ಬಿಹಾರ ಫಲಿತಾಂಶ ಬಿಜೆಪಿ ಪರ ಜನತೆ ಸ್ಪಷ್ಟ ಸಂದೇಶ: ಕುತ್ಯಾರು ನವೀನ್‌ ಶೆಟ್ಟಿ

KannadaprabhaNewsNetwork |  
Published : Nov 15, 2025, 02:45 AM IST
14ಬಿಜೆಪಿಬಿಹಾರದ ವಿಜಯ ಪ್ರಯುಕ್ತ ಜಿಲ್ಲಾ ಬಿಜೆಪಿಯಿಂದ ಸಂಭ್ರಮಾಚರಣೆ ನಡೆಯಿತು | Kannada Prabha

ಸಾರಾಂಶ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭೂತಪೂರ್ವ ಗೆಲವಿನ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಶುಕ್ರವಾರ ಸಂಭ್ರಮಾಚರಣೆ ನಡೆಯಿತು.

ಉಡುಪಿ: ಕಾಂಗ್ರೆಸ್ಸಿನ ನಿರಂತರ ಅಪಪ್ರಚಾರದ ನಡುವೆಯೂ ಬಿಹಾರ ಚುನಾವಣಾ ಫಲಿತಾಂಶ ಬಿಜೆಪಿ ನೇತೃತ್ವಕ್ಕೆ ದೇಶದ ಜನರ ಬೆಂಬಲದ ಸ್ಪಷ್ಟ ಸಂದೇಶ ನೀಡಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭೂತಪೂರ್ವ ಗೆಲವಿನ ಹಿನ್ನೆಲೆಯಲ್ಲಿ ಜಿಲ್ಲಾ ಬಿಜೆಪಿ ವತಿಯಿಂದ ಸಂಭ್ರಮಾಚರಣೆಯ ನೇತೃತ್ವ ವಹಿಸಿ ಅವರು ಮಾತನಾಡಿದರು.

ನಿರೀಕ್ಷೆಯoತೆಯೇ ಬಿಹಾರ ಚುನಾವಣೆಯಲ್ಲಿ ಎನ್‌ಡಿಎಗೆ ಸಿಕ್ಕ ಅಭೂತಪೂರ್ವ ಫಲಿತಾಂಶ ಪ್ರಜಾಪ್ರಭುತ್ವದ ಗೆಲವಾಗಿದೆ. ಕಾಂಗ್ರೆಸ್ಸಿನ ಷಡ್ಯಂತ್ರದ ಭಾಗವಾದ ವೋಟ್ ಚೋರ್ ಅಭಿಯಾನಕ್ಕೂ ಕಿಂಚಿತ್ತೂ ಬೆಲೆ ಕೊಡದೇ ಬಿಹಾರದ ಮತದಾರರು ಎನ್‌ಡಿಎ ಅಭ್ಯರ್ಥಿಗಳನ್ನು ಭರ್ಜರಿ ಮತಗಳಿಂದ ಗೆಲ್ಲಿಸಿದ್ದಾರೆ. ಕಾಂಗ್ರೆಸ್ಸಿನ ಸುಳ್ಳು, ಅಪ್ರಚಾರಗಳೆಲ್ಲವೂ ಅಂತ್ಯ ಕಂಡಿದೆ. ಈ ಜನಾದೇಶದಿಂದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಇನ್ನಾದರೂ ಬುದ್ಧಿವಂತ ರಾಜಕಾರಿಣಿ ಆಗಬೇಕಾದ ಅಗತ್ಯವಿದೆ ಎಂದು ಕುತ್ಯಾರು ತಿಳಿಸಿದರು.ಬಿಜೆಪಿ ಜಿಲ್ಲಾ ಕಚೇರಿಯ ಮುಂಭಾಗದಲ್ಲಿ ಸಿಹಿ ಹಂಚಿ ಸಂಭ್ರಮಾಚರಣೆ ನಡೆಸಲಾಯಿತು. ಬಿಜೆಪಿ ಹಾಗೂ ಪ್ರಧಾನಿ ಮೋದಿ ಪರ ಘೋಷಣೆ ಕೂಗಿ, ಜೈಕಾರ ಮೊಳಗಿಸಿದರು.ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಮುಖಂಡರಾದ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಸತ್ಯಾನಂದ ನಾಯಕ್, ಪ್ರಭಾಕರ ಪೂಜಾರಿ, ಶ್ರೀನಿಧಿ ಹೆಗ್ಡೆ, ಗಿರೀಶ್ ಎಂ. ಅಂಚನ್, ಶಿವಕುಮಾರ್ ಅಂಬಲಪಾಡಿ, ಅನಿತಾ ಶ್ರೀಧರ್, ದಿನೇಶ್ ಅಮೀನ್, ರತ್ನಾಕರ ಇಂದ್ರಾಳಿ, ಪ್ರಥ್ವಿರಾಜ್ ಶೆಟ್ಟಿ ಬಿಲ್ಲಾಡಿ, ಸಂಧ್ಯಾ ರಮೇಶ್, ಸುಜಾಲಾ ಸತೀಶ್, ವಿದ್ಯಾ ಶ್ಯಾಮಸುಂದರ್, ಬಾಲಕೃಷ್ಣ ಶೆಟ್ಟಿ, ಹರೀಶ್ ಶೆಟ್ಟಿ, ಗಿರಿಧರ್ ಆಚಾರ್ಯ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ