ಕನ್ನಡಪ್ರಭ ವಾರ್ತೆ ಮಂಡ್ಯ
ಭಾರತದ ಸಂಸತ್‌ನ ಗೌರವಕ್ಕೆ ಬಹುದೊಡ್ಡ ಘನತೆ ತಂದುಕೊಟ್ಟು ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿದ ಶ್ರೇಷ್ಠ ರಾಜಕಾರಣಿ, ಮಾಜಿ ಉಪ ಪ್ರಧಾನಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತರತ್ನ ಗೌರವ ದೊರಕಿರುವುದು ಕೋಟ್ಯಂತರ ಭಾರತೀಯರಿಗೆ ಅತೀವ ಹರ್ಷವನ್ನು ಉಂಟುಮಾಡಿದೆ. ಎಂದು ಮೈಸೂರು ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಮಾಜಿ ಸದಸ್ಯ ಡಾ.ಈ.ಸಿ.ನಿಂಗರಾಜ್‌ಗೌಡ ತಿಳಿಸಿದ್ದಾರೆ.ಭಾರತೀಯ ಸಂಸ್ಕೃತಿ ಮತ್ತು ಪರಂಪರೆ ರಕ್ಷಣೆಗಾಗಿ ತಮ್ಮಇಡೀ ಜೀವನವನ್ನು ಸಮರ್ಪಿಸಿಕೊಂಡ ಅಡ್ವಾಣಿ ಅವರು ತಮ್ಮ ಸಾಧನೆ ಹಾಗೂ ಹೋರಾಟಕ್ಕೆಅವರ ಜೀವತಾವಧಿಯಲ್ಲೇ ಭಾರತರತ್ನ ಪಡೆಯುತ್ತಿರುವುದು ವಿಶೇಷವಾಗಿದೆ. ಇಂತಹ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಸರ್ಕಾರಕ್ಕೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು.
ಅಯೋಧ್ಯೆ ರಾಮನಿಗಾಗಿ ರಥಯಾತ್ರೆ ನಡೆಸಿ ದೇಶದ ಜನರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿದ್ದ ಅಡ್ವಾಣಿ ಅವರು ಭಾರತರತ್ನ ಪ್ರಶಸ್ತಿಗೆ ಭಾಜನರಾಗಿದ್ದು ಭಾರತೀಯ ಪರಂಪರೆಗೆ ಸಂದ ಗೌರವವಾಗಿದೆ ಎಂದು ತಿಳಿಸಿದ್ದಾರೆ.ಅಡ್ವಾಣಿಗೆ ಭಾರತರತ್ನ: ಸಿ.ಪಿ.ಉಮೇಶ್ ಸಂತಸ
ಮಂಡ್ಯ: ಭಾರತದ ಸಂಸತ್‌ನ ಗೌರವಕ್ಕೆ ಬಹುದೊಡ್ಡ ಘನತೆ ತಂದು ಪ್ರಜಾಪ್ರಭುತ್ವದ ಮೌಲ್ಯವನ್ನು ಎತ್ತಿ ಹಿಡಿದ ದೇಶ ಕಂಡ ಶ್ರೇಷ್ಠ ರಾಜಕಾರಣಿ ಮಾಜಿ ಉಪ ಪ್ರಧಾನಿ ಲಾಲಕೃಷ್ಣ ಅಡ್ವಾಣಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ‘ಭಾರತ ರತ್ನ’ ಲಭಿಸಿರುವುದು ಹೆಮ್ಮೆಯ ಸಂಗತಿ ಎಂದು ಮಂಡ್ಯ ಜಿಲ್ಲಾ ಲೋಕಸಭಾ ಕ್ಷೇತ್ರದ ಸಂಚಾಲಕ, ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಸಿ.ಪಿ. ಉಮೇಶ್ ತಿಳಿಸಿದ್ದಾರೆ.ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ನೀಡಿರುವುದು ಹೆಮ್ಮೆಯ ಸಂಗತಿ. ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ರಕ್ಷಣೆಗಾಗಿ ತಮ್ಮ ಇಡೀ ಜೀವನವನ್ನು ಸಮರ್ಪಿಸಿಕೊಂಡ ತಪಸ್ವಿ ರಾಜಕಾರಣಿ, ಬಿಜೆಪಿ ಕಂಡ ಶ್ರೇಷ್ಠ ನೇತಾರ ಅಡ್ವಾಣಿ ಅವರು ತಮ್ಮ ಸಾಧನೆ ಹಾಗೂ ಹೋರಾಟಕ್ಕೆ ಅವರ ಜೀವತಾವಧಿಯಲ್ಲೇ ‘ಭಾರತರತ್ನ’ ಪಡೆಯುತ್ತಿರುವುದು ವಿಶೇಷವಾಗಿದೆ. ಇಂತಹ ಮಹತ್ವದ ನಿರ್ಧಾರ ಕೈಗೊಂಡ ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಧನ್ಯವಾದ ಅರ್ಪಿಸುತ್ತೇನೆ.ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಕಟ್ಟಲೇಬೇಕೆಂದು ದೇಶಾದ್ಯಂತ ಸುಮಾರು 10 ಸಾವಿರ ಕಿ.ಮೀ. ರಥಯಾತ್ರೆ ನಡೆಸಿ, ಭಾರತೀಯರಲ್ಲಿ ಧಾರ್ಮಿಕ ಜಾಗೃತಿ ಮೂಡಿಸಿದ್ದ ಆಧ್ಯಾತ್ಮಿಕ ಚಿಂತಕರೂ ಆಗಿದ್ದಾರೆ. 1947ರಲ್ಲಿ ಆರ್‌ಎಸ್‌ಎಸ್ ಮೂಲಕ ಸಮಾಜಸೇವೆಗೆ ಧುಮುಕಿದ ಅಡ್ವಾಣಿ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷರಾಗಿ, ಕೇಂದ್ರದ ವಿರೋಧ ಪಕ್ಷದ ನಾಯಕರಾಗಿ, ಕೇಂದ್ರ ಗೃಹ ಸಚಿವರಾಗಿ, ಉಪ ಪ್ರಧಾನಿಗಳಾಗಿ ಇಡೀ ದೇಶವೇ ಮೆಚ್ಚುವ ಆಡಳಿತ ನೀಡಿದ್ದಾರೆ ಎಂದು ಸಿ.ಪಿ. ಉಮೇಶ್ ತಿಳಿಸಿದ್ದಾರೆ.