ಮಾ.27ರಂದು ಕಾಂಗ್ರೆಸ್ ಕಾರ್ಯಕರ್ತರ ಬೃಹತ್‌ ಬಹಿರಂಗ ಸಭೆ: ಸಿ.ಡಿ.ಗಂಗಾಧರ್

KannadaprabhaNewsNetwork | Published : Mar 26, 2024 1:04 AM

ಸಾರಾಂಶ

ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲದೆ ಇರಬಹುದು. ಇದರಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ರಾಜ್ಯದಲ್ಲಿ ನಮ್ಮ ಸರ್ಕಾರವಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆದ ವೈಪಲ್ಯವನ್ನು ಮನಸ್ಸಿನಿಂದ ಕಿತ್ತು ಹಾಕಿ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಿ ಗೆದ್ದರೆ ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಶಾಸಕರಿಲ್ಲ ಎನ್ನುವ ಕಾರ್ಯಕರ್ತರ ಕೊರಗನ್ನು ಅವರು ಅಳಿಸಿ ಹಾಕುತ್ತಾರೆ.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾ.27ರಂದು ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಮತ್ತು ಕಾರ್ಯಕರ್ತರ ಬೃಹತ್ ಬಹಿರಂಗ ಸಭೆ ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್ ತಿಳಿಸಿದರು.

ಪಟ್ಟಣದ ಹೇಮಾವತಿ ಬಡಾವಣೆಯ ಪಕ್ಷದ ಕಚೇರಿಯಲ್ಲಿ ಕಾಂಗ್ರೆಸ್ ಮುಖಂಡರ ಪೂರ್ವಭಾವಿ ಸಭೆ ನಡೆಸಿ ಮಾತನಾಡಿ, ಪಟ್ಟಣ ಟಿಎಪಿಸಿಎಂಎಸ್ ಆವರಣದಲ್ಲಿ ಅಂದು ಮಧ್ಯಾಹ್ನ 1.30ಕ್ಕೆ ನಡೆಯುವ ಬಹಿರಂಗ ಮತ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು ಮತ್ತು ಪಕ್ಷದ ಮುಖಂಡರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.

ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರಿಲ್ಲದೆ ಇರಬಹುದು. ಇದರಿಂದ ಪಕ್ಷದ ಕಾರ್ಯಕರ್ತರು ಧೃತಿಗೆಡುವ ಅಗತ್ಯವಿಲ್ಲ. ರಾಜ್ಯದಲ್ಲಿ ನಮ್ಮ ಸರ್ಕಾರವಿದೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಆದ ವೈಪಲ್ಯವನ್ನು ಮನಸ್ಸಿನಿಂದ ಕಿತ್ತು ಹಾಕಿ ಪಕ್ಷದ ಅಭ್ಯರ್ಥಿ ಸ್ಟಾರ್ ಚಂದ್ರು ಪರ ಮತಯಾಚನೆ ಮಾಡಿ ಗೆದ್ದರೆ ಕೆ.ಆರ್.ಪೇಟೆಯಲ್ಲಿ ಕಾಂಗ್ರೆಸ್ ಶಾಸಕರಿಲ್ಲ ಎನ್ನುವ ಕಾರ್ಯಕರ್ತರ ಕೊರಗನ್ನು ಅವರು ಅಳಿಸಿ ಹಾಕುತ್ತಾರೆ ಎಂದರು.

ಚುನಾವಣೆ ವೇಳೆ ಯಾರ ಬಗ್ಗೆಯೂ ಲಘುವಾಗಿ ಮಾತನಾಡಬಾರದು. ಪಕ್ಷ ಸೇರ್ಪಡೆಯಾಗಲು ಬಯಸುವ ಯುವಕರು ಮತು ಅನ್ಯ ಪಕ್ಷದ ಕಾರ್ಯಕರ್ತರನ್ನು ಗುರುತಿಸಿ ಅವರನ್ನು ಪಕ್ಷದ ವೇದಿಕೆಗೆ ಕರೆತರುವ ಕೆಲಸ ಮಾಡಬೇಕು. ಪಕ್ಷಕ್ಕೆ ಸೇರ್ಪಡೆಯಾಗುವವರಿಗೆ ಯಾವುದೇ ಕಾರಣಕ್ಕೂ ಸ್ಥಳೀಯ ಮಟ್ಟದಲ್ಲಿ ಅಡ್ಡಿಪಡಿಸಬಾರದು ಕಿವಿಮಾತು ಹೇಳಿದರು.

ಈ ವೇಳೆ ಮುಖಂಡರಾದ ಬಿ.ಎಲ್.ದೇವರಾಜು, ವಿಜಯ ರಾಮೇಗೌಡ, ಕೋಡೀಮಾರನಹಳ್ಳಿ ದೇವರಾಜು, ತಾಲೂಕು ಉಸ್ತುವಾರಿ ಚಿನಕುರಳಿ ರಮೇಶ್, ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿ ಸದಸ್ಯ ಕಿಕ್ಕೇರಿ ಸುರೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಹರಳಹಳ್ಳಿ ವಿಶ್ವನಾಥ್, ಐಪನಹಳ್ಳಿ ನಾಗೇಂದ್ರಕುಮಾರ್, ಎಂ.ಡಿ.ಕೃಷ್ಣಮೂರ್ತಿ, ಡಾ.ಶ್ರೀಕಾಂತ್, ಪುರಸಬಾ ಸದಸ್ಯರಾದ ಡಿ.ಪ್ರೇಂಕುಮಾರ್, ಎಚ್.ಎನ್.ಪ್ರವೀಣ್, ಹರಿಹರಪುರ ನಿಂಗರಾಜು, ಜಿಲ್ಲಾ ಮಹಿಳಾ ಕಾಂಗ್ರೆಸ್ಸಿನ ಯಶೋಧಮ್ಮ ಹಲವರು ಇದ್ದರು.

Share this article