ಭಾರತ್ ಜೋಡೋದಿಂದ ಹೊಸ ಅವಕಾಶ ಸೃಷ್ಟಿ: ಸೊರಕೆ

KannadaprabhaNewsNetwork |  
Published : Sep 09, 2026, 02:45 AM IST
07ಸೊರಕೆ | Kannada Prabha

ಸಾರಾಂಶ

ಗ್ರಾಮೀಣ ಭಾಗದ ಯುವಶಕ್ತಿಯನ್ನು ಪ್ರೋತ್ಸಾಹಿಸುವುದಕ್ಕಾಗಿ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಭಾರತ್ ಜೋಡೊ ಸಂಘಟನೆಯ ಯೋಜನೆಯನ್ನು ಜಾರಿಗೆ ತಂದಿದೆ. ಸರ್ಕಾರ ಈ ಸಂಘಟನೆಗಳಿಗೆ ಪ್ರತೀ ವರ್ಷ 10 ಲಕ್ಷ ರು.ಗಳವರೆಗೆ ಅನುದಾನ ನೀಡಿ, ಈ ಯುವಕರನ್ನು ಸಮಾಜ ಸೇವೆ ಹಾಗೂ ಸಂಘಟನಾ ಚಟುವಟಿಕೆಗಳಿಗೆ ತೊಡಗಿಸಿಕೊಳ್ಳಲಿದೆ. ಈ ಯುವಕರು ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯ ಹೆಚ್ಚಿಸಿಕೊಂಡು ಉದ್ಯೋಗ ಹಾಗೂ ಉದ್ಯಮದ ಹೊಸ ಅವಕಾಶ ಪಡೆಯಲು ಈ ಸಂಘಟನೆಗಳು ಉತ್ತಮ ವೇದಿಕೆಯಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಗ್ರಾಮೀಣ ಭಾಗದ ಯುವಶಕ್ತಿಯನ್ನು ಪ್ರೋತ್ಸಾಹಿಸುವುದಕ್ಕಾಗಿ ರಾಜ್ಯ ಸರ್ಕಾರ ಮಹತ್ವಾಕಾಂಕ್ಷೆಯ ಭಾರತ್ ಜೋಡೊ ಸಂಘಟನೆಯ ಯೋಜನೆಯನ್ನು ಜಾರಿಗೆ ತಂದಿದೆ. ಸರ್ಕಾರ ಈ ಸಂಘಟನೆಗಳಿಗೆ ಪ್ರತೀ ವರ್ಷ 10 ಲಕ್ಷ ರು.ಗಳವರೆಗೆ ಅನುದಾನ ನೀಡಿ, ಈ ಯುವಕರನ್ನು ಸಮಾಜ ಸೇವೆ ಹಾಗೂ ಸಂಘಟನಾ ಚಟುವಟಿಕೆಗಳಿಗೆ ತೊಡಗಿಸಿಕೊಳ್ಳಲಿದೆ. ಈ ಯುವಕರು ತಮ್ಮ ಪ್ರತಿಭೆ ಮತ್ತು ಸಾಮರ್ಥ್ಯ ಹೆಚ್ಚಿಸಿಕೊಂಡು ಉದ್ಯೋಗ ಹಾಗೂ ಉದ್ಯಮದ ಹೊಸ ಅವಕಾಶ ಪಡೆಯಲು ಈ ಸಂಘಟನೆಗಳು ಉತ್ತಮ ವೇದಿಕೆಯಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಹೇಳಿದರು.ಪ್ರಥಮ ಬಾರಿಗೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಬೇಕಾದ ಕರಾವಳಿ ಭಾಗದ ಅಭಿವೃದ್ಧಿ ಕಾರ್ಯಕ್ರಮ, ಬೇಡಿಕೆಗಳನ್ನು ಕ್ರೋಢೀಕರಿಸಲು ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಬ್ಲಾಕ್ ಅಧ್ಯಕ್ಷರ ಹಾಗೂ ಪಕ್ಷದ ಮುಖಂಡರ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು.

ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ದೂಷಣೆ ಮಾಡುತ್ತಿದ್ದ ಬಿಜೆಪಿ ಈಗ ತನ್ನ ಆಡಳಿತದ ರಾಜ್ಯಗಳಲ್ಲಿ ಅವುಗಳನ್ನು ಜಾರಿಗೊಳಿಸುತ್ತಿದೆ. ಮಹಿಳೆಯರ ಆರ್ಥಿಕ ಸಬಲೀಕರಣದ ಪೂರಕವಾದ ಈ ಯೋಜನೆಗಳು ತಲುಪಿಸಲು ಗ್ರಾಮಗಳಲ್ಲಿ ಗ್ಯಾರೆಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಬೇಕಾಗಿದೆ ಎಂದರು.ಮುಖಂಡರಾದ ದಿನೇಶ್ ಮಳವಳ್ಳಿ, ಹರೀಶ್ ಕಿಣಿ, ರೋಶನಿ ಒಲಿವರಾ, ದಿನೇಶ್ ಪುತ್ರನ್, ಮೀನಾಕ್ಷಿ ಮಾಧವ ಬನ್ನಂಜೆ, ಹರಿಪ್ರಸಾದ್ ರೈˌ ಬ್ಲಾಕ್ ಅಧ್ಯಕ್ಷರಾದ ರಮೇಶ್ ಕಾಂಚನ್, ಗೋಪಿನಾಥ್ ಭಟ್, ವೈ. ಸುಕುಮಾರ್, ಸಂತೋಷ್ ಕುಲಾಲ್, ಸುಭೋದ ರಾವ್ ಕಾರ್ಕಳ, ಮದನ್ ಕುಮಾರ್, ಮಹಾಬಲ ಕುಂದರ್, ನವೀನ್ ಚಂದ್ರ ಸುವರ್ಣ, ಆನಂದ ಪೂಜಾರಿ ಬೈಂದೂರು, ಚಂದ್ರಶೇಖರ್ ಶೆಟ್ಟಿ ಕುಂದಾಪುರ, ಗೋಪಾಲ ಬಂಗೇರ ಕೋಟ, ರೋಶನ್ ಶೆಟ್ಟಿ, ಜಯ ಕುಮಾರ್, ಲಕ್ಷೀಶ ಶೆಟ್ಟಿ, ಅಶೋಕ್ ಕುಮಾರ್ ಎರ್ಮಾಳ್, ಲಕ್ಷ್ಮಣ ಪೂಜಾರಿ ಉಪಸ್ಥಿತರಿದ್ದರು ˌ

ಜಿಲ್ಲಾ ವಕ್ತಾರ ಭಾಸ್ಕರ ರಾವ್ ಕಿದಿಯೂರು ಸ್ವಾಗತಿಸಿ, ಮಹಿಳಾ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಜ್ಯೋತಿ ಹೆಬ್ಬಾರ್ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭಾರತೀಯ ಅಧ್ಯಾತ್ಮ ನೈಜ ಜಾತ್ಯತೀತವಾದ: ಪೇಜಾವರ ಶ್ರೀ
ವೀರಯೋಧರ ಸಾಹಸ ಯುವ ಸಮೂಹಕ್ಕೆ ಪ್ರೇರಣೆ: ನಂದಾ ಕಾರ್ಯಪ್ಪ