ಜಗಜೀವನರಾಂ ಭವನ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ

KannadaprabhaNewsNetwork |  
Published : Dec 21, 2025, 03:15 AM IST
ಫೋಟೊ: 20ಎಚ್‌ಎನ್‌ಎಲ್1 | Kannada Prabha

ಸಾರಾಂಶ

ಹಾನಗಲ್ಲ ತಾಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ 75 ಲಕ್ಷ ರು. ವೆಚ್ಚದಲ್ಲಿ ಹೋಬಳಿ ಮಟ್ಟದ ಡಾ. ಬಾಬು ಜಗಜೀವನರಾಂ ಭವನ ನಿರ್ಮಾಣ ಕಾಮಗಾರಿಗೆ ಶನಿವಾರ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.

ಹಾನಗಲ್ಲ: ತಾಲೂಕಿನ ಬಮ್ಮನಹಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ 75 ಲಕ್ಷ ರು. ವೆಚ್ಚದಲ್ಲಿ ಹೋಬಳಿ ಮಟ್ಟದ ಡಾ. ಬಾಬು ಜಗಜೀವನರಾಂ ಭವನ ನಿರ್ಮಾಣ ಕಾಮಗಾರಿಗೆ ಶನಿವಾರ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು. ನೂತನ ಭವನದಿಂದ ಸಮುದಾಯದ ನಾನಾ ಸಾಮಾಜಿಕ ಚಟುವಟಿಕೆಗಳಿಗೆ ಅನುಕೂಲವಾಗಲಿದೆ. ಬಮ್ಮನಹಳ್ಳಿ ಗ್ರಾಮದಲ್ಲಿ ಇಂಥದೊಂದು ಭವನದ ಅಗತ್ಯತೆ ಇತ್ತು. ಅದೀಗ ಈಡೇರಿದೆ ಎಂದು ತಿಳಿಸಿದ ಶಾಸಕ ಮಾನೆ, ನಿಗದಿತ ಸಮಯಕ್ಕೆ ಗುಣಮಟ್ಟದ ಕಾಮಗಾರಿಯೊಂದಿಗೆ ಕಟ್ಟಡ ನಿರ್ಮಾಣ ಪೂರ್ಣಗೊಳಿಸುವಂತೆ ಸ್ಥಳದಲ್ಲಿದ್ದ ನಿರ್ಮಿತಿ ಕೇಂದ್ರದ ಅಧಿಕಾರಿಗಳಿಗೆ ಸೂಚಿಸಿದರು. ಗ್ರಾಪಂ ಸದಸ್ಯರಾದ ಅರುಣ ಮಲ್ಲಮ್ಮನವರ, ಪತಂಗಸಾಬ ಬಮ್ಮನಹಳ್ಳಿ, ಮುಖಂಡರಾದ ಮುನ್ನಾ ಪಠಾಣ, ಕೆಡಿಪಿ ಸದಸ್ಯ ಮಹ್ಮದ್‌ಹನೀಫ್ ಬಂಕಾಪೂರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ಎಂ.ಎಸ್.ಪಾಟೀಲ, ಚನ್ನವೀರಗೌಡ ಪಾಟೀಲ, ಪರಶುರಾಮ ಬೇಂದ್ರೆ, ನಾಗರಾಜ ಮಲ್ಲಮ್ಮನವರ, ಸುನೀಲ್ ಮುದುಕಣ್ಣನವರ, ಪ್ರವೀಣ ಹಿರೇಮಠ, ಉಮೇಶ ದೊಡ್ಡಮನಿ, ಲಕ್ಷ್ಮಿ ಕಲಾಲ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಗಂಗಮ್ಮ ಹಿರೇಮಠ, ಪಿಡಿಒ ಪ್ರವೀಣ, ನಿರ್ಮಿತಿ ಕೇಂದ್ರದ ಅಭಿಯಂತರ ಜಯಪ್ರಕಾಶ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಲ್ಸ್‌ ಪೋಲಿಯೋ ಹಾಕಿಸಿ, ಅಂಗವಿಕತೆ ತಪ್ಪಿಸಿ
ಪುಷ್ಪಗಿರಿ ಜೇಸಿಗೆ 50 ವರ್ಷ: ಸಂಭ್ರಮ ಆಚರಣೆ