ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಈ ವೇಳೆ ಸುದ್ದಿಗಾರರೊಂದಿಗೆ ಸಚಿವ ಡಾ.ಎಂಸಿ.ಸುಧಾಕರ್ ಮಾತನಾಡಿ, ಕಳೆದ ಮೂರು ವರ್ಷಗಳಿಂದ ರಥೋತ್ಸವದಲ್ಲಿ ಭಾಗಿಯಾಗುತ್ತಿದ್ದು, ಈ ಬಾರಿಯೂ ಬಾಗಿಯಾಗಿ ರಾಜ್ಯದ ಜನರ ಹೆಸರಲ್ಲಿ ಶ್ರೀ ಭೋಗನಂದೀಶ್ವರಸ್ವಾಮಿಗೆ ಪೂಜೆ ಸಲ್ಲಿಸಿ, ಜಿಲ್ಲೆಯಲ್ಲಿ ಕಳೆದ ಬಾರಿ ಮಳೆ ಬಂದಿತ್ತು. ಆದರೆ ಆ ಮಳೆ ಸಾಕಾಗಿಲ್ಲ. ಈ ಬಾರಿ ಚಿಕ್ಕಬಳ್ಳಾಪುರ, ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಉತ್ತಮ ಮಳೆ ಮತ್ತು ಬೆಳೆಯಾಗಿ ಅನ್ನದಾತರಿಗೆ ತಾವು ಬೆಳೆದ ಬೆಳೆಗೆ ಉತ್ತಮ ಬೆಲೆ ದೊರೆಯಲಿ. ಸರ್ವರೂ ಸಣತೋಷದಿಂದ ಇರಲಿ ಎಂದು ಬೇಡಿ ಕೊಂಡಿದ್ದೇನೆ ಎಂದರು.
ಮಹಾಶಿವರಾತ್ರಿ ಪ್ರಯುಕ್ತ ಶನಿವಾರದಿಂದಲೇ ದೇವಸ್ಥಾನದಲ್ಲಿ ದಿನವೀಡಿ ವಿಶೇಷ ಅಭಿಷೇಕ ಮತ್ತು ಹವನ ಹೋಮ, ಹಂಸ ವಾಹನೋತ್ಸವ, ಮಹಾನ್ಯಾಸ ಪೂರ್ವಕ ಏಕದಶವಾರ ರುದ್ರಾಭಿಷೇಕ, ಕಾಶಿಯಾತ್ರೆ, ಹರಿಕಥೆ, ಭಜನೆ, ಕಲ್ಯಾಣೋತ್ಸವ ಸೇರಿದಂತೆ ಅನೇಕ ಧಾರ್ಮಿಕ ಕೈಂಕರ್ಯಗಳನ್ನು ಆಯೋಜಿಸಲಾಗಿತ್ತು.ಸೋಮವಾರ ಬೆಳಗಿನ ಜಾವ ಮೂರು ಮತ್ತು ನಾಲ್ಕನೇ ಯಾಮದ ಮಹಾನ್ಯಾಸ ಪೂರ್ವಕ ಏಕದಶವಾರ ರುದ್ರಾಭಿಷೇಕಗಳನ್ನು ನೇರವೇರಿಸಲಾಯಿತು. ಶಿವರಾತ್ರಿ ಉಪವಾಸ ನಿರತ ಭಕ್ತರು ಬೆಳಿಗ್ಗೆಯಿಂದಲೇ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಕಂಡುಬಂತು. ವಿವಿಧ ಜಿಲ್ಲೆಗಳಿಂದ ಮಾತ್ರವಲ್ಲದೆ ನೆರೆಯ ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡಿನಿಂದ ಕೂಡ ನಂದಿ ಜಾತ್ರೆಗೆ ಭಕ್ತರ ದಂಡೇ ಹರಿದು ಬಂದಿತ್ತು. ಹರಕೆ ಹೊತ್ತ ಭಕ್ತರು ದೇವರಿಗೆ ಮುಡಿ ಕೊಟ್ಟು, ಪುಷ್ಕರಣಿಯಲ್ಲಿ ಸ್ನಾನ ಮಾಡಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಜಾತ್ರೆಗೆ ಬಂದವರ ಹಸಿವು, ದಣಿವು ದೂರ ಮಾಡಲು ಅನೇಕ ಕಡೆಗಳಲ್ಲಿ ಭಕ್ತರು ವಾಹನಗಳಲ್ಲಿ ಪಾನಕ, ಮಜ್ಜಿಗೆ, ಕೋಸಂಬರಿ ಮತ್ತು ಉಪಾಹಾರ ವಿತರಣೆ ಮಾಡಲಾಗುತ್ತಿತ್ತು.ಭರ್ಜರಿ ವ್ಯಾಪಾರ:ದೇಗುಲದ ಸುತ್ತಲು ತಲೆ ಎತ್ತಿದ್ದ ಪೂಜಾ ಸಾಮಗ್ರಿ, ತಿಂಡಿ ತಿನಿಸು, ಆಟಿಕೆ ವಸ್ತುಗಳು, ಗೃಹೋಪಯೋಗಿ ವಸ್ತುಗಳು, ಅಲಂಕಾರಿಕ ವಸ್ತುಗಳು, ಹಣ್ಣು, ತಂಪುಪಾನೀಯ ಸೇರಿದಂತೆ ವಿವಿಧ ಬಗೆಯ ಮಳಿಗೆಗಳಲ್ಲಿ ವ್ಯಾಪಾರ ಜೋರಾಗಿ ಕಂಡುಬಂತು. ಬುರಗು, ಬತಾಸು, ಸಿಹಿ ಮತ್ತು ಕುರುಕಲು ತಿಂಡಿ ತಿನಿಸುಗಳ ವ್ಯಾಪಾರ ಜೋರಾಗಿ ಕಂಡುಬಂತು. ಬಿಸಿಲ ಧಗೆಯಿಂದ ಹೊಟ್ಟೆ ತಣ್ಣನೆ ಮಾಡಲು ಭಕ್ತರು ಐಸ್‌ಕ್ರೀಂ, ಜ್ಯೂಸ್, ಕಲ್ಲಂಗಡಿ ಹಣ್ಣು ಮತ್ತು ಕಬ್ಬಿನ ಹಾಲಿನ ಮೊರೆ ಹೋಗುತ್ತಿದ್ದರು.ಭರಪೂರ ಮನರಂಜನೆ: ಜಾತ್ರೆಯ ಪರಿಸರದಲ್ಲಿಯೇ ತಲೆ ಎತ್ತಿದ್ದ ಮನರಂಜನಾ ತಾಣ ಬಹುತೇಕರ ಆಕರ್ಷಣೆಯ ಕೇಂದ್ರಬಿಂದುವಾಗಿತ್ತು. ಜಾತ್ರೆಗೆ ಬಂದವರು ಜಾಯಿಂಟ್ ವ್ಹೀಲ್, ರೈಲು ಸವಾರಿ, ತೊಟ್ಟಿಲು, ಜಾರುಬಂಡೆ ಸೇರಿದಂತೆ ವಿವಿಧ ಮನರಂಜನಾ ಆಟಗಳಲ್ಲಿ ಮೈಮರೆತು, ಕೇಕೆ ಹಾಕುತ್ತಿದ್ದ ದೃಶ್ಯಗಳು ಗೋಚರಿಸಿದವು.
ಈ ವೇಳೆ ಜಿಲ್ಲಾಧಿಕಾರಿ ಜಿ.ಪ್ರಭು, ಜಿಪಂ ಸಿಇಒ ಡಾ.ವೈನವೀನ್ ಭಟ್, ಉಪವಿಭಾಗಾಧಿಕಾರಿ ಡಿ.ಎಚ್,ಅಶ್ವಿನ್, ತಹಸೀಲ್ದಾರ್ ರಶ್ಮಿ ಮತ್ತಿತರರು ಇದ್ದರು.ಸಿಕೆಬಿ-3 ಮತ್ತು 4 ನಂದಿಯ ಶ್ರೀ ಭೋಗನಂದೀಶ್ವರಸ್ವಾಮಿಯ ಬ್ರಹ್ಮ ರಥೋತ್ಸವ.