ಬಿಳಿಕಲ್ ರಂಗನಾಥಸ್ವಾಮಿ ದೇವಾಲಯ ರಸ್ತೆ ಕಾಮಗಾರಿಗೆ ಭೂಮಿಪೂಜೆ

KannadaprabhaNewsNetwork |  
Published : Mar 19, 2026, 01:30 AM IST
ಅರಸೀಕೆರೆ ತಾಲೂಕಿನ ಬಿಳಿಕಲ್ ರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ ₹1 ಕೋಟಿ ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಕೆ.ಎಂ. ಶಿವಲಿಂಗೇಗೌಡ ಭೂಮಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಬಿಳಿಕಲ್ ರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ 1 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಬಿಳಿಕಲ್ ರಂಗನಾಥಸ್ವಾಮಿ, ಮಾಲೇಕಲ್ಲು ತಿರುಪತಿ, ಜೇನುಕಲ್ಲು ಸಿದ್ದೇಶ್ವರಸ್ವಾಮಿ ಸೇರಿದಂತೆ ಅನೇಕ ಪುಣ್ಯಕ್ಷೇತ್ರಗಳಿದ್ದು, ಪ್ರತಿದಿನವೂ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಅಗತ್ಯ ಮೂಲ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕ್ರಮಬದ್ಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷರು ಹಾಗೂ ಶಾಸಕ ಕೆ. ಎಂ. ಶಿವಲಿಂಗೇಗೌಡ ಹೇಳಿದರು.ತಾಲೂಕಿನ ಜೆ.ಸಿ.ಪುರ ಸಮೀಪದ ಬಿಳಿಕಲ್ ರಂಗನಾಥಸ್ವಾಮಿ ದೇವಸ್ಥಾನದ ಮುಂಭಾಗದಲ್ಲಿ 1 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಬಿಳಿಕಲ್ ರಂಗನಾಥಸ್ವಾಮಿ, ಮಾಲೇಕಲ್ಲು ತಿರುಪತಿ, ಜೇನುಕಲ್ಲು ಸಿದ್ದೇಶ್ವರಸ್ವಾಮಿ ಸೇರಿದಂತೆ ಅನೇಕ ಪುಣ್ಯಕ್ಷೇತ್ರಗಳಿದ್ದು, ಪ್ರತಿದಿನವೂ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಭಕ್ತರು ಭೇಟಿ ನೀಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸಲು ಹಲವು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಹೇಳಿದರು.ಕಣಕಟ್ಟೆ ಹೋಬಳಿಯ ಅನೇಕ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಕೊರತೆ ಇದ್ದು, ಜನರು ಫ್ಲೋರೈಡ್‌ಯುಕ್ತ ನೀರು ಸೇವಿಸಿ ಆರೋಗ್ಯ ಸಮಸ್ಯೆಗಳನ್ನು ಅನುಭವಿಸುತ್ತಿದ್ದರು. ಜಾನುವಾರುಗಳಿಗೂ ನೀರಿನ ಅಭಾವ ತೀವ್ರವಾಗಿತ್ತು. ಆದರೆ ಹೊನ್ನವಳ್ಳಿ ಏತ ನೀರಾವರಿ ಯೋಜನೆಯ ಮೂಲಕ 8 ಕೆರೆಗಳಿಗೆ ನೀರು ತುಂಬಿದ ಪರಿಣಾಮ ಅಂತರ್ಜಲ ಮಟ್ಟ ಹೆಚ್ಚಾಗಿ ಕೊಳವೆಬಾವಿಗಳು ಪುನಃ ಕಾರ್ಯನಿರ್ವಹಿಸುತ್ತಿವೆ ಎಂದು ಹೇಳಿದರು.ಮುಂದಿನ ದಿನಗಳಲ್ಲಿ ಎತ್ತಿನಹೊಳೆ ಯೋಜನೆ ಹಾಗೂ ಭದ್ರಾ ಮೇಲ್ದಂಡೆ ಯೋಜನೆಗಳನ್ನು ಅನುಷ್ಠಾನಗೊಳಿಸಿ ಕ್ಷೇತ್ರದ ಎಲ್ಲಾ ಕೆರೆಗಳಿಗೆ ನೀರು ಹರಿಸುವ ನಿಟ್ಟಿನಲ್ಲಿ ನಿರಂತರ ಹೋರಾಟ ನಡೆಸುವುದಾಗಿ ಭರವಸೆ ನೀಡಿದರು.ಇದೇ ವೇಳೆ ನಗರ ಸಮೀಪದ ಮಾಲೇಕಲ್ಲು ತಿರುಪತಿ ದೇವಾಲಯದ ರಾಜಗೋಪುರವನ್ನು ಕೋಟ್ಯಂತರ ರುಪಾಯಿ ವೆಚ್ಚದಲ್ಲಿ ನಿರ್ಮಿಸಿದ್ದು, ಗೋಪುರದ ಕಳಸ ಸ್ಥಾಪನೆಗೆ ಶೀಘ್ರದಲ್ಲೇ ದಿನಾಂಕ ನಿಗದಿ ಮಾಡಲಾಗುವುದು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಗ್ರಾಮದ ಮುಖಂಡರಾದ ಮಹೇಶ್ವರಪ್ಪ, ಕರಿಯಪ್ಪ, ಗುತ್ತಿಗೆದಾರರು, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೊಳೆನರಸೀಪುರದಲ್ಲಿ ಯುಗಾದಿ ಹಬ್ಬದ ವ್ಯಾಪಾರ ಬಲು ಜೋರು
ಅವಧಿ ಮುಗಿದ ಅಹಾರ ಸರಬರಾಜು: ಬ್ಲಿಂಕ್‌ಇಟ್ ಗೋದಾಮಿಗೆ ದಾಳಿ