ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಉನ್ನತ ಶಿಕ್ಷಣ ನೀಡಬೇಕು ಎಂಬ ಸದುದ್ದೇಶದಿಂದ ಸ್ಥಾಪಿಸಿರುವ ಯಡೂರು ಬಿಟಿಸಿಜಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿಗೆ ಹೆಚ್ಚು ಅನುದಾನ ತರುವುದಾಗಿ ಶಾಸಕ ಡಾ. ಮಂತರ್‌ಗೌಡ ಹೇಳಿದರು.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಗ್ರಾಮೀಣ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಉನ್ನತ ಶಿಕ್ಷಣ ನೀಡಬೇಕು ಎಂಬ ಸದುದ್ದೇಶದಿಂದ ಸ್ಥಾಪಿಸಿರುವ ಯಡೂರು ಬಿಟಿಜಿಸಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅಭಿವೃದ್ಧಿಗೆ ಹೆಚ್ಚು ಅನುದಾನ ತರುವುದಾಗಿ ಶಾಸಕ ಡಾ.ಮಂತರ್‌ಗೌಡ ಹೇಳಿದರು.
ಸರ್ಕಾರಿ ಬಿಟಿಸಿಜಿ ಕಾಲೇಜಿನಲ್ಲಿ ೧ ಕೋಟಿ ರು.ಗಳ ವೆಚ್ಚದಲ್ಲಿ ಬಾಲಕರ ಹಾಸ್ಟೇಲ್ ಕಾಮಗಾರಿಗೆ ಭೂಮಿ ಪೂಜೆ ಸೋಮವಾರ ನೆರವೇರಿಸಿ ಅವರು ಮಾತನಾಡಿದರು.
ಕೊಡಗಿನಿಂದ ಪದವಿ ವ್ಯಾಸಂಗಕ್ಕೆ ಮಂಗಳೂರು, ಮೈಸೂರು, ಬೆಂಗಳೂರಿಗೆ ಹೋಗುವಂತಹ ಪರಿಸ್ಥಿತಿ ಇದೆ. ಬಹುತೇಕ ರೈತರ ಮಕ್ಕಳು ಬ್ಯಾಂಕ್‌ಗಳಲ್ಲಿ ಸಾಲ ಮಾಡಿ, ನಗರ ಪ್ರದೇಶಗಳಲ್ಲಿ ಓದಿಸುತ್ತಿದ್ದಾರೆ. ಬಿಟಿಜಿಸಿ ಕಾಲೇಜಿಗೆ ಎಲ್ಲಾ ಸೌಲಭ್ಯಗಳನ್ನು ಓದಗಿಸಿದರೆ ವಿದ್ಯಾರ್ಥಿಗಳು ಇಲ್ಲಿಯೇ ಉಚಿತವಾಗಿ ಕಲಿಕೆ ಮುಂದುವರಿಸಬಹುದು. ಈ ಬಗ್ಗೆ ಹೆಚ್ಚಿನ ಅಧ್ಯತೆ ನೀಡಲಾಗುವುದು ಎಂದರು.
ಕರ್ನಾಟಕ ಹೌಸಿಂಗ್ ಬೋರ್ಡ್ ಮೂಲಕ ಸರ್ಕಾರ ೧ ಕೋಟಿ ರೂ.ಗಳ ಅನುದಾನ ಕಲ್ಪಿಸಿದೆ. ಬಾಲಕರ ವಸತಿ ಗೃಹ, ಶೌಚಗೃಹ, ಒಂದು ಕ್ಲಾಸ್ ರೂಂ ನಿರ್ಮಾಣ ಮಾಡಲಾಗುತ್ತದೆ. ಉನ್ನತ ಶಿಕ್ಷಣ ಸಚಿವ ಎಚ್.ಸಿ.ಸುಧಾಕರ್ ಅವರಿಗೆ ಮನವಿ ಮಾಡಿದ ತಕ್ಷಣ ಅನುದಾನ ಕಲ್ಪಿಸಿದ್ದಾರೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ.ಸತೀಶ್, ಡಿಸಿಸಿ ಉಪಾಧ್ಯಕ್ಷ ಕೆ.ಎಂ.ಲೋಕೇಶ್, ಪ್ರಮುಖರಾದ ಚೇತನ್, ಕಿರಣ್ ಡಿ.ಯು., ಲಾರೆನ್ಸ್, ಎ.ಆರ್.ಕುಶಾಲಪ್ಪ, ನಾಗೇಶ್, ಯಡೂರು ಗ್ರಾಮಾಭಿವೃದ್ಧಿ ಮಂಡಳಿ ಅಧ್ಯಕ್ಷ ಮಲ್ಲಪ್ಪ, ಪ್ರೊ.ಹುಚ್ಚೇಗ್ವಡ, ಪ್ರೊ. ಶಿವಮೂರ್ತಿ ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.