ಭಾರತ್‌ ಬ್ರಾಂಡ್: ಆಹಾರಧಾನ್ಯ ಮಾರಾಟಕ್ಕೆ ಚಾಲನೆ

KannadaprabhaNewsNetwork |  
Published : Nov 11, 2024, 11:49 PM ISTUpdated : Nov 11, 2024, 11:50 PM IST
ಭಾರತ್‌ ಬ್ರಾಂಡ್ ಅಡಿ ಆಹಾರಧಾನ್ಯ ಮಾರಾಟ ವಾಹನಗಳಿಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು. | Kannada Prabha

ಸಾರಾಂಶ

ಕೇಂದ್ರ ಸರ್ಕಾರ ಸದಾ ರೈತರ ಮತ್ತು ಕಡು ಬಡವರ ಹಿತ ಕಾಯಲು ಬದ್ಧವಾಗಿದೆ. ಸ್ವಾತಂತ್ರ್ಯ ನಂತರ ದೇಶದಲ್ಲಿ ಬೆಲೆ ಏರಿಕೆ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರ ಇದೇ ಪ್ರಥಮ ಬಾರಿಗೆ ಇಂತಹ ಐತಿಹಾಸಿಕ ಕ್ರಮ ಕೈಗೊಂಡಿದೆ.

ಹುಬ್ಬಳ್ಳಿ:

ಬೆಲೆ ಏರಿಕೆ ನಿಯಂತ್ರಣ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ಗ್ರಾಹಕರಿಗೆ ನೇರ ಆಹಾರ ಧಾನ್ಯ ವಿತರಣೆಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಚಾಲನೆ ನೀಡಿದರು.

ನಗರದ ಮೂರುಸಾವಿರ ಮಠದ ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಆಹಾರ ಧಾನ್ಯ ದಾಸ್ತಾನು ಹೊತ್ತ ಸಂಚಾರಿ ವಾಹನಗಳಿಗೆ ಹಸಿರು ನಿಶಾನೆ ತೋರಿಸಿದರು. ಬಳಿಕ ಆಹಾರ ಧಾನ್ಯದ ಕಿಟ್ ವಿತರಿಸಿ ಮಾತನಾಡಿ, ಕೇಂದ್ರ ಸರ್ಕಾರ ಸದಾ ರೈತರ ಮತ್ತು ಕಡು ಬಡವರ ಹಿತ ಕಾಯಲು ಬದ್ಧವಾಗಿದೆ. ಸ್ವಾತಂತ್ರ್ಯ ನಂತರ ದೇಶದಲ್ಲಿ ಬೆಲೆ ಏರಿಕೆ ಸಂದರ್ಭದಲ್ಲಿ ಅಗತ್ಯ ವಸ್ತುಗಳ ಬೆಲೆ ನಿಯಂತ್ರಣಕ್ಕೆ ತರಲು ಕೇಂದ್ರ ಸರ್ಕಾರ ಇದೇ ಪ್ರಥಮ ಬಾರಿಗೆ ಇಂತಹ ಐತಿಹಾಸಿಕ ಕ್ರಮ ಕೈಗೊಂಡಿದೆ ಎಂದರು.

ಈಗಾಗಲೇ ದೆಹಲಿ, ಬೆಂಗಳೂರಿನಂತಹ ದೊಡ್ಡ ನಗರಗಳಲ್ಲಿ ಭಾರತ್‌ ಬ್ರಾಂಡ್ ಅಡಿ ಆಹಾರಧಾನ್ಯ ವಿತರಣೆಗೆ ಕ್ರಮ ಕೈಗೊಂಡಿದ್ದು, ಈಗ ಹು-ಧಾ ಮಹಾ ನಗರ ಮತ್ತು ಧಾರವಾಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ 50ಕ್ಕೂ ಹೆಚ್ಚು ವಾಹನಗಳಲ್ಲಿ ಕಡಿಮೆ ಬೆಲೆಯಲ್ಲಿ ಭಾರತ್‌ ಬ್ರಾಂಡ್ ಆಹಾರ ದಾನ್ಯ ವಿತರಿಸಲಾಗುತ್ತಿದೆ ಎಂದರು.

ಈ ಸಂದರ್ಭದಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಪ್ರಭು ನವಲಗುಂದಮಠ, ರವಿ ನಾಯಕ, ಲಕ್ಷ್ಮೀಕಾಂತ ಘೋಡ್ಕೆ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

5000 ಅಂಗನವಾಡಿಗಳಲ್ಲಿ ಎಲ್‌ಕೆಜಿ, ಯುಕೆಜಿ : ಲಕ್ಷ್ಮೀ
ನಾಯಿಗಳ ಮೇಲೂ ತೆರಿಗೆ ಹೇರಿಕೆಗೆ ಮುಂದಾದ ಸರ್ಕಾರ!