ಕಾರಟಗಿ: ತಾಲೂಕಿನ ಉಳೇನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಭುವನೇಶ್ವರಿ ರುದ್ರಪ್ಪ ೨೦೦ ಮೀ. ಓಟದ ಸ್ಪರ್ಧೆಗೆ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಕೊಪ್ಪಳದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದಿದ್ದಳು. ವಿದ್ಯಾರ್ಥಿನಿಯ ಸಾಧನೆಗೆ ಗ್ರಾಮಸ್ಥರು ಸೇರಿದಂತೆ ಶಾಲೆಯ ಎಸ್‌ಡಿಎಂಸಿ ಸದಸ್ಯರು ಅಭಿನಂದಿಸಿದ್ದಾರೆ.