ಬೃಹತ್ ಬೈಕ್ ರ್‍ಯಾಲಿ, ಇಂದು ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ,
ಭೀಮಾ ಕೊರೆಗಾಂವ್ ವಿಜಯೋತ್ಸವ ಅಂಗವಾಗಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟದಿಂದ ನಗರದಲ್ಲಿ ಮಂಗಳವಾರ ಬೃಹತ್ ಬೈಕ್ ರ್‍ಯಾಲಿ ನಡೆಯಿತು.
ತೊಗರಿಹಂಕಲ್ ಸರ್ಕಲ್‌ನಿಂದ ಆರಂಭವಾದ ಬೈಕ್ ರ್‍ಯಾಲಿಗೆ ಪಟಾಕಿ ಸಿಡಿಸುವ ಮೂಲಕ ಚಾಲನೆ ನೀಡಲಾಯಿತು. ವಿವಿಧ ದಲಿತ ಸಂಘಟನೆಗಳ ಕಾರ್ಯಕರ್ತರು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪರ ಜಯಘೋಷ ಹಾಕಿ ಸಂಭ್ರಮಿಸಿದರು.ತೊಗರಿಹಂಕಲ್ ವೃತ್ತದಿಂದ ಆರಂಭವಾದ ಬೈಕ್ ರ್‍ಯಾಲಿ ಐ.ಜಿ. ರಸ್ತೆ ಮಾರ್ಗವಾಗಿ ಸಾಗಿ ಟೌನ್ ಕ್ಯಾಂಟಿನ್ ಸರ್ಕಲ್ ಬಳಸಿ ಕೆ.ಇ.ಬಿ. ವೃತ್ತದ ಮೂಲಕ ಹನುಮಂತಪ್ಪ ವೃತ್ತ, ಎಂ.ಜಿ. ರಸ್ತೆಯಲ್ಲಿ ಸಾಗಿ ಆಜಾದ್ ಮೈದಾನ ತಲುಪಿತು. ನಂತರ ಅಂಬೇಡ್ಕರ್ ರಸ್ತೆ ಮೂಲಕ ಜಿಲ್ಲಾ ಪಂಚಾಯಿತಿ ಕಚೇರಿಗೆ ಸಾಗಿದ ಬೈಕ್ ರ್‍ಯಾಲಿ ಜಿಲ್ಲಾ ಪಂಚಾಯಿತಿ ಕಚೇರಿ ಮುಂಭಾಗ ಇರುವ ಡಾ. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಜಯಘೋಷ ಕೂಗಿದರು.
-- ಬಾಕ್ಸ್ --ಇಂದು ಮದ್ಯ ಮಾರಾಟ ನಿಷೇಧಭೀಮಾ ಕೊರೇಗಾಂವ್ ವಿಜಯೋತ್ಸವದ ಸಂದರ್ಭದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ಬುಧವಾರ ಬೆಳಿಗ್ಗೆ 6 ಗಂಟೆ ಯಿಂದ ರಾತ್ರಿ 11 ಗಂಟೆವರೆಗೆ ಚಿಕ್ಕಮಗಳೂರು ನಗರ ಹಾಗೂ ಬಸವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸುತ್ತ 5 ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ನಮೂನೆಯ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.-------ಇಂದು ಕೆಲವೆಡೆ ವಾಹನಗಳ ನಿಲುಗಡೆಚಿಕ್ಕಮಗಳೂರು ನಗರದಲ್ಲಿ ಬುಧವಾರ ಕೊರೆಗಾಂವ್ ವಿಜಯೋತ್ಸವದ ಹಿನ್ನಲೆಯಲ್ಲಿ ಮೆರವಣಿಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಸುಗಮ ವಾಹನಗಳ ಸಂಚಾರದ ದೃಷ್ಟಿಯಿಂದ ಕೆಲವೆಡೆ ವಾಹನಗಳ ನಿಲುಗಡೆ ನಿಷೇಧಿಸಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರು ಆದೇಶ ಹೊರಡಿಸಿದ್ದಾರೆ.
ಟೌನ್ ಕ್ಯಾಂಟಿನ್ ಸರ್ಕಲ್‌ನಿಂದ ಕೆಇಬಿ ವೃತ್ತ, ಹನುಮಂತಪ್ಪ ವೃತ್ತ, ಆಜಾದ್ ಪಾರ್ಕ್‌ವರೆಗೆ ಹಾಗೂ ಆಜಾದ್ ಪಾರ್ಕ್ ಸುತ್ತಲಿನ ಸ್ಥಳದಲ್ಲಿ ವಾಹನಗಳ ನಿಲುಗಡೆ ನಿಷೇಧಿಸಲಾಗಿದೆ. ಕೆಎಂ ರಸ್ತೆಯಿಂದ ಅಂಬೇಡ್ಕರ್ ರಸ್ತೆ ಮೂಲಕ ದೀಪಾ ನರ್ಸಿಂಗ್ ಹೋಂ ಕಡೆಗೆ ಏಕಮುಖವಾಗಿ ಚಲಿಸಲು ಅವಕಾಶ ನೀಡಲಾಗಿದೆ.7 ಕೆಸಿಕೆಎಂ 1ಕೊರೆಗಾಂವ್ ವಿಜಯೋತ್ಸವದ ಹಿನ್ನಲೆಯಲ್ಲಿ ಮಂಗಳವಾರ ಚಿಕ್ಕಮಗಳೂರು ನಗರದ ಪ್ರಮುಖ ರಸ್ತೆಗಳಲ್ಲಿ ದಲಿತ ಪರ ಸಂಘಟನೆಗಳ ಕಾರ್ಯಕರ್ತರು ಬೈಕ್ ರ್‍ಯಾಲಿ ನಡೆಸಿದರು.