ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಮಾಡುವುದು ಬೇಡ ಎಂದು ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಕನ್ನಡಪ್ರಭ ವಾರ್ತೆ ನಾಪೋಕ್ಲು
ಕ್ಷೇತ್ರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯದಲ್ಲಿ ರಾಜಕೀಯ ಮಾಡುದುವು ಬೇಡ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದರು.
ಕೊಳಕೇರಿ ಗ್ರಾಮದಿಂದ ಕೋಕೇರಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಗೆ 30ಲಕ್ಷ ರು. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಕೊಳಕೇರಿಯಲ್ಲಿ ಭೂಮಿ ಪೂಜೆ ಮಾಡಿ ಅವರು ಮಾತನಾಡಿದರು.
ವಿರಾಜಪೇಟೆ ಕ್ಷೇತ್ರದಾದ್ಯಂತ ಅನುದಾನಕ್ಕೆ ಅನುಗುಣವಾಗಿ ಹಂತ ಹಂತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಅಭಿವೃದ್ಧಿ ಕಾರ್ಯವನ್ನು ಗ್ಯಾರೆಂಟಿಗೆ ಹೋಲಿಕೆ ಮಾಡುವುದು ಬೇಡ. ಕ್ಷೇತ್ರದಲ್ಲಿ ನಡೆಯುವ ಅಭಿವೃದ್ಧಿ ಕಾರ್ಯಗಳಿಗೆ ಯಾರಾದ್ರೂ ಅಡ್ಡಿಪಡಿಸಿದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂದು ತೀಕ್ಷ್ಮವಾಗಿ ಪ್ರತಿಕ್ರಿಯಿಸಿದರು.
ಗುಣಮಟ್ಟ ಕಾಪಾಡಿಕೊಂಡು ಕಾಲಮಿತಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು. ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಗ್ರಾಮಸ್ಥರು ಕಾಮಗಾರಿಯ ಗುಣಮಟ್ಟ ಪರಿಶೀಲನೆ ಮಾಡಿ ಕಾಮಗಾರಿ ಕಳಪೆ ಆಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಈ ಸಂದರ್ಭ ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಎ.ಇಸ್ಮಾಯಿಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್, ಉಪಾಧ್ಯಕ್ಷೆ ಕುಲ್ಲೇಟಿರ ಹೇಮಾವತಿ, ನಾಪೋಕ್ಲು ವಲಯ ಅಧ್ಯಕ್ಷ , ಸದಸ್ಯರಾದ ಮಾಚೇಟಿರ ಕುಸು ಕುಶಾಲಪ್ಪ, ಸದಸ್ಯರಾದ ಕುಲ್ಲೇಟಿರ ಅರುಣ್ ಬೇಬ, ಎಂ.ಎಂ.ಅಮೀನಾ, ಕೆ.ವೈ.ಅಶ್ರಫ್, ಗಂಗಮ್ಮ, ಸಾಬತಿಮ್ಮಯ್ಯ, ಮಾಜಿ ಸದಸ್ಯ ಎ.ಕೆ. ಹಾರಿಸ್, ಗ್ರಾಮಸ್ಥರಾದ ಮೊಯ್ದುಕುಟ್ಟಿ ಹಾಜಿ, ಅಹಮದ್ ಹಾಜಿ, ಎಂ.ಬಿ. ಇಸ್ಮಾಯಿಲ್, ಎಂ.ಯು. ಮುನೀರ್, ಕೆ. ಎ.ಆಲಿ, ಕಲಿಯಂಡ ಕೌಶಿ, ಕೆಲೇಟಿರ ದೀಪು ದೇವಯ್ಯ, ಅಪ್ಪಚಟ್ಟೋಳಂಡ ಮಿಥುನ್ ಮಾಚಯ್ಯ ಗುತ್ತಿಗೆದಾರರಾದ ಶಬೀಲ್, ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.