ಕನ್ನಡಪ್ರಭ ವಾರ್ತೆ ಕುಶಾಲನಗರಗೌಡ ಸಮಾಜ ವತಿಯಿಂದ ಸಮೀಪದ ಬಸವನಹಳ್ಳಿಯಲ್ಲಿ ನಿರ್ಮಿಸಲಾಗುತ್ತಿರುವ ಸಮುದಾಯ ಭವನದ ಭೂಮಿ ಪೂಜೆಯನ್ನು ಮಾಜಿ ಮುಖ್ಯಮಂತ್ರಿ ಸದಾನಂದ ಗೌಡ ಅವರು ನೆರವೇರಿಸಿದರು. ಈ ಸಂದರ್ಭ ಮಾತನಾಡಿದ ಅವರು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ ಆಗುವುದರೊಂದಿಗೆ ಅಗತ್ಯ ಸೌಲಭ್ಯಗಳನ್ನು ನೀಡುವ ಜವಾಬ್ದಾರಿ ಎಲ್ಲರ ಮೇಲಿದೆ. ಕುಶಾಲನಗರ ಗೌಡ ಸಮಾಜ ಕಳೆದ ಹಲವು ವರ್ಷಗಳಿಂದ ತಮ್ಮ ಸಮುದಾಯದ ಒಗ್ಗಟ್ಟಿನ ಪ್ರತೀಕ ದೊಂದಿಗೆ ಹಲವು ಅಭಿವೃದ್ಧಿ ಸಾಮಾಜಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡಿರುವುದು ನಿಜಕ್ಕೂ ಶ್ಲಾಘನೀಯ ಎಂದರು.ಕುಶಾಲನಗರ ಗೌಡ ಸಮಾಜ ಅತ್ಯಂತ ಸಂಘಟಿತ ವಿಶ್ವಾಸಾರ್ಹ ಸಂಘಟನೆಯಾಗಿದೆ. ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಉತ್ತಮ ಹೆಸರು ಗಳಿಸಿದೆ ಎಂದರು. ಸಮಾಜದ ನೂತನ ಯೋಜನೆಗಳು ಸಾರ್ವಜನಿಕವಾಗಿ ಬಳಕೆ ಆಗುವ ಸಂದರ್ಭ ಸಮಾಜಕ್ಕೆ ಇನ್ನೂ ಹೆಚ್ಚಿನ ಗೌರವ ಲಭಿಸುತ್ತದೆ ಎಂದರು. ಸಮಾಜದ ಸದಸ್ಯರೇ ದೇಣಿಗೆಗಳನ್ನು ನೀಡುವ ಮೂಲಕ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಸಂತಸದ ವಿಷಯ ಎಂದರು. ಈ ಸಂದರ್ಭ ಮಾತನಾಡಿದ ಮಡಿಕೇರಿ ಕ್ಷೇತ್ರ ಶಾಸಕ ಮಂತರ್ ಗೌಡ ಸಂಸ್ಕೃತಿ ಸಂಪ್ರದಾಯ ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಸಮಾಜ ಉತ್ತಮ ಕೆಲಸ ಮಾಡುತ್ತಿದೆ ಸರ್ಕಾರದಿಂದ ಹಾಗೂ ತಾನು ವೈಯಕ್ತಿಕವಾಗಿ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಭರವಸೆ ನೀಡಿದರು. ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ ಬಿ ಭಾರತೀಶ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಶುಭ ಕೋರಿದರು. ಅರ್ಚಕರಾದ ರಾಘವೇಂದ್ರ ಭಟ್ ಅವರು ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.
ಕುಶಾಲನಗರ ಗೌಡ ಸಮಾಜಕ್ಕೆ ಸಂಪೂರ್ಣ ಸಹಕಾರ ನೀಡುವಂತೆ ಅವರು ಶಾಸಕರಲ್ಲಿ ಮನವಿ ಮಾಡಿದರು.