35 ಲಕ್ಷ ವೆಚ್ಚದ ಒಳಚರಂಡಿ ರಸ್ತೆ ಕಾಮಗಾರಿಗೆ ಭೂಮಿಪೂಜೆ

KannadaprabhaNewsNetwork |  
Published : Sep 27, 2024, 01:16 AM IST
26ಎಚ್ಎಸ್ಎನ್11 : ನುಗ್ಗೇಹಳ್ಳಿ  ಹೋಬಳಿಯ  ಕಲ್ಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ತಾವರೆಕೆರೆ ಗ್ರಾಮದಲ್ಲಿ 35 ಲಕ್ಷ ವೆಚ್ಚದಲ್ಲಿ ಒಳ ಚರಂಡಿ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಸಿಎನ್ ಬಾಲಕೃಷ್ಣ ಭೂಮಿ ಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಹೋಬಳಿಯ ಕಲ್ಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ತಾವರೆಕೆರೆ ಗ್ರಾಮದಲ್ಲಿ 35 ಲಕ್ಷ ರು. ವೆಚ್ಚದಲ್ಲಿ ಒಳ ಚರಂಡಿ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ಸಿ ಎನ್ ಬಾಲಕೃಷ್ಣ ಹೇಳಿದರು. ತಾವರೆಕೆರೆ ಗ್ರಾಮದಲ್ಲಿ ಒಳಚರಂಡಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮದಲ್ಲಿ ಈಗಾಗಲೇ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಇದರ ಜೊತೆಗೆ 35 ಲಕ್ಷ ವೆಚ್ಚದಲ್ಲಿ ಒಳಚರಂಡಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಲಾಗಿದೆ.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಹೋಬಳಿಯ ಕಲ್ಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ತಾವರೆಕೆರೆ ಗ್ರಾಮದಲ್ಲಿ 35 ಲಕ್ಷ ರು. ವೆಚ್ಚದಲ್ಲಿ ಒಳ ಚರಂಡಿ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ಸಿ ಎನ್ ಬಾಲಕೃಷ್ಣ ಹೇಳಿದರು. ಹೋಬಳಿಯ ತಾವರೆಕೆರೆ ಗ್ರಾಮದಲ್ಲಿ ಒಳಚರಂಡಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮದಲ್ಲಿ ಈಗಾಗಲೇ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಇದರ ಜೊತೆಗೆ 35 ಲಕ್ಷ ವೆಚ್ಚದಲ್ಲಿ ಒಳಚರಂಡಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಗ್ರಾಮದ ಕೆರೆಗೆ ನುಗ್ಗೇಹಳ್ಳಿ ಏತ ನೀರಾವರಿ ಯೋಜನೆ ಮೂಲಕ ಜಂಬೂರು ಹಾಗೂ ಕಲ್ಕೆರೆ ಭಾಗದ ಕರೆಗಳು ತುಂಬಿದ ನಂತರ ನುಗ್ಗೇಹಳ್ಳಿ ಹಿರೇಕೆರೆಯ ಮೂಲಕ ನೀರು ಹರಿಸಲಾಗುತ್ತದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರ 5 ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಹೋಗಿ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಕಳೆದ 1 ವರ್ಷಗಳಿಂದಲೂ ಯಾವುದೇ ಅನುದಾನ ನೀಡುತ್ತಿಲ್ಲ. ಇದರಿಂದ ಕ್ಷೇತ್ರದ ಅಭಿವೃದ್ಧಿ ಕೆಲಸಗಳು ಕುಂಠಿತಗೊಂಡಿದೆ. ಇದರಿಂದ ಕೇಂದ್ರದಲ್ಲಿ ಶಾಸಕರಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ಕಷ್ಟವಾಗುತ್ತಿದ್ದು, ಈ ಬಗ್ಗೆ ರಾಜ್ಯ ಸರ್ಕಾರ ತಾಲೂಕಿನ ಅಭಿವೃದ್ಧಿ ಕೆಲಸಗಳಿಗೆ ಅನುದಾನ ನೀಡುವಂತೆ ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಸುಗುಣ ಮಧು, ಜಯಕುಮಾರ್, ಗುತ್ತಿಗೆದಾರರಾದ ತೋಟಿ ನಾಗರಾಜ್, ತೋಟಿ ಮಂಜು, ಮುಖಂಡರಾದ ಧರ್ಮರಾಜ್, ಹುಲಿಕೆರೆ ಸಂಪತ್ ಕುಮಾರ್, ಎಂ ಎಸ್ ಸುರೇಶ್, ಮಂಜುನಾಥ್, ನಂಜೇಶ್, ಪಿಡಿಒ ಗಂಗಾಧರ್‌ ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.

PREV

Recommended Stories

ದಸರಾ ಹಬ್ಬ ಅದ್ಧೂರಿ ಆಚರಣೆಗೆ ಎಲ್ಲರೂ ಸಹಕರಿಸಿ: ಏಗಪ್ಪ ಸವದಿ
ಬಿಡಿಸಿಸಿ ಬ್ಯಾಂಕ್‌ ಹಿತರಕ್ಷಣೆಗೆ ನಾವು ಬದ್ಧ