ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಸೊಲ್ಲಾಪುರದಲ್ಲಿ ಬಾಗಲಕೋಟೆ ಬಸ್‌ಗೆ ಮಸಿ ಬಳಿದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದು, ಈ ಕುರಿತು ಮಾತನಾಡಿದ ಅವರು, ನಮ್ಮ ಬಸ್ಸಿಗೆ ಅವರು ಮಸಿ ಬಳಿಯೋದು, ಅವರ ಬಸ್ಸಿಗೆ ನಾವು ಮಸಿ ಬಳಿಯುವುದರಲ್ಲಿ ಅರ್ಥವಿಲ್ಲ. ಇದರಿಂದ ನಷ್ಟ ಆಗೋದು ಎರಡೂ ಸಂಸ್ಥೆಗಳಿಗೆ. ಮಹಾರಾಷ್ಟ್ರದವರು ಇಲ್ಲಿ ಬರಬೇಕು. ನಮ್ಮವರು ಅಲ್ಲಿಗೆ ಹೋಗಬೇಕು. ಮಹಾರಾಷ್ಟ್ರ ಸರ್ಕಾರ, ಶಿವಸೇನೆ ತಪ್ಪು ಮಾಡಿದವರಿಗೆ ಸಪೋರ್ಟ್ ಮಾಡೋದು ತಪ್ಪು ಆಗುತ್ತದೆ ಎಂದು ಕಿಡಿಕಾರಿದರು.
ಅಲ್ಲಿಯವರು ಹಾಗೆ ಮಾಡಿದರೆ ನಮ್ಮವರು ಸುಮ್ಮನೆ ಇರ್ತಾರಾ? ಇವರು ಅದನ್ನೇ ಮಾಡುತ್ತಾರೆ. ನಮ್ಮ ಪ್ರಧಾನ ಕಾರ್ಯದರ್ಶಿ ಮೂಲಕ ಮಹಾರಾಷ್ಟ್ರ ಸರ್ಕಾರದ ಜೊತೆಗೆ ಮಾತನಾಡಲಾಗಿದೆ. ಸೊಲ್ಲಾಪುರ ಜಿಲ್ಲೆಯ ಅಧಿಕಾರಿಗಳ ಮಟ್ಟದಲ್ಲಿ ನಾಳೆ ಸಭೆ ಆಗುತ್ತದೆ. ಆಗಲಿಲ್ಲ ಅಂದ್ರೆ ಮಹಾರಾಷ್ಟ್ರ ಸರ್ಕಾರಕ್ಕೆ ನಮ್ಮ ಮುಖ್ಯ ಕಾರ್ಯದರ್ಶಿ ಮೂಲಕ ಮಾತನಾಡಿಸುತ್ತೇನೆ. ಇಲ್ಲವೆಂದರೆ ಅಲ್ಲಿನ ಸರ್ಕಾರದ ಜೊತೆಗೆ ನಾನು ಮಾತನಾಡುತ್ತೇನೆ. ಮಹಾರಾಷ್ಟ್ರ ಬಸ್‌ಗಳಿಗೆ ಹೋಗುವ ನಮ್ಮ ಬಸ್‌ಗಳು ಸ್ಥಗಿತಗೊಂಡಿವೆ. ಮಹಾರಾಷ್ಟ್ರದಿಂದ ನಮ್ಮ ರಾಜ್ಯಕ್ಕೆ ಬರುವ ಬಸ್‌ಗಳು ಸ್ಥಗಿತಗೊಂಡಿವೆ ಎಂದರು.