ಕನ್ನಡಪ್ರಭ ವಾರ್ತೆ ಮೂಡಲಗಿ
ಪಟ್ಟಣದಲ್ಲಿ ₹1.62 ಕೋಟಿ ವೆಚ್ಚದಲ್ಲಿ ವಿವಿಧ ರಸ್ತೆ ಕಾಮಗಾರಿಗೆ ಗೋಕಾಕ-ಮೂಡಲಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಗೌರವಾಧ್ಯಕ್ಷ ಹಾಗೂ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಭೂಮಿಪೂಜೆ ನೆರವೇರಿಸಿ ಮಾತನಾಡಿ, ಪಟ್ಟಣದ ಸರ್ವಾಂಗಿಣ ಅಭಿವೃದ್ಧಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದು, ಪಟ್ಟಣದ ಎಲ್ಲ ಪ್ರಮುಖ ರಸ್ತೆಗಳನ್ನು ಅಭಿವೃದ್ಧಿ ಪಡಿಸುವ ಮೂಲಕ ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಿಕೊಡುತ್ತಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಪುರಸಭೆ ಮುಖ್ಯಾಧಿಕಾರಿ ದೀಪಕ್ ಹರ್ದಿ, ಪುರಸಭೆಯ ಆರೋಗ್ಯ ನಿರೀಕ್ಷಕ ಚಿದಾನಂದ ಮುಗಳಖೋಡ, ಪಟ್ಟಣದ ಮುಖಂಡಾರದ ರವಿಂದ್ರ ಸೋನವಾಲ್ಕರ, ಸಂತೋಷ ಸೋನವಾಲ್ಕರ, ಹಣಮಂತ ಗುಡ್ಲಮನಿ, ಸುಭಾಸ ಸಣ್ಣಕ್ಕಿ, ಹುಸೇನ ಶೇಖ, ಗಫಾರ್ ಡಾಂಗೆ, ಈರಣ್ಣ ಬನ್ನೂರ, ಅನ್ವರ್ ನಧಾಪ್ ಡಾ.ಎಸ್.ಎಸ್.ಪಾಟೀಲ ಹಾಗೂ ಪುರಸಭೆ ಸದಸ್ಯರು ಉಪಸ್ಥಿತರಿದ್ದರು.