ತುಳುವ ಮಹಾಸಭೆ ತಾಲೂಕು ಸಂಚಾಲಕಿಯಾಗಿ ಭಾನುಮತಿ ಶೆಟ್ಟಿ ಕಕ್ವಗುತ್ತು ನೇಮಕ

KannadaprabhaNewsNetwork |  
Published : Jun 16, 2025, 03:01 AM IST
ತುಳುವ ಮಹಾಸಭೆ  ತಾಲೂಕು ಸಂಚಾಲಕಿಯಾಗಿ ಭಾನುಮತಿ ಶೆಟ್ಟಿ ಕಕ್ವಗುತ್ತು ನೇಮಕ | Kannada Prabha

ಸಾರಾಂಶ

ತುಳುನಾಡಿನ ಅಸ್ಮಿತೆಯ ಚಳುವಳಿಯಾದ ತುಳುವ ಮಹಾಸಭೆ ಶತಮಾನೋತ್ಸವದ ಸಂದರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿರುವ ಪ್ರಯುಕ್ತ ಭಾನುಮತಿ ಶೆಟ್ಟಿ ಕಕ್ವಗುತ್ತು ಅವರನ್ನು ತುಳುವ ಮಹಾಸಭೆ ಮೂಲ್ಕಿ ತಾಲೂಕು ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ.

ಕನ್ನಡಪ್ರಭವಾರ್ತೆ ಮೂಲ್ಕಿ

ತುಳುನಾಡಿನ ಅಸ್ಮಿತೆಯ ಚಳುವಳಿಯಾದ ತುಳುವ ಮಹಾಸಭೆ ಶತಮಾನೋತ್ಸವದ ಸಂದರ್ಭದಲ್ಲಿ ಹೊಸ ಚಟುವಟಿಕೆಗಳಿಗೆ ಪುನಶ್ಚೇತನ ನೀಡುತ್ತಿರುವ ಪ್ರಯುಕ್ತ ಭಾನುಮತಿ ಶೆಟ್ಟಿ ಕಕ್ವಗುತ್ತು ಅವರನ್ನು ತುಳುವ ಮಹಾಸಭೆ ಮೂಲ್ಕಿ ತಾಲೂಕು ಸಂಚಾಲಕಿಯಾಗಿ ನೇಮಕ ಮಾಡಲಾಗಿದೆ.ಭಾನುಮತಿ ಶೆಟ್ಟಿ ಯವರು ಜರ್ಮನಿಯ ಕೋಲೋನ್ ವಿಶ್ವವಿದ್ಯಾನಿಲಯದಲ್ಲಿ ಉನ್ನತ ಶಿಕ್ಷಣ ಪಡೆದು, ಪ್ರವಾಸೋದ್ಯಮದಲ್ಲಿ ಡಿಪ್ಲೋಮಾ ಪೂರೈಸಿದ ನಂತರ 39 ವರ್ಷಗಳ ಕಾಲ ಜರ್ಮನಿಯಲ್ಲಿ ವಾಸವಿದ್ದು, ತಮ್ಮದೇ ಆದ ಟ್ರಾವೆಲ್ ಏಜೆನ್ಸಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ವಿದೇಶದಲ್ಲಿದ್ದರೂ, ಅವರು ತುಳು ಭಾಷೆ ಮತ್ತು ಸಂಸ್ಕೃತಿಗೆ ಅತ್ಯಂತ ಪ್ರಾಮುಖ್ಯತೆ ನೀಡುತ್ತಾ, “ಅಟಿಲ್ ಮಲ್ಪುಲೆ ತುಳು ಕಲ್ಪುಲೆ” ಎಂಬ ಯೂಟ್ಯೂಬ್ ಚಾನೆಲ್ ಮುಖಾಂತರ ತುಳುನಾಡಿನ ಪರಂಪರೆಯನ್ನು ಜಾಗೃತಗೊಳಿಸುತ್ತಿದ್ದಾರೆ.ಕಡಲಾಯೆರೆಡ ತುಳುವೆರು ಸಂಘದ ಸದಸ್ಯೆಯಾಗಿರುವ ಅವರು, ನಿವೃತ್ತಿಯಾದ ನಂತರ ಈಗ ಮೂಲ್ಕಿ ತಾಲೂಕು ಸಂಜೀವಿನಿ ಒಕ್ಕೂಟ (ರಿ) ನ ಅಧ್ಯಕ್ಷೆಯಾಗಿದ್ದು ಲಯನ್ಸ್ ಕ್ಲಬ್ ಹಾಗೂ ರೋಟರಿ ಕ್ಲಬ್ ಮುಲ್ಕಿ ಯಲ್ಲೂ ಸಕ್ರಿಯವಾಗಿ ಭಾಗವಹಿಸುತ್ತಿದ್ದಾರೆ. ತುಳುವ ಮಹಾಸಭೆ ತನ್ನ ಪುನಶ್ಚೇತನ ಗುರಿಯಲ್ಲಿ, ತುಳುನಾಡಿನ ಕಲಾ, ಸಾಹಿತ್ಯ, ಜನಪದ ಪರಂಪರೆ, ತುಳುನಾಡ ಕಳರಿ ತರಬೇತಿ ಮತ್ತು ಮರ್ಮ ಚಿಕಿತ್ಸೆ, ನಶಿಸಿದ ದೈವ ಆರಾಧನೆಗಳ ಪುನರುಜ್ಜೀವನ, ಬಸ್ರೂರು ತುಳುವೇಶ್ವರ ದೇವಸ್ಥಾನ ಪುನರ್ ಉದ್ಧಾರಣ, ಹಾಗೂ ಜಾತಿ–ಮತ–ಭಾಷಾ ಸೌಹಾರ್ದತೆ ಕಾಪಾಡುವ ಮಹತ್ವದ ಯೋಜನೆಗಳಿಗೆ ನಾಂದಿ ಹಾಡಿದೆ. ಈ ಯೋಜನೆಗಳನ್ನು ಕಾರ್ಯಗತಗೊಳಿಸಲು ಅಲ್ಲಲ್ಲಿ ತುಳುವ ಮಹಾಸಭಾ ಸಮಿತಿಗಳನ್ನು ರೂಪಿಕರಿಸಲಾಗುವುದು. ಈ ಪ್ರಯತ್ನಗಳಿಗೆ ಭಾನುಮತಿ ಶೆಟ್ಟಿ ರವರು ಶಕ್ತಿಶಾಲಿ ನಾಯಕತ್ವವನ್ನು ನೀಡಲಿದ್ದಾರೆ.ತುಳು ಸಮೂಹದಲ್ಲಿ ಮಹಿಳಾ ನಾಯಕತ್ವಕ್ಕೆ ಹೊಸ ಬಾಗಿಲು ತೆರೆಯುತ್ತಿರುವ ಅವರ ನೇಮಕ, ಸಮಸ್ತ ತುಳುವರ ಹೆಮ್ಮೆ ಹಾಗೂ ಪ್ರೇರಣೆಗೆ ಕಾರಣವಾಗಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ