್ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಲೋಕಸೇವಾ ಆಯೋಗದ ಮಾಜಿ ಸದಸ್ಯ ಎಸ್.ಆರ್.ರಂಗಮೂರ್ತಿ ಅವರನ್ನು ಕಾರ್ಯಕ್ರಮದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಮೂಲಚಂದ್ರ ಕಾಂಚನ ಮತ್ತು ಕಾರ್ಯಕ್ರಮದ ಸಂಚಾಲಕ ಹರೀಶ್ ಬೋರ್ಕರ್ ಕತ್ತಲಕಾನ ಸುದ್ದಿಗೋಷ್ಠಿಯಲ್ಲಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!