;Resize=(412,232))
ಬೀದರ್ : ಬೀದರ್ ಜಿಲ್ಲಾ ಪಂಚಾಯತ್‌ಗೆ ರಾಷ್ಟ್ರೀಯ ಜಲ ಸಂಚಯ-ಜನ್ ಭಾಗಿದಾರಿ ಪ್ರಶಸ್ತಿ ದೊರೆತಿದೆ. ‘ಅತ್ಯುತ್ತಮ ಪ್ರದರ್ಶನ ಜಿಲ್ಲೆ’ ಎಂಬ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಬೀದರ್ ಜಿಲ್ಲೆಯೂ ರಾಜ್ಯಕ್ಕೆ ಹೆಮ್ಮೆ ತಂದಿದೆ.
ನವದೆಹಲಿಯ ವಿಜ್ಞಾನ ಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ಇಡೀ ರಾಷ್ಟ್ರದಲ್ಲಿಯೇ ಬೀದರ್‌ಗೆ 6ನೇ ಸ್ಥಾನ ದೊರೆಯಿತು. ಕೇಂದ್ರ ಜಲ ಶಕ್ತಿ ಸಚಿವ ಸಿ.ಆರ್.ಪಾಟೀಲ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ಬೀದರ್ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಪ್ರಶಸ್ತಿ ಸ್ವೀಕರಿಸಿದರು. ಈ ಪ್ರತಿಷ್ಠಿತ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಕೇಂದ್ರ ಸಚಿವ ವಿ.ಸೋಮಣ್ಣ ಮತ್ತಿತರರು ಇದ್ದರು.