ಕಾರ್ಯಕ್ರಮದಲ್ಲಿ ಅರವಿಂದ ಲಿಂಬಾವಳಿ, ಪಾವಗಡ ವೆಂಕಟೇಶ, ಅಖಂಡ ಶ್ರೀನಿವಾಸಮೂರ್ತಿ ಸೇರಿದಂತೆ ಭೋವಿ ಸಮಾಜದ ಮಾಜಿ, ಹಾಲಿ ಸಚಿವರು, ಶಾಸಕರು ಭಾಗವಹಿಸಲಿದ್ದು, ದೇಶದ ವಿವಿಧ ಭಾಗಗಳಿಂದ ಭೋವಿ ಸಮಾಜದ ಮುಖಂಡರು ಸಮಾವೇಶಕ್ಕೆ ಆಗಮಿಸಲಿದ್ದಾರೆ.
ಗದಗ: ಜು. 19ರಂದು ಭೋವಿ ಸಮಾಜದ ಪೀಠಾಧಿಪತಿ ಇಮ್ಮಡಿ ಸಿದ್ದರಾಮೇಶ್ವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಭೋವಿ ಜನೋತ್ಸವ ಕಾರ್ಯಕ್ರಮವನ್ನು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿದ್ದು, ಸಿಎಂ ಡಿ.ಕೆ. ಶಿವಕುಮಾರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಭೋವಿ ಸಮಾಜದ ರಾಜ್ಯ ಕಾರ್ಯದರ್ಶಿ ರವಿ ಪೂಜಾರ ತಿಳಿಸಿದರು.
ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ, ಪ್ರತಿಭಾವಂತ ವಿಧ್ಯಾರ್ಥಿಗಳಿಗೆ, ಐಎಎಸ್, ಐಪಿಎಸ್‌ನವರಿಗೂ ಸನ್ಮಾನ ಆಯೋಜನೆ ಮಾಡಲಾಗಿದ್ದು, ಲಕ್ಷಾಂತರ ಜನ ಸೇರುವ ಸಮಾವೇಶದಲ್ಲಿ ವಧು, ವರರ ಸಮಾವೇಶ ಕೂಡ ನಡೆಯುತ್ತಿದೆ. ಇದೇ ವೇಳೆ ನೂರಾರು ಯುವಕರಿಂದ ರಕ್ತದಾನ ಶಿಬಿರ ನಡೆಯಲಿದೆ ಎಂದರು.
ಕಾರ್ಯಕ್ರಮದಲ್ಲಿ ಅರವಿಂದ ಲಿಂಬಾವಳಿ, ಪಾವಗಡ ವೆಂಕಟೇಶ, ಅಖಂಡ ಶ್ರೀನಿವಾಸಮೂರ್ತಿ ಸೇರಿದಂತೆ ಭೋವಿ ಸಮಾಜದ ಮಾಜಿ, ಹಾಲಿ ಸಚಿವರು, ಶಾಸಕರು ಭಾಗವಹಿಸಲಿದ್ದು, ದೇಶದ ವಿವಿಧ ಭಾಗಗಳಿಂದ ಭೋವಿ ಸಮಾಜದ ಮುಖಂಡರು ಸಮಾವೇಶಕ್ಕೆ ಆಗಮಿಸಲಿದ್ದಾರೆ ಎಂದರು.
ಜಯಕ್ಕ ಕಳ್ಳಿ, ರಾಘವೇಂದ್ರ ಧಾರವಾಡ, ಆಂಜನೇಯ ಕಟಗಿ, ರವಿ ಗುಂಜೀಕರ, ಹುಚ್ಚಪ್ಪ ಸಂದಕದ, ಸೋಮು ಗುಡಿ, ಪರಶುರಾಮ ಕರಡಿಕೊಳ್ಳ, ಪವನ್ ಪೂಜಾರ ಉಪಸ್ಥಿತರಿದ್ದರು. ಇಂದು ಗಮಕ ವಾಚನ ಕಾರ್ಯಕ್ರಮ
ಗದಗ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕರ್ನಾಟಕ ಗಮಕ ಕಲಾ ಪರಿಷತ್ತು, ಕುಮಾರವ್ಯಾಸ ಪ್ರತಿಷ್ಠಾನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಜು. 11ರಂದು ಸಂಜೆ 6.30ಕ್ಕೆ ನಗರದ ತೋಂಟದ ಸಿದ್ಧಲಿಂಗ ಶ್ರೀಗಳ ಕನ್ನಡ ಭವನ, ಕಸಾಪ ಕಾರ್ಯಾಲಯ ಗದಗ ಗಮಕ ವಾಚನ ಮತ್ತು ವ್ಯಾಖ್ಯಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಅಧ್ಯಕ್ಷತೆಯನ್ನು ಜಿಲ್ಲಾ ಕಸಾಪ ಅಧ್ಯಕ್ಷ ವಿವೇಕಾನಂದಗೌಡ ಪಾಟೀಲ ವಹಿಸುವರು. ಕುವೆಂಪು ಅವರ ವಿರಚಿತ ಶ್ರೀರಾಮಾಯಣ ದರ್ಶನಂ ಮಹಾಕಾವ್ಯದ ಊರ್ಮಿಳೆ ಪ್ರಸಂಗ ಕುರಿತು ಗಮಕ ವಾಚನ ಮತ್ತು ವ್ಯಾಖ್ಯಾನವನ್ನು ಗಮಕಿ ಡಾ. ವಿಶ್ವನಾಥ ಶ್ರೀನಿವಾಸ ಕುಲಕರ್ಣಿ ಅವರು ನಡೆಸಿಕೊಡುವರು. ಮುಖ್ಯ ಅತಿಥಿಗಳಾಗಿ ಎಸ್.ಎಲ್. ಕುಲಕರ್ಣಿ ಹಾಗೂ ಜಿಲ್ಲಾ ಗಮಕ ಕಲಾ ಪರಿಷತ್ತಿನ ಅಧ್ಯಕ್ಷ ಡಾ. ದತ್ತಪ್ರಸನ್ನ ಪಾಟೀಲ ಅವರು ಭಾಗವಹಿಸುವರು ಎಂದು ಕಿಶೋರಬಾಬು ನಾಗರಕಟ್ಟಿ, ದತ್ತಪ್ರಸನ್ನ ಪಾಟೀಲ ಹಾಗೂ ಡಿ.ಎಸ್. ಬಾಪುರಿ, ಗುರುಮೂರ್ತಿ ದೇಶಪಾಂಡೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.