ಕನ್ನಡಪ್ರಭ ವಾರ್ತೆ ಚಾಮರಾಜನಗರ
ಮಕ್ಕಳು ಸೇವಾದಳಗಳಾಗಿ ಹೊರಹೊಮ್ಮಿ, ಮುಂದಿನ ದಿನಗಳಲ್ಲಿ ಸೇವಾದಳದದಲ್ಲಿ ಭಾಗಿಯಾಗಿ ಇದರ ಧ್ಯೇಯೋದ್ದೇಶಗಳನ್ನು ಈಡೇರಿಸುವ ನಿಟ್ಟಿನಲ್ಲಿ ಶುಭಾಶಯ ಕೋರುವ ಮೂಲಕ ತಮ್ಮ ಆಶಾಭಾವನೆ ವ್ಯಕ್ತಪಡಿಸಿದರು. ಮಕ್ಕಳು ಓದಿನ ಬಗ್ಗೆ ಹೆಚ್ಚು ಕಾಳಜಿ ವಹಿಸಿ ತಮ್ಮ ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂದ ಅವರು, ಸೇವಾದಳದಲ್ಲಿರುವ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸುವ ಭರವಸೆ ನೀಡಿದರು.
ಮುಂದಿನ ದಿನಗಳಲ್ಲಿ ಹೆಚ್ಚು ಸರ್ಕಾರಿ ಶಾಲೆಗಳಲ್ಲಿ ಭಾರತ ಸೇವಾದಳದ ಶಾಖೆಗಳನ್ನು ಪ್ರಾರಂಭಿಸಲಾಗುವುದು. ಇದರಿಂದ ಮಕ್ಕಳಿಗೆ ಸಾಕಷ್ಟು ಸಹಕಾರಿಯಾಗಲಿದೆ ಎಂದರು. ಬಿಇಒ ಉತ್ತಮ ಅಧಿಕಾರಿಗಳಾಗಿದ್ದು, ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಇಂತಹ ಅಧಿಕಾರಿಗಳು ಇದ್ದಾಗ ಮಾತ್ರ ಈ ರೀತಿ ಸಂಸ್ಥೆಗಳು ಬೆಳೆಯಲು ಸಾಧ್ಯ ಎಂದರು. ನಗರಸಭೆ ಸದಸ್ಯೆ ಭಾಗ್ಯಮ್ಮ ಧ್ವಜಾರೋಹಣ ನೆರವೇರಿಸಿದರು. ಮಕ್ಕಳು ನಾಡಗೀತೆ, ರಾಷ್ಟ್ರಗೀತೆ ಹಾಡಿದರು. ಇದೇ ಸಂದರ್ಭದಲ್ಲಿ ಮಕ್ಕಳಿಂದ ಸಂವಿಧಾನ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಐಎನ್‌ಎ ರಾಮರಾವ್ ಅವರ ಪುಣ್ಮಸ್ಮರಣೆ ಅಂಗವಾಗಿ ಅವರ ಭಾವಚಿತ್ರಕ್ಕೆ ಬಿಇಒ ಸೋಮಣ್ಣೇಗೌಡ ಮಾಲಾರ್ಪಣೆ ಮಾಡಿದರು.ಬಳಿಕ ಮಾತನಾಡಿದ ಸೋಮಣ್ಣೇಗೌಡ, ಸರಳ ಹಾಗೂ ಅರ್ಥಪೂರ್ಣ ಕಾರ್ಯಕ್ರಮ ರೂಪಿಸಲಾಗಿದೆ. ಇದು ಉತ್ತಮ ವೇದಿಕೆ ಎಂದರು. ಈ ಶಾಲೆ ಮೊದಲಿನಿಂದಲೂ ಗುರುತಿಸಿಕೊಂಡಿದ್ದ ಶಾಲೆ ಸ್ವಲ್ಪ ಸಮಯದಿಂದ ಕುಂಟಿತಗೊಂಡಿತ್ತು. ಮತ್ತೆ ಈಗ ಕಾರ್ಯಪ್ರವೃತ್ತರಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದರು. ಕೆಲವು ಮೂಲ ಸೌಕರ್ಯಗಳ ಕೊರತೆ ಇದೆ. ಹಂತ ಹಂತವಾಗಿ ಭೌತಿಕವಾಗಿ ಶೈಕ್ಷಣಿಕವಾಗಿ ಅಭಿವೃದ್ಧಿಗೊಳಿಸೋಣ ಎಂದು ತಿಳಿಸಿದರು. ಎಇಇ ನಟರಾಜು ಮಾತನಾಡಿ, ನಾನು ಈ ಶಾಲೆಯ ವಿದ್ಯಾರ್ಥಿ. ನಾವು ಓದುವ ಸಂದರ್ಭದಲ್ಲಿ ಸಾಕಷ್ಟು ಸಮಸ್ಯೆಗಳಿದ್ದವು. ಶಿಕ್ಷಕರ ಕೊರತೆ ಇತ್ತು. ಅಂತಹ ಸಂದರ್ಭಗಳಲ್ಲೂ ಕಷ್ಟ ಪಟ್ಟು ಓದುವ ಮೂಲಕ ಉನ್ನತವಾದ ಸ್ಥಾನವನ್ನು ಅಲಂಕರಿಸಿದ್ದೇನೆ. ಹಾಗೆಯೇ ನೀವು ಕೂಡಾ ಉತ್ತಮವಾಗಿ ಓದಿ ಸಮಾಜಕ್ಕೆ ಸಹಾಯ ಮಾಡುವ ಮೂಲಕ ಮಾದರಿ ವ್ಯಕ್ತಿಗಳಾಗಬೇಕು ಎಂದರು. ಭಾರತ ಸೇವಾದಳದ ಕೋಶಾಧ್ಯಕ್ಷ ವಿ. ಶ್ರೀನಿವಾಸ ಪ್ರಸಾದ್ ಮಾತನಾಡಿ, ವಿಧ್ಯಾರ್ಥಿಗಳು ಶಾಲಾ ಮಟ್ಟದಲ್ಲಿ ಮುಖ್ಯವಾಗಿ ಶಿಸ್ತು, ಸಂಯಮ, ಏಕಾಗ್ರತೆಯನ್ನು ಬೆಳೆಸಿಕೊಳ್ಳಬೇಕು.
ದಾನಿಗಳಿಗೆ ಸನ್ಮಾನ: