22ರಂದು ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣಕ್ಕೆ ಭೂಮಿ ಪೂಜೆ

KannadaprabhaNewsNetwork |  
Published : Nov 20, 2024, 12:32 AM IST
19ಕೆಎಂಎನ್ ಡಿ12 | Kannada Prabha

ಸಾರಾಂಶ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣದ ಕೆಲಸಕ್ಕೆ ನ.22 ರಂದು ಭೂಮಿ‌ ಪೂಜೆ ನೆರವೇರಿಸಿ ಕೆಲಸ ಪ್ರಾರಂಭಿಸಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು

ಕನ್ನಡಪ್ರಭ ವಾರ್ತೆ ಮಂಡ್ಯ

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ವೇದಿಕೆ ನಿರ್ಮಾಣದ ಕೆಲಸಕ್ಕೆ ನ.22 ರಂದು ಭೂಮಿ‌ ಪೂಜೆ ನೆರವೇರಿಸಿ ಕೆಲಸ ಪ್ರಾರಂಭಿಸಲಾಗುವುದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ವೇದಿಕೆ‌ ಸಮಿತಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಸಮಿತಿಗಳ ಕೆಲಸಕ್ಕಿಂತ ವೇದಿಕೆ ಸಮಿತಿ ಕೆಲಸ ಮುಖ್ಯವಾಗಿದೆ‌. ಮುಖ್ಯ ವೇದಿಕೆ ಹಾಗೂ ಎರಡು ಸಮಾನಾಂತರ ವೇದಿಕೆ ಸೇರಿ ಮೂರು ವೇದಿಕೆಗಳಿಗೆ ಮೂರು ಜವಾಬ್ದಾರಿಯುತ ಅಧಿಕಾರಿಗಳನ್ನು ನಿಯೋಜಿಸಿ ಎಂದು ಸೂಚನೆ ನೀಡಿದರು.

ವೇದಿಕೆಗಳ ನಿರ್ಮಾಣದ ಜೊತೆಗೆ ಪಾರ್ಕಿಂಗ್ ಸ್ಥಳ ನಿಗದಿಯಾಗಬೇಕು, ಮಾಧ್ಯಮ ಕೇಂದ್ರ, ವಸ್ತುಪ್ರದರ್ಶನ‌ ಮಳಿಗೆ,‌ ವಾಣಿಜ್ಯ ಮಳಿಗೆ, ಪುಸ್ತಕ ಮಳಿಗೆ, ಆಹಾರ ವಿತರಣೆಗೆ ಕೌಂಟರ್ ಗಳು ಸೇರಿದಂತೆ ವಿವಿಧ ಇಲಾಖೆಗಳು ನೀಡುವ ವಸ್ತುಪ್ರದರ್ಶನ ಮಳಿಗೆಗಳ ನಿರ್ಮಾಣ ಅಚ್ಚುಕಟ್ಟಾಗಿ ನಡೆಯಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಡಾ. ಕುಮಾರ್ ಮಾತನಾಡಿ, ಮೈಸೂರು ಮಾರ್ಗವಾಗಿ ಬರುವವರಿಗೆ ಸತ್ವ ಬಳಿ ಹಾಗೂ ಬೆಂಗಳೂರು ಮಾರ್ಗವಾಗಿ ಬರುವವರಿಗೆ ಪ್ರತ್ಯೇಕವಾಗಿ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗುವುದು. ಪಾರ್ಕಿಂಗ್ ಸ್ಥಳದಿಂದ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಉಚಿತ ಬಸ್ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಕಾರ್ಯಕ್ರಮ ನಡೆಯುವ ಪ್ರಾರಂಭಿಕ ಸ್ಥಳದಲ್ಲಿ ಮಹಿಳೆಯರು, ವಿಕಲಚೇತನರಿಗೆ ಸಹಾಯ ಒದಗಿಸಲು ಮಾಹಿತಿ ಕೇಂದ್ರ ಹಾಗೂ ಇದೇ ಸ್ಥಳದಲ್ಲಿ ಆರೋಗ್ಯದಲ್ಲಿ ತೊಂದರೆಯಾದಲ್ಲಿ ಚಿಕಿತ್ಸೆ ನೀಡಲು ಆರೋಗ್ಯ ಕೇಂದ್ರ ತೆರೆಯಲಾಗುವುದು. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮೂರು ಬೋರ್ ವೆಲ್ ಗಳನ್ನು ಗುರುತಿಸಲಾಗಿದೆ. ಬೋರ್ ವೆಲ್ ನಿಂದ ನೀರು ಪಂಪ್ ಆಗಿ ಶುದ್ಧೀಕರಿಸಿದ ನಂತರ ಟ್ಯಾಂಕ್ ಹಾಗೂ ಪೈಪ್ ಲೈನ್ ಸಹಾಯದಿಂದ ಕುಡಿಯಲು ಹಾಗೂ ಅಡುಗೆ ತಯಾರಿಕೆಗೆ ನೀರು ಒದಗಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಪಂ ಸಿಇಒ ಶೇಕ್ ತನ್ವೀರ್ ಆಸಿಫ್, ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಷಿ, ಜಿಲ್ಲಾ ಸಂಚಾಲಕಿ ಡಾ ಮೀರಾ ಶಿವಲಿಂಗಯ್ಯ, ಪಿಡಬ್ಲ್ಯೂಡಿ ಕಾರ್ಯಪಾಲಕ ಅಭಿಯಂತರ ಹರ್ಷ, ಕಸಾಪ ಗೌರವ ಕಾರ್ಯದರ್ಶಿ ಡಾ.ಕೃಷ್ಣೇಗೌಡ ಹುಸ್ಕೂರು, ಹರ್ಷ ಪಣ್ಣೆದೊಡ್ಡಿ, ಅಪ್ಪಾಜಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕನ್ನಡ ಕ್ಯಾಲಿಗ್ರಫಿಗೆ ಲಭಿಸಿದ ಅಂತಾರಾಷ್ಟ್ರೀಯ ಪ್ರಶಸ್ತಿ
569 ಲೈಸೆನ್ಸ್‌ ಇ-ಹರಾಜಿಗೆ ಮುಂದಾದ ಅಬಕಾರಿ ಇಲಾಖೆ