ರಾಮನಗರ: ಬಿಗ್ ಬಾಸ್‌ನಲ್ಲಿ ಸ್ವರ್ಗ ನರಕ ವಿಚಾರವಾಗಿ ಮಹಿಳೆಯರ ಕುರಿತಾದ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಪೂರ್ಣ ತನಿಖಾ ವರದಿ ಸಿದ್ಧಪಡಿಸಿ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಿಗೆ ಸಲ್ಲಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ಪ್ರತಿಕ್ರಿಯೆ ನೀಡಿದರು.
ಆ ವರದಿ ನೀಡಲು ನಾನು ಮಾಗಡಿ ಡಿಎಸ್ಪಿ ಮತ್ತು ಕುಂಬಳಗೋಡು ಇನ್ಸ್‌ಪೆಕ್ಟರ್ ಬಳಿ ಮಾತನಾಡಿದ್ದೇನೆ. ಅವರು ಬಿಗ್ ಬಾಸ್ ಆಯೋಜಕರಿಗೆ ನೋಟಿಸ್ ತಲುಪಿಸಿದ್ದಾರೆ. ಅಲ್ಲಿ ಏನಾಗಿದೆ ಎಂಬುದರ ಬಗ್ಗೆ ಅತಿ ಶೀಘ್ರದಲ್ಲೇ ನಾವು ಹೇಳಿಕೆಗಳನ್ನು ಪಡೆದು ಸಂಪೂರ್ಣ ತನಿಖಾ ವರದಿಯನ್ನು ಸಿದ್ಧಪಡಿಸಿ ಮಹಿಳಾ ಆಯೋಗದ ಅಧ್ಯಕ್ಷರಿಗೆ ಕಳುಹಿಸುತ್ತೇವೆ ಎಂದು ಕಾರ್ತಿಕ್ ರೆಡ್ಡಿ ತಿಳಿಸಿದರು.
16ಕೆಆರ್ ಎಂಎನ್ 1.ಜೆಪಿಜಿರಾಮನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ.