ಕನ್ನಡಪ್ರಭ ವಾರ್ತೆ ಹಾಸನ
ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಹೊರಟ ಪ್ರತಿಭಟನಾ ಮೆರವಣಿಗೆಯು ಎನ್.ಆರ್. ವೃತ್ತದ ಮೂಲಕ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಬಂದ ಅವರು, ಇದೆ ವೇಳೆ ಭೀಮ್ ಆರ್ಮಿ ಚನ್ನರಾಯಪಟ್ಟಣ ತಾಲೂಕು ಅಧ್ಯಕ್ಷ ಎಚ್.ಎಸ್. ಮಂಜುನಾಥ್ ಮಾಧ್ಯಮದೊಂದಿಗೆ ಮಾತನಾಡಿ, ದಸರಾ ಉದ್ಘಾಟನೆಯ ಸಂದರ್ಭದಲ್ಲಿ ಮುಸ್ಲಿಂ ಮಹಿಳೆಗೂ ದಲಿತ ಮಹಿಳೆಗೂ ಉದ್ಘಾಟನೆ ಮಾಡುವ ಅರ್ಹತೆ ಇಲ್ಲ. ಕೇವಲ ಸನಾತನ ಧರ್ಮದ ಮಹಿಳೆಯರು ಮಾತ್ರ ಅರ್ಹರು ಎಂದು ಸಾರ್ವಜನಿಕವಾಗಿ ಮಾಧ್ಯಮದ ಮೂಲಕ ಹೇಳಿಕೆ ನೀಡಿದ್ದಾರೆ. ಇಂತಹ ಹೇಳಿಕೆಗಳು ಮುಸ್ಲಿಂ ಹಾಗೂ ದಲಿತ ಮಹಿಳೆಯರ ಗೌರವವನ್ನು ಹಾಳು ಮಾಡುತ್ತವೆ. ಜಾತಿ ಮತ್ತು ಧಾರ್ಮಿಕ ಭೇದಭಾವವನ್ನು ಪ್ರೋತ್ಸಾಹಿಸುತ್ತವೆ. ಇದು ಸಂವಿಧಾನದ ಜಾತ್ಯತೀತ ಮತ್ತು ಸಮಾನತೆಯ ತತ್ವಗಳಿಗೆ ವಿರುದ್ಧವಾಗಿದೆ ಎಂದು ದೂರಿದರು. ಪ್ರತಿಭಟನೆಯಲ್ಲಿ ಭೀಮ್ ಆರ್ಮಿ ಜಿಲ್ಲಾ ಅಧ್ಯಕ್ಷ ಪ್ರಸನ್ನ, ಕಾರ್ಯಾಧ್ಯಕ್ಷ ದೊರೆರಾಜು, ಪ್ರದಾನ ಕಾರ್ಯದರ್ಶಿ ವೆಂಕಟೇಶ್, ತಾಲೂಕು ಅಧ್ಯಕ್ಷ ಚೇತನ್, ಅರಸೀಕೆರೆ ತಾಲೂಕು ಅಧ್ಯಕ್ಷ ಸ್ವಾಮಿ ಜಾಜೂರು, ಹೊಳೆನರಸೀಪುರ ತಾಲೂಕು ಅಧ್ಯಕ್ಷ ವಾಸು, ಜಿಲ್ಲಾ ಜಾಗೃತಿ ಸಮಿತಿ ಸದಸ್ಯೆ ಶಿವಮ್ಮ, ಭಾಗ್ಯ ಕಲಿವೀರ್, ಜೈಭೀಮ್ ಬ್ರಿಗೇಡ್ ಜಿಲ್ಲಾಧ್ಯಕ್ಷ ರಾಜೇಶ್, ಮುಬಶಿರ್ ಅಹಮದ್, ಎಸ್.ಡಿ.ಪಿ.ಐ. ತಾಲೂಕು ಅಧ್ಯಕ್ಷ ಶಜೇಲ್ ಅಹಮದ್ ಇತರರು ಇದ್ದರು.