ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಭಾರತ್ ಜೋಡೋ ಯಾತ್ರೆಯ ಉದ್ಘಾಟನೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸುವ ಯೋಚನೆ ಇತ್ತು. ಆದರೆ ಆ ಇಬ್ಬರು ನಾಯಕರು ಅಂದು ದೆಹಲಿಗೆ ತೆರಳುತ್ತಿರುವ ಕಾರಣಕ್ಕೆ ಅವರ ಅನುಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ.ಹರಿಪ್ರಸಾದ್ ಸೇರಿದಂತೆ ಹಲವು ಸಚಿವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆಂದು ತಿಳಿಸಿದರು.
ರಾಹುಲ್ ಗಾಂಧಿ ಅವರು ಸುಮಾರು ಐದು ತಿಂಗಳ ಕಾಲ 6 ಸಾವಿರ ಕಿಲೋಮೀಟರ್‌ಗಳ ಪಾದಯಾತ್ರೆ ನಡೆಸಿ, ದೇಶದ ವಿವಿಧ ವರ್ಗಗಳ ಜನರನ್ನು ನೇರವಾಗಿ ಭೇಟಿ ಮಾಡಿದ್ದರು. ಈ ಯಾತ್ರೆಯೂ ನಡೆದು ಇದೀಗ ನಾಲ್ಕು ವರ್ಷಗಳಾಗಿದ್ದು, ಅದರ ಆಶಯಗಳನ್ನು ತಳಮಟ್ಟಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಸ್ಥಳೀಯ ಮುಖಂಡರ ನೇತೃತ್ವದೊಂದಿಗೆ 82 ವಿಧಾನಸಭಾ ಕ್ಷೇತ್ರಗಳಲ್ಲೂ ಬೂತ್ ಮಟ್ಟದಲ್ಲಿ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಮುಂದಿನ ಹಂತದ ಕಾರ್ಯಕ್ರಮದ ರೂಪರೇಷಗಳನ್ನು ಸಿದ್ದಪಡಿಸಲಿದ್ದಾರೆ ಎಂದರು.ಹತ್ತು ಒಳ್ಳೆಯ ಕೆಲಸಗಳ ಮುಂದೆ ಒಂದುಕೆಟ್ಟ ಕೆಲಸ ಪ್ರಧಾನವಾಗಬಾರದು:
ಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್. ಸಿ.ಯೋಗೇಶ್, ವಿಪ ಸದಸ್ಯೆ ಬಲ್ಕೀಶ್ ಬಾನು, ವಿಪ ಮಾಜಿ ಸದಸ್ಯ ಆರ್. ಪ್ರಸನ್ನಕುಮಾರ್, ರಾಜ್ಯ ಜವಳಿ ನಿಗಮದ ಅಧ್ಯಕ್ಷ ಚೇತನ್ ಕೆ. ಗೌಡ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಎನ್.ರಮೇಶ್ ಹಾಗೂ ಪಿ.ಓ. ಶಿವಕುಮಾರ್, ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಎಸ್.ರವಿಕುಮಾರ್, ಕಾಂಗ್ರೆಸ್ ಮುಖಂಡರಾದ ಎಸ್.ಪಿ. ದಿನೇಶ್, ಜಿಲ್ಲಾ ಕಾಂಗ್ರೆಸ್ ಆಡಳಿತ ಉಸ್ತುವಾರಿ ಎಸ್.ಟಿ. ಹಾಲಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲೀಂ ಪಾಶಾ, ಎಸ್ಸಿ ಘಟಕದ ಅಧ್ಯಕ್ಷ ಶಿವಣ್ಣ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಎಸ್.ಟಿ.ಚಂದ್ರಶೇಖರ್, ಚಿನ್ನಪ್ಪ ಸೇರಿದಂತೆ ಇನ್ನಿತರರು ಇದ್ದರು.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಎಸ್‌ಐಆರ್ ಸೋಗಿನಲ್ಲಿ ಬಿಜೆಪಿ ಕಾಂಗ್ರೆಸ್‌ಗೆ ಮತ ಹಾಕುವ ಅಲ್ಪಸಂಖ್ಯಾತರ, ದಲಿತರ ಹಾಗೂ ಹಿಂದುಳಿದ ವರ್ಗಗಳ ಮತವನ್ನು ಕಳ್ಳತನ ಮಾಡುತ್ತಿದೆ ಎಂದು ಆರೋಪಿಸಿದರು.
ಇದರಿಂದ ಜ್ಞಾನೇಶ್ ಕುಮಾರ್ ಮಾಡಿರುವ ಅಕ್ರಮವನ್ನು ಅವರ ಸಹದ್ಯೋಗಿಗಳೇ ಪ್ರಸ್ತಾಪಿಸಿದರು ಅವರ ವಿರುದ್ದ ಯಾವುದೇ ರೀತಿಯ ಕ್ರಮಕೈಗೊಳ್ಳದೆ ಸುಮ್ಮನಿದ್ದಾರೆ. ಜ್ಞಾನೇಶ್ ಕುಮಾರ್ ಬಿಜೆಪಿ ಪಕ್ಷದ ಏಜೆಂಟ್ ಆಗಿ ಕೆಲಸ ಮಾಡುತ್ತಿದ್ದು, ಆ ಮೂಲಕ ಪ್ರಜಾಪ್ರಭುತ್ವಕ್ಕೆ ಧಕ್ಕೆ ತರುತ್ತಿದ್ದಾರೆ. ಚುನಾವಣೆ ಸಮಯದಲ್ಲಿ ನಿಮಗೆ ಎಂಪಿ ಟಿಕೆಟ್ ಕೊಡುವುದಾಗಿದೆ ಬಿಜೆಪಿ ಹೇಳಿದೆ, ಇದರ ಅರ್ಥವೇನು?, ಅಂದರೆ ಬಿಜೆಪಿ ಅವರಿಗೆ ಪ್ರಜಾಪ್ರಭುತ್ವ ಬೇಡ್ವ? ಇದರ ವಿರುದ್ದ ದೇಶದಲ್ಲಿ ಕಾಂಗ್ರೆಸ್ ಕಾರ್ಯಕ್ರಮವನ್ನು ರೂಪಿಸಲಿದ್ದು, ಅವರು ರಾಜೀನಾಮೆ ಕೊಡುವವರೆಗೂ ಹೋರಾಟವನ್ನು ನಡೆಸಲಾಗುತ್ತದೆ ಎಂದರು.