ಶಿವಮೊಗ್ಗದಲ್ಲಿ ಬಿಜೆಪಿಯಿಂದ ಸಂಭ್ರಮ

KannadaprabhaNewsNetwork |  
Published : Nov 15, 2025, 01:15 AM IST
ಪೋಟೋ: 14ಎಸ್‌ಎಂಜಿಕೆಪಿ12 | Kannada Prabha

ಸಾರಾಂಶ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭಾರಿ ಬಹುಮತಗಳೊಂದಿಗೆ ಪ್ರಚಂಡ ವಿಜಯ ಸಾಧಿಸಿದ್ದು, ಶುಕ್ರವಾರ ಶಿವಮೊಗ್ಗ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಭಾರಿ ಬಹುಮತಗಳೊಂದಿಗೆ ಪ್ರಚಂಡ ವಿಜಯ ಸಾಧಿಸಿದ್ದು, ಶುಕ್ರವಾರ ಶಿವಮೊಗ್ಗ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಆಚರಿಸಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿ ಎದುರು ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ವಿತರಿಸಿ ಸಂಭ್ರಮಾಚರಣೆ ಆಚರಿಸಿದರು. ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ಜಗದೀಶ್‌, ಶಾಸಕ ಎಸ್‌.ಎನ್‌.ಚನ್ನಬಸಪ್ಪ, ವಿಧಾನ ಪರಿಷತ್‌ ಸದಸ್ಯ ಡಾ.ಧನಂಜಯ್‌ ಸರ್ಜಿ ಸೇರಿದಂತೆ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

ಬಿಹಾರದಲ್ಲಿ ನಿರೀಕ್ಷೆಗೆ ಮೀರಿದ ಫಲಿತಾಂಶ: ಬಿ.ಎಸ್ ಯಡಿಯೂರಪ್ಪ

ಕನ್ನಡಪ್ರಭ ವಾರ್ತೆ ಶಿವಮೊಗ್ಗ ಬಿಹಾರದಲ್ಲಿ ದೊಡ್ಡ ಸಂಖ್ಯೆಯ ಸ್ಥಾನಗಳನ್ನು ಗೆಲ್ಲುತ್ತೇವೆ ಎಂಬ ನಿರೀಕ್ಷೆ ಇತ್ತು. ಆದರೆ ಇಷ್ಟು ದೊಡ್ಡ ಮಟ್ಟಿಗೆ ಸ್ಥಾನಗಳನ್ನು ಗಳಿಸುತ್ತೇವೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದರು.ಶಿವಮೊಗ್ಗದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಎನ್‌ಡಿಎ 200 ಕ್ಕಿಂತಲು ಹೆಚ್ಚು ಸ್ಥಾನ ಗೆದ್ದಿದೆ. ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಅವರ ನೇತೃತ್ವದ, ನಿತೀಶ್ ಕುಮಾರ್ ಅವರ ನಾಯತ್ವವನ್ನು ಜನರು ಮಚ್ಚಿದ್ದಾರೆ ಎಂದರು. ಮುಂಬರುವ ದಿನಗಳಲ್ಲಿ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲೂ ದೊಡ್ಡ ಸಾಧನೆ ಮಾಡಲಿದೆ. ಕರ್ನಾಟಕದಲ್ಲಿ ಇದೇ ರೀತಿ ದೊಡ್ಡ ಗೆಲುವನ್ನು ಕಾಣಬೇಕು ಎಂದು ಕೆಲಸ ಮಾಡುತ್ತಿದ್ದೇವೆ. ನಮ್ಮ ಪ್ರಯತ್ನವನ್ನು ನಾವು ಮುಂದುವರಿಸುತ್ತಿದ್ದೇವೆ ಎಂದರು.ಬಿಹಾರದಲ್ಲಿ ಸಿಎಂ ಆಯ್ಕೆ ವಿಚಾರದಲ್ಲಿ ಅಮಿತ್ ಶಾ ಹಾಗೂ ನರೇಂದ್ರ ಮೋದಿಯವರ ನಿರ್ಧಾರವೇ ಅಂತಿಮ. ಈ ವಿಚಾರದಲ್ಲಿ ನಾನು ತಲೆ ಹಾಕುವುದಿಲ್ಲ. ರಾಜ್ಯ ರಾಜಕಾರಣದ ಬಗ್ಗೆ ನಾನೂ ಈಗ ಮಾತನಾಡುವುದಿಲ್ಲ. ಕಬ್ಬು ಬೆಳೆಗಾರರ ವಿಚಾರದಲ್ಲಿ ಒಂದು ನಿರ್ಧಾರಕ್ಕೆ ಬರುತ್ತಿದ್ದೇವೆ.ಎಲ್ಲ ಸಮಸ್ಯೆಗಳು ಪರಿಹಾರ ಆಗಲಿದೆ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ನಟಿ ಆತ್ಮ*ತ್ಯೆಗೆ ಸರ್ಕಾರಿ ನೌಕರಿಗೆ ಸೇರುವಂತೆ ಕುಟುಂಬ ಒತ್ತಡ ಕಾರಣ?
ನಮ್ಮವರಿಗೆ ಇಲ್ಲದ ಪರಿಹಾರ ಅವರಿಗೆ ಏಕೆ : ಬಿಜೆಪಿ ಆಕ್ರೋಶ