ಕನ್ನಡಪ್ರಭ ವಾರ್ತೆ ಸಿದ್ದಾಪುರ
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಾವರಿ ನಿಗಮದ ಸಣ್ಣ ನೀರಾವರಿ ಇಲಾಖೆಯಿಂದ ಹಲವಾರು ಕಾಮಗಾರಿಗಳಿಗೆ ಚಾಲನೆ ನೀಡಿದ್ದು, ಅದರ ಭಾಗವಾಗಿ ಗೂಡುಗದ್ದೆಯ ಕಾವೇರಿ ನದಿಯ ದಂಡೆಯಲ್ಲಿ ಭೂ ಕುಸಿತದ ಭೀತಿಯಿರುವ ಪ್ರದೇಶದಲ್ಲಿ 2 ಕೋಟಿ ರು. ವೆಚ್ಚದಲ್ಲಿ ತಡೆಗೋಡೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ. ಆದಷ್ಟು ಶೀಘ್ರದಲ್ಲಿ ಗುಣಮಟ್ಟದ ಕಾಮಗಾರಿ ಮುಗಿಸಲಾಗುವುದು ಎಂದರು.
ಮುಖ್ಯಮಂತ್ರಿ ಮಾರು 132 ಕೋಟಿ ರು.ಗಳಷ್ಟು ಹಣವನ್ನು ಕೊಡಗಿನ ರಸ್ತೆಗಳ ಅಭಿವೃದ್ಧಿಗೆ ನೀಡಿದ್ದು, ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ರಸ್ತೆಗಳನ್ನು ಹಂತಹಂತವಾಗಿ ಅಭಿವೃದ್ಧಿ ಮಾಡಲಾಗುವುದು ಎಂದು ತಿಳಿಸಿದರು.ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಗೋಪಾಲ್, ಉಪಾಧ್ಯಕ್ಷ ಪಳನಿಸ್ವಾಮಿ, ಪಂಚಾಯಿತಿ ಸದಸ್ಯರು ಸೇರಿದಂತೆ ಕಾಂಗ್ರೆಸ್ ಪಕ್ಷದ ಪ್ರಮುಖರಾದ ರಂಜಿ ಪೂಣಚ್ಚ, ಎಸ್.ಬಿ. ಪ್ರತೀಶ್, ಎಂ.ಬಿಜೋಯ್ ಇತರರು ಇದ್ದರು.